Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಜ್ಯದಲ್ಲಿ ಮೂರು ದಿನ ಭಾರಿ ಮಳೆ ಸಾಧ್ಯತೆ ; ಹವಾಮಾನ ಇಲಾಖೆ ಮುನ್ಸೂಚನೆ

---Advertisement---

ಬೆಂಗಳೂರು.ಜುಲೈ.30: ರಾಜ್ಯದಲ್ಲಿ ಮುಂದಿನ ಕೆಲ ದಿನಗಳ ಕಾಲ ವಿವಿಧ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ವಿಶೇ‍ಷವಾಗಿ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಭಾಗಗಳಲ್ಲಿ ವರುಣನ ಆರ್ಭಟ ಹೆಚ್ಚಿರಲಿದೆ.ಜುಲೈ ಅಂತ್ಯದಿಂದ ಆಗಸ್ಟ್ ಮೊದಲ ವಾರದವರೆಗೆ ರಾಜ್ಯದಾದ್ಯಂತ ಮಳೆಯ ವಾತಾವರಣ ಮುಂದುವರಿಯಲಿದೆ.

ಕರಾವಳಿ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನಲ್ಲಿ ಜುಲೈ 30 ರಿಂದ ಆಗಸ್ಟ್ 1 ರವರೆಗೆ ಭಾರಿ ಮಳೆಯಾಗುವ ನಿರೀಕ್ಷೆಯಿದೆ. ಮಲೆನಾಡಿನ ಭಾಗಗಳಲ್ಲಿ ಜುಲೈ 30 ಮತ್ತು 31 ರಂದು ಅತ್ಯಂತ ಭಾರಿ ಮಳೆಯಾಗುವ ಮುನ್ಸೂಚನೆಯಿದ್ದು, ಶಿವಮೊಗ್ಗ, ಕೊಡಗು, ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿಯೂ ಸಾಧಾರಣದಿಂದ ಉತ್ತಮ ಮಳೆಯಾಗಲಿದೆ. ಇನ್ನು ಉತ್ತರ ಒಳನಾಡಿನಲ್ಲಿಯೂ ಸಾಧಾರಣ ಮಳೆಯ ಜೊತೆಗೆ ಗಂಟೆಗೆ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯಿದೆ.

ಆಗಸ್ಟ್ 2 ರ ನಂತರ ಮಲೆನಾಡು ಭಾಗದಲ್ಲಿ ಮಳೆಯ ಪ್ರಮಾಣ ಕೊಂಚ ತಗ್ಗುವ ಲಕ್ಷಣಗಳಿವೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ. ಭಾರಿ ಮಳೆ, ಗುಡುಗು ಮತ್ತು ಬಿರುಗಾಳಿಯ ಹಿನ್ನೆಲೆಯಲ್ಲಿ ನದಿ ತೀರ, ತಗ್ಗು ಪ್ರದೇಶ ಹಾಗೂ ಗುಡ್ಡಗಾಡು ಪ್ರದೇಶದ ನಿವಾಸಿಗಳು ಜಾಗರೂಕರಾಗಿರಲು ಸೂಚಿಸಲಾಗಿದೆ. ಮರಗಳು ಧರೆಗುರುಳಿ ಸಂಚಾರಕ್ಕೆ ಅಡಚಣೆಯಾಗುವ ಸಾಧ್ಯತೆಯಿರುವುದರಿಂದ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಆಡಳಿತ ಮಂಡಳಿ ಸಲಹೆ ನೀಡಿದೆ.

Join WhatsApp

Join Now

Join Telegram

Join Now