Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕರ್ನಾಟಕದಲ್ಲಿ ಮುಂದಿನ ಮೂರು ದಿನ ಮಳೆ ಅಬ್ಬರ: ಕರಾವಳಿ, ಉತ್ತರ ಒಳನಾಡಿಗೆ ಯೆಲ್ಲೋ ಅಲರ್ಟ್

---Advertisement---

ಸುದ್ದಿಒನ್,ಬೆಂಗಳೂರು,ಮೇ.31 :ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಗುಡುಗು, ಸಿಡಿಲು ಸಹಿತ ಭಾರೀ ಮಳೆಯಾಗಲಿದ್ದು, ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

ದಕ್ಷಿಣ ಒಳನಾಡಿನಲ್ಲಿ ಇಂದು ಮತ್ತು ನಾಳೆ ವರುಣನ ಆರ್ಭಟ ಜೋರಾಗಿರಲಿದ್ದು, ಉತ್ತರ ಒಳನಾಡಿನ 5 ಜಿಲ್ಲೆಗಳು ಹಾಗೂ ಜೂನ್ 2ರವರೆಗೆ ಕರಾವಳಿ ಭಾಗಕ್ಕೆ ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ. ಕಡಲಿನಲ್ಲಿ ಗಾಳಿಯ ವೇಗ ಮತ್ತು ಅಲೆಗಳ ಅಬ್ಬರ ತೀವ್ರವಾಗಿರುವ ಹಿನ್ನೆಲೆಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದ್ದು, ತೀರ ಪ್ರದೇಶದ ನಿವಾಸಿಗಳಿಗೆ ಜಾಗರೂಕರಾಗಿರಲು ತಿಳಿಸಲಾಗಿದೆ.

ಇನ್ನು ಜೂನ್ ಆರಂಭದಲ್ಲೇ ರಾಜ್ಯಕ್ಕೆ ಮುಂಗಾರು ಮಾರುತಗಳು ಪ್ರವೇಶಿಸುವ ನಿರೀಕ್ಷೆಯಿದ್ದರೂ ಆರಂಭದಲ್ಲಿ ಕೊಂಚ ದುರ್ಬಲವಾಗಿರಲಿದ್ದು, ಜೂನ್ 7 ರಿಂದ ಕರಾವಳಿ ಜಿಲ್ಲೆಗಳಲ್ಲಿ ಮಳೆ ಮತ್ತಷ್ಟು ತೀವ್ರಗೊಳ್ಳಲಿದೆ ಎಂದು ಹವಾಮಾನ ವರದಿ ತಿಳಿಸಿದೆ.

Join WhatsApp

Join Now

Join Telegram

Join Now