Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ರಾಜ್ಯಾದ್ಯಂತ ಜೋರು ಮಳೆ : ಅಕ್ಟೋಬರ್ 29ರವರೆಗೆ ಮಳೆಯ ಅಬ್ಬರ

---Advertisement---

 

ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ಕಡಿಮೆ ಒತ್ತಡದಿಂದ ರಾಜ್ಯಾದ್ಯಂತ ಮಳೆ ಮುಂದುವರೆಯಲಿದೆ ಎಂದು ಹವಮಾನ ಇಲಾಖೆ ವರದಿ ನೀಡಿದೆ. ಅಕ್ಟೋಬರ್ 29ರವರೆಗೆ ವ್ಯಾಪಕ ಮಳೆಯಾಗುವ ಸೂಚನೆ ನೀಡಿದೆ. ಕೆಲವೊಂದು ಕಡೆ ಉತ್ತಮ, ಕೆಲವೊಂದು ಕಡೆ ವ್ಯಾಪಕ, ಇನ್ನು ಕೆಲವು ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

 

ದಕ್ಷಿಣ ಒಳನಾಡು ಭಾಗದ ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಚಾಮರಾಜನಗರ ಮತ್ತು ಹಾಸನದಲ್ಲಿ ಆರೆಂಜ್​ ಅಲರ್ಟ್​ ಇರಲಿದೆ ಎಂದು ಹವಾಮಾನ ಇಲಾಖೆ ಘೊಷಿಸಿದೆ. ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಮತ್ತು ತುಮಕೂರಲ್ಲಿ ಸಣ್ಣ ಪ್ರಮಾಣದ ಮಳೆಯಾಗಲಿದೆ. ಉತ್ತರ ಒಳನಾಡು ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಬೀದರ್​, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು ಮತ್ತು ಯಾದಗಿರಿಲ್ಲಿ ಸಣ್ಣ ಪ್ರಮಾಣದ ಮಳೆಯಾಗಲಿದೆ. ಬಳ್ಳಾರಿ ಮತ್ತು ವಿಜಯನಗರದಲ್ಲಿ ಮೋಡ ಕವಿದ ವಾತಾವಣರಣ ಅಥವಾ ತುಂತುರು ಮಳೆಯ ನಿರೀಕ್ಷೆ ಇದೆ.

ಮುಂದಿನ ಒಂದು ವಾರಗಳ ಕಾಲ ಜೋರು ಮಳೆಯಾಗಲಿದೆ. ಹೀಗಾಗಿ ಹವಮಾನ ಇಲಾಖೆ ಎಚ್ಚರದಿಂದ ಇರುವುದಕ್ಕೆ ಸೂಚನೆ ನೀಡಿದೆ. ರಾಜ್ಯಾದ್ಯಂತ ಇಂದು ಮಧ್ಯಾಹ್ನದಿಂದಾನೇ ಮಳೆಯಾಗಿದೆ. ಕೆಲವೊಂದು ಜಿಲ್ಲೆಗಳಲ್ಲಿ ಸೋನೆ ಮಳೆ ಸುರಿಯುತ್ತಿದೆ. ದೀಪಾವಳಿ ಸಂಭ್ರಮದ ಜೊತೆಗೆ ಜಿಟಿಜಿಟಿ ಮಳೆ ಅಡ್ಡಿಯಾಗಿದೆ. ಬೆಳಗ್ಗೆಯಿಂದ ಪಟಾಕಿ ಹೊಡೆಯಬೇಕು ಎಂದುಕೊಂಡವರಿಗೆ ತೊಂದರೆ ಕೊಟ್ಟ ವರುಣ, ಸಂಜೆ ವೇಳೆಗೆ ದೀಪದ ಹಬ್ಬವನ್ನ ಸಂಭ್ರಮಿಸುವುದಕ್ಕೆ ದಾರಿ ಮಾಡಿಕೊಟ್ಟಿದೆ. ಮತ್ತೊಂದು ಕಡೆ ರೈತರಿಗೆ ಸಂತಸವಾಗಿದೆ. ಕೆಲವೆಡೆ ಹಿಂಗಾರು ಬಿತ್ತನೆ ಚುರುಕಾಗಿದೆ. ಮತ್ತೊಂದೆಡೆ ಸದ್ಯ ಒಣಗುತ್ತಿದ್ದ ಕೆಲವು ಬೆಳೆಗಳು ಹಸಿರಾಗುವುದಕ್ಕೆ ಮಳೆರಾಯ ಸಹಾಯ ಮಾಡಿದ್ದಾನೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...