Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗದಲ್ಲಿ ಅತಿಯಾದ ಮಳೆ: ಜಿಲ್ಲೆಯಲ್ಲಿ 184.16 ಹೆಕ್ಟೇರ್ ಪ್ರದೇಶದಲ್ಲಿ ಬೆಳೆಹಾನಿ

Facebook
Twitter
Telegram
WhatsApp

ಚಿತ್ರದುರ್ಗ, (ಅಕ್ಟೋಬರ್.07) :  ಜಿಲ್ಲೆಯಲ್ಲಿ ಅಕ್ಟೋಬರ್ 06  ರಂದು ಅತಿಯಾಗಿ ಬಿದ್ದ ಮಳೆಯಿಂದಾಗಿ ಒಟ್ಟು 184.16 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ 14 ಮನೆಗಳಿಗೆ ನೀರು ನುಗ್ಗಿದೆ.

ಚಿತ್ರದುರ್ಗ ತಾಲ್ಲೂಕಿನ ಮುದ್ದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಗರಿಷ್ಟ 241.0 ಮಿ.ಮೀ. ಮಳೆ ದಾಖಲಾಗಿದೆ.

ಅಕ್ಟೋಬರ್ 06ರಂದು ಬಿದ್ದ ಮಳೆಯಿಂದಾಗಿ ಉಂಟಾದ ಹಾನಿಗಳ ವಿವರ:

ಚಿತ್ರದುರ್ಗ ತಾಲ್ಲೂಕಿನಲ್ಲಿ 1 ಜಾನುವಾರು ಹಾನಿ, 36 ಮನೆಗಳ ಹಾನಿ ಹಾಗೂ 104.20 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ. ಮತ್ತು 14 ಮನೆಗಳಿಗೆ ನೀರು ನುಗ್ಗಿದೆ.

ಚಳ್ಳಕೆರೆ ತಾಲ್ಲೂಕಿನಲ್ಲಿ 3 ಮನೆಗಳ ಹಾನಿ, 17.38 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ. ಹೊಳಲ್ಕೆರೆ ತಾಲ್ಲೂಕಿನಲ್ಲಿ 14 ಮನೆಗಳ ಹಾನಿಯಾಗಿದೆ.

ಹಿರಿಯೂರು ತಾಲ್ಲೂಕಿನಲ್ಲಿ 2 ಮನೆಗಳಿಗೆ ಹಾನಿಯಾಗಿದ್ದು, 60.58 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ.

ಹೊಸದುರ್ಗ ತಾಲ್ಲೂಕಿನಲ್ಲಿ 5 ಮನೆಗಳಿಗೆ ಹಾನಿಯಾಗಿದ್ದು, 2 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ.

ಜಿಲ್ಲೆಯಲ್ಲಿ ಒಟ್ಟು 1 ಜಾನುವಾರು ಹಾನಿ, 60 ಮನೆಗಳ ಹಾನಿ ಹಾಗೂ 184.16 ಬೆಳೆಹಾನಿ ಸೇರಿದಂತೆ 14 ಮನೆಗಳಿಗೆ ನೀರು ನುಗ್ಗಿದೆ ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಿಇಎನ್ ಪೊಲೀಸರ ದಾಳಿ : ಅಂತರ್ ರಾಜ್ಯ ಗಾಂಜಾ ಪೆಡ್ಲರ್ ಬಂಧನ

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 22 : ಆಂದ್ರಪ್ರದೇಶದ ವಿಶಾಖಪಟ್ಟಣಂ ನಿಂದ ಗಾಂಜಾವನ್ನು ತಂದು ಚಿತ್ರದುರ್ಗ ನಗರಕ್ಕೆ ಬಂದು ಗಾಂಜಾ ಮಾರಾಟ ಮಾಡುತ್ತಿದ್ದ ಡ್ರಗ್ಸ್‌ ಪೆಡ್ಲರ್‌ನನ್ನು ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಿಹಾರದ ಹರಿ ಓಂಕುಮಾರ್(24

ಪೆಟ್ರೋಲ್ ಬಂಕಿನಲ್ಲಿ ವಂಚನೆ ಆರೋಪ : ಗ್ರಾಹಕರು ಹಾಗೂ ಸಿಬ್ಬಂದಿಗಳ ನಡುವೆ ಮಾತಿನ ಚಕಮಕಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ನವೆಂಬರ್. 22 : ಬೈಕ್ ಗಳಿಗೆ ಪೆಟ್ರೋಲ್ ಹಾಕುವ ವೇಳೆ ಗ್ರಾಹಕರಿಗೆ ಇಲ್ಲಿನ ಸಿಬ್ಬಂದಿ ವಂಚನೆ

ಅಕ್ರಮ ಕಸಾಯಿ ಖಾನೆ ಬಂದ್ ಮಾಡಿ : ದಾದಾ ಪೀರ್ ಆಗ್ರಹ : ವಿಡಿಯೋ ವೈರಲ್..!

ಸುದ್ದಿಒನ್, ಹಿರಿಯೂರು : ಅಕ್ರಮವಾಗಿ ಕಸಾಯಿ ಖಾನೆ ನಡೆಸುತ್ತಿರುವವರ ವಿರುದ್ಧ ದಾದಾ ಪೀರ್ ಎಂಬುವವರು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದಾದಾ ಪೀರ್ 6ನೇ ವಾರ್ಡ್ ನಲ್ಲಿ ವಾಸಿಸುವವ ವ್ಯಕ್ತಿಯಾಗಿದ್ದಾರೆ. ಕಸಾಯಿ ಖಾನೆಯಿಂದ ಮಕ್ಕಳು ಅನಾರೋಗ್ಯಕ್ಕೆ

error: Content is protected !!