Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರಾಜ್ಯಾದ್ಯಂತ ಮುಂದಿನ 10 ದಿನಗಳು ಭಾರೀ ಮಳೆ ಸಾಧ್ಯತೆ..!

Facebook
Twitter
Telegram
WhatsApp

 

ಬೆಂಗಳೂರು: ಮುಂಗಾರು ಮಳೆ ಇಷ್ಟೊತ್ತಿಗೆ ಜೋರಾಗಿಯೇ ಬರಬೇಕಿತ್ತು. ಆದರೆ ಆರಂಭದಲ್ಲಿ ಸ್ವಲ್ಪ ತಡವಾಗಿದೆ. ಇದೀಗ ಹವಮಾನ ಇಲಾಖೆ ನೀಡಿದ ಸೂಚನೆಯಂತೆ ಮುಂದಿನ ಹತ್ತು ದಿನಗಳಲ್ಲಿ ರಾಜ್ಯದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಹೈಅಲರ್ಟ್ ಕೂಡ ಘೋಷಣೆ ಮಾಡಲಾಗಿದೆ.

ದಕ್ಷಿಣ ಕನ್ನಡ ಹಾಗೂ ಉಡುಪಿ ಭಾಗದಲ್ಲಿ ಹೆಚ್ಚು ಮಳೆಯಾಗಲಿದೆ ಎಂದು ಸೂಚನೆ ನೀಡಿದೆ. ಕರಾವಳಿ ಜಿಲ್ಲೆಯಲ್ಲಿ ಮಾತ್ರ 64 ಮಿಲಿ ಮೀಟರ್​​​ ಮಳೆ ಸುರಿಯಲಿದೆ ಎಂದು ಹೇಳಿದೆ. ಬೆಂಗಳೂರು, ಕೋಲಾರ, ಮೈಸೂರು, ಕೊಡಗು, ಶಿವಮೊಗ್ಗ ಸೇರಿದಂತೆ ಉತ್ತರ ಕರ್ನಾಟಕದಲ್ಲೂ ಗುಡುಗು ಸಹಿತ ಮಳೆ ಆಗುವ ಸಂಭವವಿದೆ. ಇಡೀ ರಾಜ್ಯಾದ್ಯಂತ ಅತೀ ಹೆಚ್ಚು ಎಂದರೆ 244.4 ಮಿಲಿ ಮೀಟರ್ ಮಳೆ ಬೀಳಲಿದೆ.

ಹೊರಗೆ ಹೋಗುವಾಗ ಮುಂಜಾಗ್ರತ ಕ್ರಮ ಕೈಗೊಳ್ಳಬೇಕು, ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂಗಾರು ಮಳೆ ಚೆನ್ನಾಗಿ ಆಗಲಿ ಎಂದು ರೈತರು ಬೇಡಿಕೊಳ್ಳುತ್ತಿದ್ದಾರೆ. ಕೃಷಿ ಚಟುವಟಿಕೆಗಳಿಗಾಗಿ‌ ಕಾಯುತ್ತಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಛಾಯಾ ಟೈಲರ್ ರಮೇಶ್ ನಿಧನ

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 25 : ನಗರದ ಲಕ್ಷ್ಮೀ ಬಜಾರ್‌ನಲ್ಲಿರುವ ಛಾಯಾ ಟೈಲರ್ ಅಂಗಡಿ ಮಾಲೀಕ ರಮೇಶ್ (52) ಗುರುವಾರ ರಾತ್ರಿ ಹೃದಯಾಘಾತದಿಂದ ನಿಧನರಾದರು. ಮೃತರು ಪತ್ನಿ, ಪುತ್ರ, ಪುತ್ರಿ ಇದ್ದಾರೆ. ಸ್ವಗ್ರಾಮ ಹೊಸದುರ್ಗ

ಇಂದಿನಿಂದ ಹಾಸನಾಂಬೆಯ ದರ್ಶನ ಭಾಗ್ಯ : ಕ್ಯೂ ನಿಂತ ಭಕ್ತರು

  ಹಾಸನ: ವರ್ಷಕ್ಕೆ ಒಮ್ಮೆ ಬಾಗಿಲು ತೆಗೆಯುವ ದೇವಿ ಹಾಸನಾಂಬೆ. ಇದೀಗ ಮತ್ತೆ ಆ ದಿನ ಬಂದಿದೆ. ಹಾಸನಾಂಬೆಯ ಬಾಗಿಲು ತೆಗೆಯಲಾಗಿದೆ. ನಿನ್ನೆಯೇ ಹಾಸನಾಂಬೆಯ ಬಾಗಿಲು ತೆಗೆದಿದ್ದು, ಇಂದಿನಿಂದ ಸಾರ್ವಜನಿಕರಿಗೆ ಅವಕಾಶ ನೀಡಲಾಗಿದೆ. ರಾತ್ರಿಯಿಂದಾನೇ

ಕಾಂಗ್ರೆಸ್ ಪಕ್ಷ ಮುಳುಗುತ್ತಿರುವ ಹಡಗು : ಛಲವಾದಿ ನಾರಾಯಣಸ್ವಾಮಿ

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 25 : ಎಸ್ ಟಿ ಸೋಮಶೇಖರ್ ಬಿಜೆಪಿಯಿಂದ ಹೊರಗೆ ನಿಂತಿದ್ದಾರೆ. ಬಿಜೆಪಿ ಶಾಸಕರು ಯಾರೂ ಅಷ್ಟು ದಡ್ಡತನ ಮಾಡುವುದಿಲ್ಲ. ಈಗ ರಾಜ್ಯದಲ್ಲಿ ಮುಳುಗುತ್ತಿರುವ ಹಡಗು ಕಾಂಗ್ರೆಸ್ ಪಕ್ಷ ಎಂದು ಬಿಜೆಪಿ

error: Content is protected !!