Connect with us

Hi, what are you looking for?

ಪ್ರಮುಖ ಸುದ್ದಿ

ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್‍ಗೆ ಉಚಿತ ಚಿಕಿತ್ಸೆ ಪಡೆಯಲು ಜಿಲ್ಲಾಸ್ಪತ್ರೆಯಲ್ಲಿ ಹೆಲ್ಪ್ ಡೆಸ್ಕ್ ಸ್ಥಾಪನೆ; ಸಂಸದ ಎ.ನಾರಾಯಣಸ್ವಾಮಿ

ಚಿತ್ರದುರ್ಗ, (ಮೇ.19) : ಆಯುಷ್ಮಾನ್ ಆರೋಗ್ಯ ಕರ್ನಾಟಕ ಯೋಜನೆಯಡಿ ಎಲ್ಲಾ ಕೋವಿಡ್ ರೋಗಿಗಳಿಗೆ ಸರ್ಕಾರಿ ಸೇರಿದಂತೆ ಸರ್ಕಾರಿ ಕೋಟಾದಡಿ ಎಲ್ಲಾ ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್‍ಗೆ ಉಚಿತ ಚಿಕಿತ್ಸೆ ಪಡೆಯಲು ಅವಕಾಶ ಇದ್ದು ಕೂಡಲೇ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಸಹಾಯ ಮೇಜನ್ನು ಸ್ಥಾಪಿಸಬೇಕೆಂದು ಸಂಸದ ಎ.ನಾರಾಯಣಸ್ವಾಮಿ ಸೂಚಿಸಿದರು.

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಬುಧವಾರ ಜಿಲ್ಲಾಧಿಕಾರಿ ಸೇರಿದಂತೆ ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಸರ್ಕಾರಿ ಸೇರಿದಂತೆ ಖಾಸಗಿಯಲ್ಲಿ ಕೋವಿಡ್‍ಗೆ ಚಿಕಿತ್ಸೆ ಪಡೆಯಲು ಅವಕಾಶ ಇದೆ. ಆದರೆ ಬೆಡ್ ಸಿಗದೆ ಅನೇಕ ಬಡವರಿಗೆ ತೊಂದರೆಯಾಗಿದೆ. ಇದಕ್ಕಾಗಿ ಎಬಿಆರ್‍ಕೆಯಿಂದ ಸ್ಥಳದಲ್ಲೆ ಸಹಾಯ ಮಾಡಲು ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಸಹಾಯಮೇಜು ಸ್ಥಾಪಿಸಲು ಈಗಾಗಲೇ ಅನುಮೋದನೆ ನೀಡಲಾಗಿದೆ. ಆದರೂ ತೆರೆಯದ ಬಗ್ಗೆ ತೀವ್ರ ಅಸಮಧಾನ ವ್ಯಕ್ತಪಡಿಸಿ ತಕ್ಷಣವೇ ಈ ಕೆಲಸವಾಗಬೇಕೆಂದು ತಾಕೀತು ಮಾಡಿದರು. ಈ ವೇಳೆ ಎಬಿಆರ್‍ಕೆ ನೋಡಲ್ ಅಧಿಕಾರಿ ಡಾ; ಚಂದ್ರಶೇಖರ್ ನಾಳೆಯಿಂದಲೇ ಸಹಾಯಮೇಜು ಸ್ಥಾಪಿಸಲಾಗುತ್ತದೆ ಎಂದರು.

ಪ್ರತಿ ದಿನ ಎಷ್ಟು ಬೆಡ್‍ಗಳು ಖಾಲಿಯಾಗಿವೆ ಹಾಗೂ ಬಿಡುಗಡೆಯಾಗುತ್ತದೆ ಎಂಬ ಮಾಹಿತಿ ಹಾಗೂ ರೋಗಿಗಳಿಗೆ ಯಾವ ಯಾವ ಚಿಕಿತ್ಸೆಯನ್ನು ನೀಡಲಾಗುತ್ತಿದೆ ಎಂಬ ಮಾಹಿತಿಯನ್ನು ಇಟ್ಟುಕೊಂಡಿರಬೇಕು ಎಂದರು.

ವಾರ್ ರೂಂ; ಇಂತಹ ಸಂಕಷ್ಟದ ಸಂದರ್ಭದಲ್ಲಿ ಎಲ್ಲಾ ವಿವರವನ್ನು ಹೊಂದಿರುವ ವಾರ್ ರೂಂ ಸ್ಥಾಪನೆ ಮಾಡಬೇಕು. ಈ ಕೇಂದ್ರದಲ್ಲಿ ಕೋವಿಡ್‍ಗೆ ಸಂಬಂಧಿಸಿದಂತೆ ಸಂಪೂರ್ಣ ವಿವರ ಇಲ್ಲಿರಬೇಕು. ಪ್ರತಿ ನಿತ್ಯ ಎಷ್ಟು ಜನ ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ, ಎಷ್ಟು ಜನ ಬಿಡುಗಡೆ ಮಾಡಿದೆ, ಆಕ್ಸಿಜನ್ ಪೂರೈಕೆ, ಔಷಧ ಪೂರೈಕೆ ಸೇರಿದಂತೆ ಸಂಪೂರ್ಣವಾದ ನಿಯಂತ್ರಣ ವಾರ್ ರೂಂನಲ್ಲಿ ಇರಬೇಕಾಗಿದ್ದು ಇದೇ ಮಾದರಿಯಲ್ಲಿ ಕೋವಿಡ್ ನಿರ್ವಹಿಸಬೇಕೆಂದು ಸೂಚನೆ ನೀಡಿದರು.

ಕೋವಿಡ್ ರೋಗಿಗಳನ್ನು ಪ್ರತ್ಯೇಕಿಸಿ; ಕೋವಿಡ್ ಪಾಸಿಟೀವ್ ರೋಗಿಗಳನ್ನು ಕೋವಿಡ್ ಕೇರ್ ಸೆಂಟರ್‍ಗಳಲ್ಲಿ ಪ್ರತ್ಯೇಕವಾಗಿಟ್ಟು ಚಿಕಿತ್ಸೆ ನೀಡುವುದರಿಂದ ಹೆಚ್ಚಿನ ಪ್ರಾಣಹಾನಿ ತಡೆಯಬಹುದಾಗಿದ್ದು ಅವರ ಕುಟುಂಬವನ್ನು ರಕ್ಷಣೆ ಮಾಡಬಹುದಾಗಿದೆ. ರೋಗ ಲಕ್ಷಣ ಇರುವವರು ಮನೆಯಲ್ಲಿ ಪ್ರತ್ಯೇಕವಾಗಿರದೆ ಎಲ್ಲರೊಂದಿಗೆ ಹಾಗೂ ಎಲ್ಲಾ ಕಡೆ ತಿರುಗಾಡಿಕೊಂಡಿರುತ್ತಾರೆ. ಆದ್ದರಿಂದ ಕೇರ್ ಸೆಂಟರ್‍ಗಳಿಗೆ ಕರೆ ತರಬೇಕೆಂದು ತಿಳಿದರು.

ಖಾಸಗಿ ಕ್ಲಿನಿಕ್‍ಗಳ ಮೇಲೆ ನಿಗಾ; ಕೋವಿಡ್ ರೋಗ ಲಕ್ಷಣಗಳಿದ್ದರೂ ಸಹ ಖಾಸಗಿ ಕ್ಲಿನಿಕ್‍ನಲ್ಲಿ ವೈದ್ಯರು ಅವರಿಗೆ ಸಾಮಾನ್ಯ ಚಿಕಿತ್ಸೆ ನೀಡಿ ಕಳುಹಿಸುತ್ತಾರೆ. ಕೆಲವು ದಿನಗಳ ನಂತರ ಇವರ ಆಕ್ಸಿಜನ್ ಲೆವೆಲ್ ಕಡಿಮೆಯಾದಾಗ ಸರ್ಕಾರಿ ಆಸ್ಪತ್ರೆಗೆ ಬರುತ್ತಾರೆ. ಇದರಿಂದ ಅಂತಹ ರೋಗಿಯು ಸಂಕಷ್ಟಕ್ಕೆ ಸಿಲುಕುತ್ತಾನೆ. ಕೋವಿಡ್ ಲಕ್ಷಣಗಳು ಕಂಡು ಬಂದ ತಕ್ಷಣವೇ ಟೆಸ್ಟ್ ಮಾಡಿಸಿ ಸಕಾಲದಲ್ಲಿ ಚಿಕಿತ್ಸೆ ನೀಡುವುದರಿಂದ ಆಕ್ಸಿಜನ್ ಕೊಡುವ ಹಂತಕ್ಕೆ ರೋಗಿ ತಲುಪುವುದಿಲ್ಲ, ಕೋವಿಡ್ ಕೇರ್ ಸೆಂಟರ್ ಅಥವಾ ಪ್ರತ್ಯೇಕ ವ್ಯವಸ್ಥೆ ಇದ್ದರೆ ಮನೆಯಲ್ಲಿ ಚಿಕಿತ್ಸೆ ಪಡೆದು ಆರೋಗ್ಯವಾಗಿರಬಹುದಾಗಿದೆ. ಈ ನಿಟ್ಟಿನಲ್ಲಿ ಎಲ್ಲಾ ತಾಲ್ಲೂಕು ಆರೋಗ್ಯಾಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ವಹಿಸಬೇಕಾಗಿದೆ ಎಂದರು.

ಕೋವಿಡ್, ಲಸಿಕೆ ಮುಕ್ತ ಗ್ರಾಮ ಫಲಕ; ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳಲ್ಲಿ ತೀವ್ರ ನಿಗಾವಹಿಸಬೇಕಾಗಿದ್ದು ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳ ಮೇಲೆ ಒಬ್ಬಬ್ಬ ನೋಡಲ್ ಅಧಿಕಾರಿಯನ್ನು ನೇಮಕ ಮಾಡಿ ಎಲ್ಲಾ ಗ್ರಾಮಗಳಲ್ಲಿ ಕೋವಿಡ್ ಲಕ್ಷಣಗಳಿರುವವರನ್ನು ಟೆಸ್ಟ್ ಮಾಡಿಸಿ ಈ ಗ್ರಾಮಗಳನ್ನು ಕೋವಿಡ್ ಮುಕ್ತ ಎಂಬ ಬೋರ್ಡ್ ಹಾಕುವ ಮಟ್ಟಕ್ಕೆ ಕೆಲಸ ಮಾಡಬೇಕಾಗಿದೆ. ಅದೇ ರೀತಿ ಕೋವಿಡ್‍ಗೆ ಲಸಿಕೆಯನ್ನು ಹಾಕಲಾಗುತ್ತಿದ್ದು ಗ್ರಾಮಗಳಲ್ಲಿ ಎಲ್ಲರಿಗೂ ಲಸಿಕೆಯನ್ನು ಹಾಕಿಸುವ ಮೂಲಕ ಲಸಿಕೆ ಮುಕ್ತಗ್ರಾಮ ಎಂದು ಫಲಕವನ್ನು ಹಾಕುವ ನಿಟ್ಟಿನಲ್ಲಿ ಕೆಲಸ ಮಾಡುವ ಮೂಲಕ ಬೇರೆಯವರಿಗೆ ಮಾದರಿಯಾಗುವ ನಿಟ್ಟಿನಲ್ಲಿ ಇಲ್ಲಿನ ಅಧಿಕಾರಿಗಳು ಕೆಲಸ ಮಾಡುವಂತಾಗಬೇಕೆಂದರು.

ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ, ಜಿಪಂ ಸಿಇಒ ಡಾ;ಕೆ.ನಂದಿನಿದೇವಿ, ಎಸ್ಪಿ ಜಿ.ರಾಧಿಕಾ, ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣ, ಡಿಎಚ್‍ಒ ಡಾ; ಪಾಲಾಕ್ಷ, ಜಿಲ್ಲಾ ಸರ್ಜನ್ ಡಾ;ಬಸವರಾಜಪ್ಪ, ಜಿಲ್ಲಾ ಸರ್ವೆಕ್ಷಣಾಧಿಕಾರಿ ಡಾ; ರಂಗನಾಥ್, ಜಿಲ್ಲಾ ಬಿ.ಸಿ.ಎಂ ಅಧಿಕಾರಿ ಅವೀನ್ ಉಪಸ್ಥಿತರಿದ್ದರು.

Click to comment

Leave a Reply

Your email address will not be published. Required fields are marked *

Latest

Home

  ಸುದ್ದಿಒನ್, ದಾವಣಗೆರೆ, (ಆ.05): ರೈತರಿಗೆ ಕೃಷಿ ಚಟುವಟಿಕೆ ಅತ್ಯವಶ್ಯಕವಾಗಿ ಬೇಕಾಗಿರುವ ಟ್ರಾಕ್ಟರ್ ಹಾಗೂ ಕೃಷಿ ಯಂತ್ರೋಪಕರಣಗಳಿಗೆ ಎಂಆರ್‌ಪಿ ದರ ನಿಗದಿಪಡಿಸುವಂತೆ ಸಂಸದ ಜಿ.ಎಂ. ಸಿದ್ದೇಶ್ವರ್ ಮನವಿ ಮಾಡಿದ್ದಾರೆ. ದೆಹಲಿಯ ಕೃಷಿ ಭವನದಲ್ಲಿ...

ಚಿತ್ರದುರ್ಗ

ಸುದ್ದಿಒನ್, ಚಿತ್ರದುರ್ಗ, (ಆ.05) : ಜನಸ್ನೇಹಿಯಾಗಿ ಅಧಿಕಾರಿಗಳು ಕರ್ತವ್ಯ ನಿರ್ವಹಿಸಿದರೆ ಅವರ ಹೆಸರು ಶಾಶ್ವತವಾಗಿರುತ್ತದೆ ಎಂಬುದು ಚಿತ್ರದುರ್ಗ ಜಿಲ್ಲಾಧಿಕಾರಿಯೇ ಸಾಕ್ಷಿಯಾಗಿದ್ದಾರೆ. ಜಿಲ್ಲೆಗೆ ಕಾಲಿಟ್ಟ ದಿನದಿಂದಲೂ ಜನರ ನೋವು ನಲಿವಿಗೆ ತಾಯಿಯಂತೆ ಕಿವಿಯಾಗಿದ್ದಾರೆ. ಮೊಳಕಾಲ್ಮೂರು...

ಪ್ರಮುಖ ಸುದ್ದಿ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ಸಹಜ. ಸಾಕಷ್ಟು ಜನ ರೈತರ ಬೆಳೆ ನಾಶವಾಗಿದೆ. ಇದೀಗ ಮೂಡಿಗೆರೆ ತಾಲೂಕಿನ ಕಾರ್ ಬೈಲ್ ಗ್ರಾಮದಲ್ಲೂ ರೈತ ಬೆಳೆನಾಶವಾಗಿರೋ ಘಟನೆ ನಡೆದಿದೆ. ಕಾರ್ ಬೈಲ್ ಗ್ರಾಮದ ತೋಟವೊಂದಕ್ಕೆ...

ಪ್ರಮುಖ ಸುದ್ದಿ

ಬೆಂಗಳೂರು: ಯಡಿಯೂರಪ್ಪ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ನೆಕ್ಸ್ಟ್ ಸಿಎಂ ಯಾರಾಗ್ತಾರೆ ಅನ್ನೋ ರೇಸ್ ನಲ್ಲಿ ತೀರಾ ಹತ್ತಿರದಲ್ಲಿ ಕಾಂಪೀಟೇಷನ್ ಕೊಟ್ಟವರು ಅರವಿಂದ್ ಬೆಲ್ಲದ್. ಸಾಕಷ್ಟು ಜನರು ಸಾಲಿನಲ್ಲಿದ್ರು ಅರವಿಂದ್ ಬೆಲ್ಲದ್...

ಪ್ರಮುಖ ಸುದ್ದಿ

ಬೆಂಗಳೂರು: ಬಸವರಾಜ್ ಬೊಮ್ಮಾಯಿ ಅವರ ನೇತೃತ್ವದ ಸರ್ಕಾರ 5 ಜನ ಐಎಎಸ್ ಅಧಿಕಾರಿಗಳನ್ನ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಜೊತೆಗೆ ಸಿಎಂ ಪ್ರಧಾನ ಕಾರ್ಯದರ್ಶಿಯಾಗಿ ಮಂಜುನಾಥ್ ಪ್ರಸಾದ್ ರನ್ನ ನೇಮಕ ಮಾಡಲಾಗಿದೆ. ವಾರ್ತಾ...

ಪ್ರಮುಖ ಸುದ್ದಿ

  ಸುದ್ದಿಒನ್, ಚಿತ್ರದುರ್ಗ, (ಆ.05) : ಹಿಂದುಳಿದ ವರ್ಗಗಳ ನಾಯಕಿ, ರಾಜ್ಯದ ಗೊಲ್ಲ ಸಮುದಾಯದ ಏಕೈಕ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಅವರಿಗೆ ಸಚಿವ ಸ್ಥಾನ ಕೈತಪ್ಪಿದಕ್ಕೆ ಬೆಂಬಲಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಗರದ...

You May Also Like

ಆರೋಗ್ಯ

ಮಾಹಿತಿ: ಮಂಜುನಾಥ ಯಾದವ್ (97417 38979) ಬೇಳೆಕಟ್ಟು ಸಾರು ಅಂದ್ರೆ ಯಾರಿಗಿಷ್ಟ ಇಲ್ಲ ಹೇಳಿ. ಎರಡ್ಮೂರು ದಿನ ಕೂಡ ಈ ಸಾಂಬಾರ್ ತಿನ್ನೋದು ಅಂದ್ರೆ ಟೇಸ್ಟೋ ಟೇಸ್ಟೂ..ಆದ್ರೆ ಕೆಲವೊಬ್ರಿಗೆ ಈ ಸಾಂಬಾರ್ ಮಾಡೋಕೆ...

ಪ್ರಮುಖ ಸುದ್ದಿ

ಮುಂಬೈ : ಮುಂಬೈ ಬೆಡಗಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಪೊಲೀಸರ ವಶದಲ್ಲಿದ್ದಾರೆ. ರಾಜ್ ಕುಂದ್ರಾ ವಿಚಾರಣೆ ನಡೆಯುತ್ತಿದ್ದು, ಒಂದೊಂದೆ ವಿಚಾರಗಳು ಬಯಲಿಗೆ ಬರ್ತಿವೆ. ಇದೀಗ ಅಶ್ಲೀಲ ವಿಡಿಯೋಗೆ ಸಂಬಂಧಿಸಿದಂತೆ ರಾಜ್...

ಆರೋಗ್ಯ

ನಮ್ಮ ಸುತ್ತ ಮುತ್ತ ಸಣ್ಣ ಪುಟ್ಟ ಅಂಗಡಿಗಳಲ್ಲಿ ಸಿಗುವ ವಸ್ತುವನ್ನ ನಾವೂ ನೆಗ್ಲೆಕ್ಟ್ ಮಾಡ್ತೀವಿ. ಚಿಕ್ಕವರಿದ್ದಾಗ ಬಾಯಿ ಚಪ್ಪರಿಸಿಕೊಂಡು ತಿನ್ನುವ ಪದಾರ್ಥಗಳನ್ನ ಬೆಳೀತಾ ಬೆಳೀತಾ ಮರೆತೆ ಹೋಗ್ತೀವಿ. ಆದ್ರೆ ಅಂದು ಖುಷಿಗಾಗಿ ತಿನ್ನುವ...

ಪ್ರಮುಖ ಸುದ್ದಿ

ಕಾಬೂಲ್: ಕಂಧರ್ ಪ್ರಾಂತ್ಯದ ಜೀರೊಯ್ ಜಿಲ್ಲೆಯಲ್ಲಿ ಅಫ್ಘಾನಿಸ್ತಾನದ ಭದ್ರತಾ ಪಡೆಗಳು ನಡೆಸಿದ ವೈಮಾನಿಕ ದಾಳಿಯಲ್ಲಿ ಹೆಚ್ಚಿನ ಸಂಖ್ಯೆಯ ಉಗ್ರರು ಹತರಾಗಿದ್ದಾರೆ. ಮತ್ತೆ ಕೆಲವರು ಗಾಯಗೊಂಡಿದ್ದಾರೆ. ಪ್ರಸ್ತುತ, ಇದಕ್ಕೆ ಸಂಬಂಧಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ...

Copyright © 2021 Suddione. Kannada online news portal

error: Content is protected !!