ದಾವಣಗೆರೆ/ಚಿತ್ರದುರ್ಗ: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಕಳೆದ 24 ಗಂಟೆಗಳಲ್ಲಿ ಉತ್ತಮ ಮಳೆಯಾಗಿದ್ದು, ದಾವಣಗೆರೆ ಜಿಲ್ಲೆಯ ವಿವಿಧ ಭಾಗಗಳಲ್ಲೂ ಭಾರಿ ಮಳೆ ದಾಖಲಾಗಿದೆ. ಅದರಲ್ಲೂ ಚನ್ನಗಿರಿ ತಾಲ್ಲೂಕಿನ ಕಾಕನೂರಿನಲ್ಲಿ 105 ಮಿ.ಮೀ ಹಾಗೂ ಸಂತೇಬೆನ್ನೂರಿನಲ್ಲಿ 80.5 ಮಿ.ಮೀ ಮಳೆ ದಾಖಲಾಗಿರುವುದು ಗಮನ ಸೆಳೆದಿದೆ. ಚಿತ್ರದುರ್ಗ ಜಿಲ್ಲೆಯಲ್ಲಿಯೂ ಹಲವೆಡೆ ಮಳೆಯಾಗಿದ್ದು, ರೈತರು ಹಾಗೂ ಸಾರ್ವಜನಿಕರಲ್ಲಿ ಸಂತಸ ಮೂಡಿಸಿದೆ.
ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರ (KSDMC) ಬಿಡುಗಡೆ ಮಾಡಿರುವ ಮಾಹಿತಿಯ ಪ್ರಕಾರ, ಕಳೆದ 24 ಗಂಟೆಗಳಲ್ಲಿ ಬೆಂಗಳೂರು ದಕ್ಷಿಣ ಜಿಲ್ಲೆಯ ಕನಕಪುರ ತಾಲ್ಲೂಕಿನ ಹೊಸ ಕಬ್ಬಾಳುವಿನಲ್ಲಿ ರಾಜ್ಯದಲ್ಲೇ ಗರಿಷ್ಠ 111.25 ಮಿ.ಮೀ ಮಳೆ ದಾಖಲಾಗಿದೆ.ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಕಾಕನೂರಿನಲ್ಲಿ 105 ಮಿ.ಮೀ, ಸಂತೇಬೆನ್ನೂರಿನಲ್ಲಿ 80.5 ಮಿ.ಮೀ ಮಳೆಯಾಗಿದೆ. ಈ ಭಾಗಗಳಲ್ಲಿ ಉತ್ತಮ ಮಳೆಯಾಗಿರುವುದರಿಂದ ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗುವ ನಿರೀಕ್ಷೆ ಇದೆ.
ಇನ್ನು ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲ್ಲೂಕಿನ ಚಿಚಖಂಡಿ ಕೆಡಿಯಲ್ಲಿ 100 ಮಿ.ಮೀ, ಚಾಮರಾಜನಗರ ತಾಲ್ಲೂಕಿನ ಹರದನಹಳ್ಳಿಯಲ್ಲಿ 91.5 ಮಿ.ಮೀ, ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಸರಗೂರಿನಲ್ಲಿ 89 ಮಿ.ಮೀ ಮಳೆಯಾಗಿದೆ.
ತುಮಕೂರು ಜಿಲ್ಲೆಯ ಕುಣಿಗಲ್ ತಾಲ್ಲೂಕಿನ ಮಾರ್ಕೋನಹಳ್ಳಿಯಲ್ಲಿ 88.25 ಮಿ.ಮೀ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಕಾರಹಳ್ಳಿಯಲ್ಲಿ 86 ಮಿ.ಮೀ ಹಾಗೂ ಮಂಡ್ಯ ಸಮೀಪದ ಶಿವಪುರದಲ್ಲಿ 85 ಮಿ.ಮೀ ಮಳೆಯಾಗಿದೆ.ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಮಧುವನಹಳ್ಳಿಯಲ್ಲಿ 80 ಮಿ.ಮೀ, ಕನಕಪುರ ತಾಲ್ಲೂಕಿನ ಚೂಡಹಳ್ಳಿಯಲ್ಲಿ 78 ಮಿ.ಮೀ ಹಾಗೂ ಚನ್ನಪಟ್ಟಣ ತಾಲ್ಲೂಕಿನ ಜೆ. ಬ್ಯಾಡರಹಳ್ಳಿಯಲ್ಲಿ 77.5 ಮಿ.ಮೀ ಮಳೆ ದಾಖಲಾಗಿದೆ.
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲ್ಲೂಕಿನ ಐರಣಿಯಲ್ಲಿ 30 ಮಿ.ಮೀ, ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲ್ಲೂಕಿನ ಕಂದಕೂರಿಬಲ್ಲಿಯಲ್ಲಿ 28 ಮಿ.ಮೀ, ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಗಂಗೂರಿನಲ್ಲಿ 27.5 ಮಿ.ಮೀ ಹಾಗೂ ಗದಗ ಜಿಲ್ಲೆಯ ನರಗುಂದ ತಾಲ್ಲೂಕಿನ ಸುರಕೋಡದಲ್ಲಿ 27 ಮಿ.ಮೀ ಮಳೆಯಾಗಿದೆ. ರಾಜ್ಯದ ಹಲವು ಭಾಗಗಳಲ್ಲಿ ಮಳೆಯಾಗಿದ್ದು, ದಾವಣಗೆರೆ ಜಿಲ್ಲೆಯ ಚನ್ನಗಿರಿ ಭಾಗದಲ್ಲಿ 100 ಮಿ.ಮೀ ಗೂ ಅಧಿಕ ಮಳೆ ದಾಖಲಾಗಿರುವುದು ಪ್ರಮುಖ ಬೆಳವಣಿಗೆಯಾಗಿದೆ. ಚಿತ್ರದುರ್ಗ ಸೇರಿದಂತೆ ಮಧ್ಯ ಕರ್ನಾಟಕದ ಭಾಗಗಳಲ್ಲೂ ಮಳೆಯ ಪ್ರಮಾಣದ ಮೇಲೆ ರೈತರು ಹಾಗೂ ಸಾರ್ವಜನಿಕರು ಗಮನಹರಿಸಿದ್ದಾರೆ.









