ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ವರುಣನ ಆರ್ಭಟ ಮುಂದುವರಿಯಲಿದೆ. ಜೂನ್ 20ರವರೆಗೆ ರಾಜ್ಯಾದ್ಯಂತ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನೈಋತ್ಯ ಮುಂಗಾರು ರಾಜ್ಯದಲ್ಲಿ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಮಳೆಯ ಸಮಯದಲ್ಲಿ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಬಲವಾದ ಗಾಳಿ ಬೀಸಲಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು ಎಂದು ಹವಾಮಾನ ಇಲಾಖೆ ಸೂಚಿಸಿದೆ.
ರಾಜಧಾನಿ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮೋಡ ಕವಿದ ವಾತಾವರಣವಿರಲಿದ್ದು, ಸಂಜೆ ಅಥವಾ ರಾತ್ರಿಯ ವೇಳೆಗೆ ಗುಡುಗು ಸಹಿತ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬಿರುಗಾಳಿಯ ಆರ್ಭಟ ಇರಲಿರುವುದರಿಂದ ವಾಹನ ಸವಾರರು ಹಾಗೂ ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸುವಂತೆ ಕೋರಲಾಗಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಮಲೆನಾಡು ಭಾಗದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇದರೊಂದಿಗೆ ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಚಾಮರಾಜನಗರ ಹಾಗೂ ತುಮಕೂರು ಜಿಲ್ಲೆಗಳಲ್ಲೂ ಉತ್ತಮ ಮಳೆಯಾಗುವ ಸಾಧ್ಯತೆಯಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.












