Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಜ್ಯದಲ್ಲಿ ಜೂ.20ರವರೆಗೆ ಭಾರೀ ಮಳೆ ಸಾಧ್ಯತೆ; ಹವಾಮಾನ ಇಲಾಖೆ ಎಚ್ಚರಿಕೆ

---Advertisement---

ಬೆಂಗಳೂರು: ಕರ್ನಾಟಕದಾದ್ಯಂತ ಜೂನ್ 20ರವರೆಗೆ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

ರಾಜ್ಯದ ಕರಾವಳಿ ಜಿಲ್ಲೆಗಳ ಹಲವೆಡೆ ಅಲ್ಲಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದೆ. ಇನ್ನು ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಹಾಸನ, ಮಂಡ್ಯ, ಮೈಸೂರು, ಚಾಮರಾಜನಗರ ಹಾಗೂ ರಾಮನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.

ಉತ್ತರ ಒಳನಾಡಿನ ಯಾದಗಿರಿ, ಬಾಗಲಕೋಟೆ, ಬೆಳಗಾವಿ, ಹಾವೇರಿ, ಗದಗ, ಬಳ್ಳಾರಿ, ರಾಯಚೂರು, ಬೀದರ್ ಮತ್ತು ಧಾರವಾಡ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಜೂನ್.20ರವರೆಗೆ ಅಲ್ಲಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ರಾಜ್ಯದಾದ್ಯಂತ ಅಲ್ಲಲ್ಲಿ ಗುಡುಗು, ಸಿಡಿಲು ಸಹಿತ ಜೋರಾದ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಮತ್ತು ರೈತರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

Join WhatsApp

Join Now

Join Telegram

Join Now