ಸುದ್ದಿಒನ್,ಬೆಂಗಳೂರು,ಮೇ.17: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಭಾರಿ ಮಳೆ ಹಾಗೂ ಬಿರುಗಾಳಿ ಸಹಿತ ಗುಡುಗು ಸಿಡಿಲು ಸಂಭವಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಕೊಡಗು, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಮೈಸೂರು ಹಾಗೂ ಚಾಮರಾಜನಗರದ ಒಂದೆರಡು ಕಡೆಗಳಲ್ಲಿ ಗಂಟೆಗೆ 40 ರಿಂದ 50 ಕಿ.ಮೀ ವೇಗದ ಬಲವಾದ ಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಈ ಭಾಗದಲ್ಲಿ ಜೂನ್ 19ರವರೆಗೆ ಭಾರಿ ಮಳೆಯ ಎಚ್ಚರಿಕೆ ನೀಡಲಾಗಿದ್ದು, ಒಂದೆರಡು ಕಡೆಗಳಲ್ಲಿ ಆಲಿಕಲ್ಲು ಮಳೆಯೂ ಆಗಬಹುದು ಎಂದು ಅಂದಾಜಿಸಲಾಗಿದೆ. ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ರಾಮನಗರ, ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಗಂಟೆಗೆ 40-50 ಕಿ.ಮೀ ವೇಗದ ಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮುಂದಿನ ದಿನಗಳಲ್ಲಿ ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ 30-40 ಕಿ.ಮೀ ವೇಗದ ಗಾಳಿಯೊಂದಿಗೆ ಸಾಧಾರಣ ಮಳೆಯಾಗಲಿದೆ. ಇನ್ನುಳಿದ ಜಿಲ್ಲೆಗಳಲ್ಲಿ ಒಣ ಹವಾಮಾನ ಇರಲಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.








