Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಜ್ಯಾದ್ಯಂತ ನಾಳೆಯಿಂದ ಭಾರಿ ಮಳೆ ಸಾಧ್ಯತೆ : ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

---Advertisement---

ಸುದ್ದಿಒನ್,ಬೆಂಗಳೂರು,ಜೂನ್.2: ರಾಜ್ಯದಾದ್ಯಂತ ಮುಂದಿನ ಕೆಲವು ದಿನಗಳ ಕಾಲ ವ್ಯಾಪಕ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ (IMD) ನೀಡಿದೆ. ಕರಾವಳಿ ಮತ್ತು ಒಳನಾಡು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆಯು ‘ಯೆಲ್ಲೋ ಅಲರ್ಟ್’ ಘೋಷಿಸಿದ್ದು, ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಿದೆ.

ಎಲ್ಲೆಲ್ಲಿ ಎಷ್ಟು ಮಳೆ?

ಕರಾವಳಿ ಜಿಲ್ಲೆಗಳು: ಜೂನ್ 3 ರಿಂದ ಜೂನ್ 5 ರವರೆಗೆ ಕರಾವಳಿಯ ಕೆಲವು ಭಾಗಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ಒಳನಾಡು ಜಿಲ್ಲೆಗಳು: ಜೂನ್ 1 ರಿಂದ ಜೂನ್ 4 ರವರೆಗೆ ಒಳನಾಡಿನ ಒಂದೆರಡು ಸ್ಥಳಗಳಲ್ಲಿ 64.5mm ನಿಂದ 115.5mm ವರೆಗೆ ಭಾರಿ ಮಳೆಯಾಗುವ ಮುನ್ಸೂಚನೆ ಇದೆ.

ಇಂದಿನಿಂದ (ಜೂನ್ 2) ಜೂನ್ 4 ರ ವರೆಗೆ ಅಲ್ಲಲ್ಲಿ ಅಲ್ಪ ಹಾಗೂ ಮಧ್ಯಮ ಗಾಳಿ ಸಹಿತ ಮಳೆಯಾಗಲಿದ್ದು, ಜೂನ್ 5 ರಂದು ಜಿಲ್ಲೆಯ ಬಹುತೇಕ ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಸಿಕ್ಕಿದೆ.

ಮುಂಜಾಗ್ರತಾ ಕ್ರಮವಾಗಿ ಜೂನ್ 1 ರಿಂದ ಜಾರಿಗೆ ಬರುವಂತೆ, ಮಳೆಗಾಲ ಮುಗಿಯುವ ವರೆಗೆ ಕಡಲ ತೀರಗಳಿಗೆ (ಬೀಚ್ಗಳಿಗೆ) ಭೇಟಿ ನೀಡದಂತೆ ಪ್ರವಾಸಿಗರಿಗೆ ಕಟ್ಟುನಿಟ್ಟಿನ ನಿರ್ಬಂಧ ಹೇರಲಾಗಿದೆ. ಅಪಾಯಕಾರಿ ಜಾಗಗಳಿಗೆ ತೆರಳದಂತೆ ಹಾಗೂ ಹವಾಮಾನ ಇಲಾಖೆಯ ಸೂಚನೆಗಳನ್ನು ಪಾಲಿಸುವಂತೆ ಸಾರ್ವಜನಿಕರಲ್ಲಿ ಕೋರಲಾಗಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

Join WhatsApp

Join Now

Join Telegram

Join Now