Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಚಿತ್ರದುರ್ಗ, ಶಿವಮೊಗ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ

---Advertisement---

ಬೆಂಗಳೂರು; ಈ ವರ್ಷ ಮುಂಗಾರು ಬಹಳ ಬೇಗನೇ ಆರಂಭವಾಗುತ್ತಿದೆ. ಇಂದು ಕೂಡ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ. ಈಗಾಗಲೇ ಸಿಲಿಕಾನ್ ಸಿಟಿಯಲ್ಲಿ ಮೋಡ ಕವಿದ ವಾತಾವರಣವಿದ್ದು, ಹಲವೆಡೆ ಮಳೆಯಾಗುತ್ತಿದೆ. ಕಲಬುರಗಿ, ಯಾದಗಿರಿ, ಧಾರವಾಡ, ಶಿವಮೊಗ್ಗ, ಚಿತ್ರದುರ್ಗ, ಉಡುಪಿ, ಕೊಡಗು, ಉತ್ತರ ಕನ್ನಡ, ದಕ್ಷಿಣ ಕನ್ನಡ, ರಾಯಚೂರು, ಬಿಜಾಪುರ ಜಿಲ್ಲೆಗಳಲ್ಲಿ ಇಂದು ಜೋರು ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ, ಧಾರವಾಡ, ಗದಗ,ಬಾಗಲಕೋಟೆ, ಬೆಳಗಾವಿ, ಹಾವೇರಿ, ರಾಯಚೂರು, ಕೊಪ್ಪಳ, ಯಾದಗಿರಿ, ಕಲಬುರಗಿ, ಬೀದರ್ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಕೆಲವು ಕಡೆಗಳಲ್ಲಿ ಬಿರುಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕರ್ನಾಟಕದಾದ್ಯಂತ ಒಂದು ವಾರಗಳ ಕಾಲ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ 12ಕ್ಕೂ ಅಧಿಕ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಕರ್ನಾಟಕದಾದ್ಯಂತ ಮೇ 16 ರಿಂದ ಮಳೆಯ ಪ್ರಮಾಣ ಹೆಚ್ಚಾಗಲಿದೆ. ತುಮಕೂರು, ಶಿವಮಿಗ್ಗ, ಮಂಡ್ಯ, ಕೋಲಾರ, ಕೊಡಗು, ಹಾಸನ, ಚಿಕ್ಕಮಗಳೂರು ಸೇರಿದಂತೆ ಹಲವು ಭಾಗದಲ್ಲಿ ಸಾಧಾರಣ ಮಳೆಯಾಗಲಿದೆ. ಹವಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ ಮುಂದಿನ ನಾಲ್ಕು ದಿನಗಳ ಕಾಲ ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಚಿಕ್ಕಮಗಳೂರು ಸೇರಿದಂತೆ ಹಲವೆಡೆ ಸಾಧಾರಣ ಮಳೆಯಾಗಲಿದೆ ಎಂದು ಹೇಳಲಾಗಿದೆ. ಮಿಂಚು, ಗುಡುಗು, ಬಿರುಗಾಳಿ ಸಮೇತ ಮಳೆಯಾಗಲಿದೆ. ಹೀಗಾಗಿ ಹೊರಗೆ ಹೋಗುವ ಜನರು ಎಚ್ಚರಿಕೆಯಿಂದ ಇರಬೇಕು. ಈಗ ರೈತರಿಗೆ ಸಿಕ್ಕಾಪಟ್ಟೆ ಖುಷಿಯಾಗಿದೆ. ಇನ್ಮೇಲೆ ಕೃಷಿ ಕಾರ್ಯದಲ್ಲಿ ಹೆಚ್ಚಾಗಿ ತೊಡಗಿಕೊಳ್ಳಬಹುದು ಎಂದು ಸಂತಸವಿದೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment