ಸುದ್ದಿಒನ್,ಬೆಂಗಳೂರು,ಮೇ.11: ಬಂಗಾಳ ಉಪಸಾಗರದಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಹಾಗೂ ಅರಬ್ಬಿ ಸಮುದ್ರದ ಸುಳಿಗಾಳಿಯ ಪರಿಣಾಮವಾಗಿ, ಕರ್ನಾಟಕದಾದ್ಯಂತ ಮುಂದಿನ ಐದು ದಿನಗಳ ಕಾಲ ವ್ಯಾಪಕ ಮಳೆಯಾಗಲಿದೆ ಎಂದು ಬೆಂಗಳೂರು ಹವಾಮಾನ ಕೇಂದ್ರ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಬೆಳಗಾವಿ, ಧಾರವಾಡ, ಗದಗ, ಹಾವೇರಿ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಮಳೆಯ ಅಬ್ಬರವಿರಲಿದ್ದು, ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ.
ಶಿವಮೊಗ್ಗ, ದಾವಣಗೆರೆ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಮೈಸೂರು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದೆ. ವಿಶೇಷವಾಗಿ ಮೇ 15 ಮತ್ತು 16 ರಂದು ಈ ಭಾಗದ ಕೆಲವು ಕಡೆಗಳಲ್ಲಿ ಭಾರಿ ಮಳೆಯಾಗುವ (Heavy Rain) ಸಂಭವವಿದೆ.

ರಾಜಧಾನಿ ಬೆಂಗಳೂರಿನಲ್ಲಿ ಮುಂದಿನ 48 ಗಂಟೆಗಳ ಕಾಲ ಭಾಗಶಃ ಮೋಡ ಕವಿದ ವಾತಾವರಣವಿರಲಿದೆ. ಸಂಜೆ ಅಥವಾ ರಾತ್ರಿಯ ವೇಳೆ ನಗರದ ಕೆಲವೆಡೆ ಹಗುರ ಮಳೆಯಾಗಬಹುದು. ನಗರದ ಗರಿಷ್ಠ ತಾಪಮಾನ 34°C ಹಾಗೂ ಕನಿಷ್ಠ ತಾಪಮಾನ 23°C ದಾಖಲಾಗುವ ಸಾಧ್ಯತೆಯಿದೆ.
ಮಳೆ ಮತ್ತು ಗುಡುಗು ಮಿಂಚಿನ ಸಂದರ್ಭದಲ್ಲಿ ಸಾರ್ವಜನಿಕರು ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯಬೇಕು. ಯಾವುದೇ ಕಾರಣಕ್ಕೂ ಮರದ ಕೆಳಗೆ ಅಥವಾ ವಿದ್ಯುತ್ ಕಂಬಗಳ ಬಳಿ ನಿಲ್ಲಬಾರದು ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.
















