Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕರ್ನಾಟಕದಲ್ಲಿ ಮುಂದಿನ 5 ದಿನ ಭಾರೀ ಮಳೆ ಸಾಧ್ಯತೆ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್, ಬಿರುಗಾಳಿ ಎಚ್ಚರಿಕೆ

---Advertisement---

ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಕೆಲ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಬಿರುಗಾಳಿ ಸಹಿತ ಮಳೆಯ ಎಚ್ಚರಿಕೆಯನ್ನೂ ನೀಡಲಾಗಿದೆ.ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮಾಹಿತಿ ಪ್ರಕಾರ, ಕೆಲ ಪ್ರದೇಶಗಳಲ್ಲಿ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆ ಇದ್ದು, ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ಜೂನ್ 17ರಿಂದ 20ರವರೆಗೆ ಮಳೆ ಮುನ್ಸೂಚನೆ
ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ, ಹಾಗೆಯೇ ದಕ್ಷಿಣ ಒಳನಾಡಿನ ಬೆಂಗಳೂರು, ಮೈಸೂರು, ಕೊಡಗು, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಇದರ ಜೊತೆಗೆ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯೂ ಇದೆ.

ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಈ ಜಿಲ್ಲೆಗಳಲ್ಲಿ ಗುಡುಗು-ಮಿಂಚು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.
ಮತ್ತೊಂದೆಡೆ, ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳು ಹಸಿರು ವಲಯದಲ್ಲಿದ್ದು, ಯಾವುದೇ ವಿಶೇಷ ಎಚ್ಚರಿಕೆ ನೀಡಲಾಗಿಲ್ಲ.

ಜೂನ್ 21 ಮತ್ತು 22ರಂದು ಕೂಡ ಮಳೆ ಮುಂದುವರಿಕೆ
ಜೂನ್ 21 ಮತ್ತು 22ರಂದು ಕೂಡ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆಯ ಆರ್ಭಟ ಮುಂದುವರಿಯುವ ಸಾಧ್ಯತೆ ಇದೆ. ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗಗಳಲ್ಲಿ ಸಹ ಹಗುರದಿಂದ ಸಾಧಾರಣ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ಮಳೆ ಮತ್ತು ಬಿರುಗಾಳಿ ಹಿನ್ನೆಲೆಯಲ್ಲಿ ರೈತರು, ವಾಹನ ಸವಾರರು ಹಾಗೂ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now