Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಸಂಜೆ ವೇಳೆಗೆ ಸಿಲಿಕಾನ್ ಸಿಟಿಯಲ್ಲಿ ಜೋರು ಮಳೆ : ಹವಮಾನ ಇಲಾಖೆಯಿಂದ ಮಳೆ ವರದಿ

---Advertisement---

 

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಸಂಜೆ ವೇಳೆಗೆ ಜೋರು ಮಳೆ ಬಂದಿದೆ. ಇದರಿಂದ ದ್ವಿಚಕ್ರ ಸವಾರರ ಪಾಡು ಪರದಾಡುವಂತಾಗಿದೆ‌. ಆಗ ತಾನೇ ಕಚೇರಿ ಬಿಡುವವರಿಗೆ ಬೇಸರ ಕಾಡಿದೆ. ಮಳೆಯಿಂದಾಗಿ ಮನೆಗೆ ಹೋಗುವವರ ಪರಿಸ್ಥಿತಿಯೂ ಸಂಕಷ್ಟಕ್ಕೆ ಸಿಲುಕಿತ್ತು. ನಿನ್ನೆಯೆಲ್ಲ ಹವಮಾನ‌ಇಲಾಖೆ ನೀಡಿದ ವರದಿಯಲ್ಲಿ ಸಿಲಿಕಾನ್ ಸಿಟಿಗೆ ಯಾವುದೇ ರೀತಿಯ ಅಲರ್ಟ್ ನೀಡಿರಲಿಲ್ಲ. ಆದರೆ ಇಂದು ಸುರಿದ ಮಳೆಗೆ ಹವಮಾನ ಇಲಾಖೆ ಯೆಲ್ಲೋ ಅಲರ್ಟ್ ನೀಡಿದೆ. ಸಿಲಿಕಾನ್ ಸಿಟಿಯ ಎಲ್ಲಾ ಏರಿಯಾಗಳಲ್ಲೂ ಜೋರು ಮಳೆ ಬಂದಿದೆ.

ಇನ್ನು ಬೆಂಗಳೂರು ನಗರ ಮಾತ್ರವಲ್ಲ, ಬೆಂಗಳೂರು ಗ್ರಾಮಾಂತರ, ರಾಮನಗರ, ಮೈಸೂರು, ಮಂಡ್ಯ, ಚಿಕ್ಕಮಗಳೂರು, ಹಾಸನ, ಕೊಡಗು, ಚಾಮರಾಜನಗರ, ದಕ್ಷಿಣ ಕನ್ನಡ ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಮುಂದಿನ ಆರು ದಿನಗಳ ಕಾಲ ರಾಜ್ಯದಲ್ಲಿ ಜೋರು ಮಳೆಯಾಗುವ ಸೂಚನೆ ನೀಡಿದೆ ಹವಮಾನ ಇಲಾಖೆ.

ಅದರಲ್ಲೂ ಉತ್ತರ ಭಾಗದ ಬಂಗಾಳ ಉಪಸಾಗರದಲ್ಲಿ ನಾಳೆ ವಾಯುಭಾರ ಕುಸಿತವಾವುವ ಕಾರಣ ಕರಾವಳಿ ಭಾಗದಲ್ಲಿ ಭಾಗದಲ್ಲಿ ವ್ಯಾಪಕ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಅಷ್ಟೊಂದು ಪರಿಣಾಕಾರಿಯಾಗಿ ಬೀರುವುದ. ಈ ಹಿನ್ನೆಲೆ ಸಣ್ಣ ಪ್ರಮಾಣದ ಮಳೆ ಸುರಿಯಲಿದೆ. ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಭರ್ಜರಿ ಮಳೆಯಾಗುವ ಸಾಧ್ಯತೆ ಇದೆ. ಬಂಗಾಳ ಕೊಲ್ಲಿಯ ಉಪಸಾಗರದಲ್ಲಿ ಮಳೆಯಾಗುತ್ತಿರುವ ಕಾರಣ ರಾಜ್ಯದಲ್ಲೂ ಜೋರು ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಸೂಚನೆಯನ್ನ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗೂ ಜೋರು ಮಳೆಯಾಗಲಿದೆ ಎಂದು ವರದಿ‌ ನೀಡಿದೆ. ಉತ್ತರ ಕರ್ನಾಟಕದ ಕೆಲ ಭಾಗದಲ್ಲಿ‌ ಮಳೆ ಹೆಚ್ಚಾಗಿ ಬೀಳಲಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...