ಸೆ.23ರ ತನಕ ಚಿಕ್ಕಮಗಳೂರು, ಉಡುಪಿ ಭಾಗದಲ್ಲಿ ಜೋರು ಮಳೆ : ಬೇರೆ ಜಿಲ್ಲೆಯಲ್ಲಿ ಹೇಗಿರಲಿದೆ..?

Facebook
Twitter
Telegram
WhatsApp

ಬೆಂಗಳೂರು: ಮುಂಗಾರು ಮಳೆ ಹೇಳುವುದಕ್ಕೆ ಹೆಸರಿಲ್ಲದಂತೆ ಕಾಣೆಯಾಗಿದೆ. ಮೊನ್ನೆ ಮೊನ್ನೆಯಷ್ಟೇ ಮಳೆ ಬಂದಂತೆ ಆಯಿತು, ಆದರೆ ಮತ್ತೆ ನಾಪತ್ತೆಯಾಗಿದೆ. ಈಗಾಗಲೇ ರಾಜ್ಯ ಸರ್ಕಾರ ಕೂಡ ಹಲವು ತಾಲೂಕುಗಳನ್ನು ಬರ ಪೀಡಿತ ಪ್ರದೇಶ ಎಂದು ಘೋಷಣೆ ಮಾಡಿದೆ. ಈ ನಡುವೆ ಅಲ್ಲೊಮ್ಮೆ ಇಲ್ಲೊಮ್ಮೆ ಮಳೆ ದರ್ಶನ ಕೊಟ್ಟು ಕೊಟ್ಟು ಹೋಗುತ್ತಿದೆ. ಹವಮಾನ ಇಲಾಖೆಯ ಮಾಹಿತಿ ಪ್ರಕಾರ, ಸೆಪ್ಟೆಂಬರ್ 23ರ ತನಕ ಕೆಲವು ಜಿಲ್ಲೆಗಳಲ್ಲಿ ಮಳೆ ಬರಲಿದೆ.

 

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು ಭಾಗದಲ್ಲಿ ಮಳೆಯ ಪ್ರಮಾಣ ಜೋರಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸೆಪ್ಟೆಂಬರ್23 ರ ತನಕ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ನಿನ್ನೆ ಚಿತ್ರದುರ್ಗ, ದಾವಣಗೆರೆ ಸೇರಿದಂತೆ ಹಲವೆಡೆ ಸಾಧಾರಣ ಮಳೆಯಾಗಿದೆ‌.

ಕರಾವಳಿ ಭಾಗದಲ್ಲಿ ಮುಂದಿನ 24 ಗಂಟೆಯಲ್ಲಿ ಬಿರುಗಾಳಿ ಸಹಿತ ಜೋರು ಮಳೆಯಾಗಲಿದೆ ಎಂಬ ಮಾಹಿತಿಯನ್ನು ಹವಮಾನ ಇಲಾಖೆ ನೀಡಿದೆ. ಹೀಗಾಗಿ ಮೀನುಗಾರರಿಗೆ ಎಚ್ಚರಿಕೆಯನ್ನು ನೀಡಲಾಗಿದೆ. ಬೆಂಗಳೂರು ಭಾಗದಲ್ಲಿ ಮೋಡ ಕವಿದ ವಾತಾವರಣ ಕಂಡು ಬಂದಿದೆ. ಹೀಗಾಗಿ ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆಯೂ ಇದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ನಾಳೆ ಬೆಂಗಳೂರು ಬಂದ್ ಏನಿರುತ್ತೆ..? ಏನಿರಲ್ಲ..?

  ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ, ನಾಳೆ ಬೆಂಗಳೂರು ಬಂದ್ ಮಾಡಲು ರೈತ ಸಂಘಟನೆ, ಬಿಜೆಪಿ ನಾಯಕರು, ಕನ್ನಡಪರ ಸಂಘಟನೆ, ಜೆಡಿಎಸ್ ನಾಯಕರು ಸೇರಿದಂತೆ ಹಲವು ಸಂಘಟನೆಗಳು ನಿರ್ಧರಿಸಿವೆ. ಈಗಾಗಲೇ ಮಂಡ್ಯ

ವಯನಾಡ್ ಬದಲಿಗೆ ಹೈದರಾಬಾದ್ ನಿಂದ ಸ್ಪರ್ಧಿಸುವಂತೆ ರಾಹುಲ್ ಗಾಂಧಿಗೆ ಎಂಐಎಂ ನಾಯಕ ಅಸಾದುದ್ದೀನ್ ಓವೈಸಿ ಸವಾಲು

  ಸುದ್ದಿಒನ್, ಹೈದರಾಬಾದ್ : ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ವಯನಾಡ್ ಬದಲಿಗೆ ಹೈದರಾಬಾದ್ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಎಂಐಎಂ ನಾಯಕ ಅಸಾದುದ್ದೀನ್ ಓವೈಸಿ ಸವಾಲು ಹಾಕಿದ್ದಾರೆ. ದೊಡ್ಡ ದೊಡ್ಡ

ಕುಂಚಿಟಿಗ ಜಾತಿಯನ್ನು ಕೇಂದ್ರ ಒಬಿಸಿ ಪಟ್ಟಿಗೆ ಸೇರಿಸಲು ಶಿಫಾರಸು : ರಾಜ್ಯ ಸರ್ಕಾರ ಸೇರಿದಂತೆ ಸಹಕರಿಸಿದ ಸರ್ವರಿಗೂ ಕೃತಜ್ಞತೆ ಸಲ್ಲಿಸಿದ ಶ್ರೀ ಶಾಂತವೀರ ಮಹಾಸ್ವಾಮೀಜಿ

  ಸುದ್ದಿಒನ್, ಹೊಸದುರ್ಗ : ಕುಂಚಿಟಿಗ ಸಮಾಜದ  ಸಂಘಟನೆ ಸಂಸ್ಕಾರ ಸಾಮಾಜಿಕ ನ್ಯಾಯವನ್ನು ಮೀಸಲಾತಿ ಸೌಲಭ್ಯ ಕಲ್ಪಿಸುವ ಸಕಾರಾತ್ಮಕ ಸಂಕಲ್ಪದೊಂದಿಗೆ 1990 ರಿಂದ ಶ್ರೀ ಸಂಗಮೇಶ್ವರ ಜಯಂತ್ಯೋತ್ಸವ ಹಾಗೂ ಕುಂಚಿಟಿಗ ಸಮಾವೇಶ ನಡೆಸುತ್ತ ನಿರಂತರ

error: Content is protected !!