Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಜ್ಯದಲ್ಲಿ ಮುಂದಿನ 3 ದಿನ ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ

---Advertisement---

ಸುದ್ದಿಒನ್,ಬೆಂಗಳೂರು,ಮೇ.08:ಸುಡುಬಿಸಿಲಿನಿಂದ ಕಂಗಾಲಾಗಿರುವ ರಾಜ್ಯದ ಜನತೆಗೆ ಹವಾಮಾನ ಇಲಾಖೆ ತಂಪಾದ ಸುದ್ದಿಯೊಂದನ್ನು ನೀಡಿದೆ. ಮುಂದಿನ ಮೂರು ದಿನಗಳ ಕಾಲ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಲಾಗಿದೆ.

ಹವಾಮಾನ ಇಲಾಖೆಯ ವರದಿಯ ಪ್ರಕಾರ, ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ 72 ಗಂಟೆಗಳ ಕಾಲ ಮಳೆರಾಯನ ಆರ್ಭಟ ಇರಲಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.

ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಮೈಸೂರು ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಮೇ 8 ಮತ್ತು 9ರಂದು ಗುಡುಗು ಸಹಿತ ಮಳೆಯಾಗಲಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಸದ್ಯ ಗರಿಷ್ಠ ತಾಪಮಾನ ಮುಂದುವರಿಯಲಿದ್ದರೂ, ಕೆಲವು ಭಾಗಗಳಲ್ಲಿ ಮಳೆಯ ಸಿಂಚನವಾಗಲಿದೆ. ವಿಶೇಷವಾಗಿ ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಇಂದು ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕೆ ನೀಡಲಾಗಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

Join WhatsApp

Join Now

Join Telegram

Join Now