ಬೆಂಗಳೂರು: ಈಗಾಗಲೇ ಸುರಿದ ಭಾರಿ ಮಳೆಗೆ ಎಲ್ಲೆಡೆ ಕೆರೆ ಕೋಡಿ ಬಿದ್ದಿದೆ, ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿವೆ. ಜನ ಜೀವನ ಅಸ್ತವ್ಯಸ್ತವಾಗಿದೆ. ಈ ಮಧ್ಯೆ ಇನ್ನೂ ಮೂರು ನಾಲ್ಕು ದಿನ ರಾಜ್ಯಾದ್ಯಂತ ಭಾರಿ ಮಳೆಯಾಗಿವ ಸೂಚನೆಯನ್ನು ಹವಮಾನ ಇಲಾಖೆ ನೀಡಿದೆ. ಜೊತೆಗೆ ಜನರಿಗೆ ಎಚ್ಚರದಿಂದ ಇರಲು ಸೂಚನೆ ನೀಡಿದೆ.
ಮಳೆಯಿಂದಾಗಿ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಜಾರಿಮಾಡಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡಕ್ಕೆ, ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಾಮರಾಜನಗರ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಮಂಡ್ಯ, ದಾವಣಗೆರೆ, ರಾಮನಗರ, ತುಮಕೂರಿಗೆ ಯೆಲ್ಲೋ ಅಲರ್ಟ್ ಜಾರಿಮಾಡಲಾಗಿದೆ. ನಾಲ್ಕು ದಿನಗಳ ಕಾಲ ಈ ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್ ಇರಲಿದೆ.
ಬೆಳಗಾವಿ, ಗದಗ, ಧಾರವಾಡ, ಹಾವೇರಿಗೆ ಇಂದು ಯೆಲ್ಲೋ ಅಲರ್ಟ್ ಜಾರಿಯಾಗಿದೆ. ಧಾರವಾಡ, ಗದಗ, ಹಾವೇರಿ, ಕಲಬುರಗಿಗ, ಬೆಳಗಾವಿ, ಧಾರವಾಡ, ಹಾವೇರಿಗೆ ಯೆಲ್ಲೋ ಅಲರ್ಟ್ ಜಾರಿಯಾಗಿದೆ.