Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಜ್ಯದಾದ್ಯಂತ ಜೂನ್ ಆರಂಭದವರೆಗೂ ಬಿರುಗಾಳಿ ಸಹಿತ ಭಾರಿ ಮಳೆ; ಎಲ್ಲೆಲ್ಲಿ ಅಲರ್ಟ್ ಘೋಷಣೆ?

---Advertisement---

ಸುದ್ದಿಒನ್,ಬೆಂಗಳೂರು,ಮೇ.26: ಕರ್ನಾಟಕದಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರ ಜೋರಾಗಿದೆ. ಬಿಸಿಲಿನ ಬೇಗೆಯಿಂದ ಕಂಗೆಟ್ಟಿದ್ದ ಜನತೆಗೆ ವರುಣದೇವ ತಂಪು ತಂದಿದ್ದರೂ, ಇದೀಗ ಮಳೆಯ ಆರ್ಭಟ ಮತ್ತಷ್ಟು ಹೆಚ್ಚಾಗುವ ಮುನ್ಸೂಚನೆ ಸಿಕ್ಕಿದೆ. ಮೇ ತಿಂಗಳ ಅಂತ್ಯದವರೆಗೂ ಮಾತ್ರವಲ್ಲದೆ, ಜೂನ್ ಮೊದಲ ವಾರದವರೆಗೂ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಎಚ್ಚರಿಸಿದೆ.

ಮುಂದಿನ ದಿನಗಳಲ್ಲಿ ಮಳೆ ತೀವ್ರಗೊಳ್ಳಲಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಹಲವು ಜಿಲ್ಲೆಗಳಲ್ಲಿ ಹವಾಮಾನ ಇಲಾಖೆಯು ‘ಯೆಲ್ಲೋ’ ಹಾಗೂ ‘ಆರೇಂಜ್’ ಅಲರ್ಟ್ ಪ್ರಕಟಿಸಿದೆ. ಜೂನ್ 3ರ ವರೆಗೂ ಬಿರುಗಾಳಿ ಜೊತೆಗೆ ಆಲಿಕಲ್ಲು ಮಳೆಯಾಗುವ ಆತಂಕ ಎದುರಾಗಿದೆ.

ಮೇ 26 ರಿಂದ 28 ರ ಅವಧಿಯಲ್ಲಿ ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ವಾತಾವರಣ ತೀವ್ರವಾಗಿ ಬದಲಾಗಲಿದೆ. ಗಂಟೆಗೆ ಬರೋಬ್ಬರಿ 50 ರಿಂದ 60 ಕಿಲೋಮೀಟರ್ ವೇಗದಲ್ಲಿ ಬಿರುಗಾಳಿ ಬೀಸಲಿದ್ದು, ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ.ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗಂಟೆಗೆ 40 ರಿಂದ 50 ಕಿಲೋಮೀಟರ್ ವೇಗದ ಗಾಳಿಯೊಂದಿಗೆ ಮಳೆ ಸುರಿಯಲಿದೆ.ಕರಾವಳಿ ಜಿಲ್ಲೆಗಳಲ್ಲೂ ವರುಣನ ಅಬ್ಬರ ಮುಂದುವರೆಯಲಿದ್ದು, ಮೇ 26 ರಿಂದ 30 ರವರೆಗೆ ಗುಡುಗು ಸಹಿತ ನಿರಂತರ ಮಳೆಯಾಗುವ ಮುನ್ಸೂಚನೆ ಇದೆ.

ಇಂದು (ಮೇ 26) ಸಂಜೆಯ ವೇಳೆಗೆ ರಾಜ್ಯದ ಹಲವೆಡೆ ಆಕಾಶ ಭಾಗಶಃ ಮೋಡ ಕವಿದ ವಾತಾವರಣದಿಂದ ಕೂಡಿರಲಿದೆ. ಗಂಟೆಗೆ 30-40 ಕಿ.ಮೀ ವೇಗದಲ್ಲಿ ಬೀಸುವ ತಂಗಾಳಿಯೊಂದಿಗೆ, ಕೆಲವು ಪ್ರದೇಶಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.

ದಕ್ಷಿಣ ಒಳನಾಡಿನ ಜಿಲ್ಲೆಗಳ ಜನತೆ ಮುಂದಿನ ಎರಡು ದಿನಗಳ ಕಾಲ ಎಚ್ಚರಿಕೆಯಿಂದ ಇರಬೇಕಾಗಿದೆ. ಮೇ 26 ಮತ್ತು 27ರಂದು ಈ ಭಾಗದಲ್ಲಿ ಸುಮಾರು 64.5 ಮಿಮೀ ನಿಂದ 115.5 ಮಿಮೀ ವರೆಗೆ ಭಾರಿ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಹವಾಮಾನ ಇಲಾಖೆಯು ಯೆಲ್ಲೊ ಅಲರ್ಟ್ ಜಾರಿಗೊಳಿಸಿದೆ.ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮೇ 27 ರಂದು ಪರಿಸ್ಥಿತಿ ಮತ್ತಷ್ಟು ಗಂಭೀರವಾಗುವ ಸಾಧ್ಯತೆಯಿದೆ. ಗುಡುಗು, ಮಿಂಚಿನ ಆರ್ಭಟದೊಂದಿಗೆ ಗಂಟೆಗೆ 50-60 ಕಿಮೀ ವೇಗದಲ್ಲಿ ಚಂಡಮಾರುತದಂತಹ ಗಾಳಿ ಬೀಸಲಿದ್ದು, ಆಲಿಕಲ್ಲು ಮಳೆಯಾಗುವ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು ಇಲ್ಲಿ ಆರೆಂಜ್ ಅಲರ್ಟ್ ಘೋಷಿಸಿದೆ.

Join WhatsApp

Join Now

Join Telegram

Join Now