Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಬೇಸಿಗೆಯಲ್ಲೂ ಮಳೆಯ ಅಬ್ಬರ : ರಾಜ್ಯದ ಹಲವು ಜಿಲ್ಲೆಗಳಿಗೆ ಗುಡುಗು ಸಹಿತ ಮಳೆ ಮುನ್ಸೂಚನೆ

---Advertisement---

ಬೇಸಿಗೆ ಕಾಲದಲ್ಲಿಯೇ ಕರ್ನಾಟಕದಲ್ಲಿ ಮಳೆಯ ಚಟುವಟಿಕೆಗಳು ಜೋರಾಗುತ್ತಿದ್ದು, ಹವಾಮಾನದಲ್ಲಿ ಗಮನಾರ್ಹ ಬದಲಾವಣೆ ಕಂಡುಬಂದಿದೆ. ಬಂಗಾಳಕೊಲ್ಲಿಯ ಆಂಧ್ರಪ್ರದೇಶ ಕರಾವಳಿ ಸಮೀಪ ಹಾಗೂ ಉತ್ತರ ಭಾರತದ ಭಾಗಗಳಲ್ಲಿ ಉಂಟಾದ ಮೇಲ್ಮೈ ಸುಳಿಗಾಳಿ ಮತ್ತು ಚಂಡಮಾರುತ ಪ್ರಸರಣದ ಪರಿಣಾಮವಾಗಿ ಮಾರ್ಚ್ 23ರಿಂದ 28ರವರೆಗೆ ರಾಜ್ಯದ ಹತ್ತಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಗುಡುಗು–ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇದರ ನಡುವೆಯೇ ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಾರ್ಚ್ 23 ಮತ್ತು 24ರಂದು ತಾಪಮಾನ ಏರಿಕೆಯಾಗುವ ಸಾಧ್ಯತೆ ಇದ್ದು, ಉಷ್ಣ ಅಲೆ ಎಚ್ಚರಿಕೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಎರಡು ದಿನಗಳ ಕಾಲ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ನಂತರ ಮಾರ್ಚ್ 28ರವರೆಗೆ ಕರಾವಳಿ ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದ್ದು, ಗಾಳಿಯ ವೇಗ ಗಂಟೆಗೆ 40ರಿಂದ 50 ಕಿಲೋಮೀಟರ್‌ವರೆಗೆ ಇರಬಹುದು ಎಂದು ತಿಳಿಸಲಾಗಿದೆ.

ಮುಂದಿನ 48 ಗಂಟೆಗಳವರೆಗೆ ರಾಜ್ಯದ ವಾತಾವರಣದಲ್ಲಿ ಹೆಚ್ಚಿನ ಬದಲಾವಣೆ ಕಾಣಿಸದಿದ್ದರೂ, ಮಾರ್ಚ್ 23ರಿಂದ ಪೂರ್ವ ಮುಂಗಾರು ಮಾರುತಗಳು ಸಕ್ರಿಯವಾಗಲಿವೆ. ಇದರ ಪರಿಣಾಮವಾಗಿ ಬೆಳಗಾವಿ, ಬೀದರ್, ಗದಗ, ಹಾವೇರಿ, ಕಲಬುರಗಿ, ಕೋಲಾರ, ರಾಯಚೂರು, ಬಳ್ಳಾರಿ, ಹಾಸನ, ಕೊಡಗು, ಮೈಸೂರು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಮಧ್ಯಂತರವಾಗಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಇದೇ ವೇಳೆ ರಾಮನಗರ, ಮಂಡ್ಯ, ಕೊಪ್ಪಳ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಚದುರಿದಂತೆ ಹಗುರ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಒಣಹವಾಮಾನ ಮುಂದುವರಿಯಲಿದೆ.

ರಾಜಧಾನಿ ಬೆಂಗಳೂರಿನಲ್ಲಿ ಸದ್ಯ ಮಳೆಯ ಮುನ್ಸೂಚನೆ ಇಲ್ಲ. ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಮುಂದಿನ ಎರಡು ದಿನಗಳವರೆಗೆ ಇದೇ ಸ್ಥಿತಿ ಇರಲಿದೆ. ಗರಿಷ್ಠ 32 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...