Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಜ್ಯದಲ್ಲಿ ಮುಂದಿನ ಆರು ದಿನ ಭಾರಿ ಮಳೆ : ಈ ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಣೆ

---Advertisement---

​ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಮುಂದಿನ ಆರು ದಿನಗಳ ಕಾಲ ವರುಣನ ಅಬ್ಬರ ಜೋರಾಗಲಿದ್ದು, ಭಾರತೀಯ ಹವಾಮಾನ ಇಲಾಖೆ (IMD) ರಾಜ್ಯದ ಒಂಬತ್ತು ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಿಸಿದೆ.

ಅಕ್ಟೋಬರ್ 18 ರಿಂದ 23 ರವರೆಗೆ ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗದಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

​ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು, ಚಾಮರಾಜನಗರ, ಹಾಸನ, ಶಿವಮೊಗ್ಗ, ಕೊಡಗು ಹಾಗೂ ಚಿಕ್ಕಮಗಳೂರು ಸೇರಿದಂತೆ ಹಲವು ಭಾಗಗಳಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ.

ಕರಾವಳಿ ಭಾಗದಲ್ಲಿ ರಭಸವಾಗಿ ಗಾಳಿ ಬೀಸಲಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.

​ಇತ್ತ ಬೆಂಗಳೂರಿನಲ್ಲಿ ಈಗಾಗಲೇ ಸುರಿದ ಮಳೆಯಿಂದಾಗಿ ಹಲವೆಡೆ ರಸ್ತೆಗಳು ಜಲಾವೃತಗೊಂಡು ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಗಿದೆ. ಚಾಮರಾಜಪೇಟೆಯಲ್ಲಿ ಮಳೆ ನೀರು ಅಂಗಡಿಗಳಿಗೆ ನುಗ್ಗಿ ಅಪಾರ ನಷ್ಟ ಸಂಭವಿಸಿದ್ದು, ಅಂಡರ್‌ಪಾಸ್‌ಗಳಲ್ಲಿ ನೀರು ನಿಂತು ವಾಹನ ಸವಾರರು ಪರದಾಡುವಂತಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now