ಜಮ್ಮು-ಕಾಶ್ಮೀರ ಪ್ರವಾಸಕ್ಕೆ ತೆರಳಿರುವವರ ಮಾಹಿತಿಗಾಗಿ ಸಹಾಯವಾಣಿ ಆರಂಭ

0 Min Read

ಚಿತ್ರದುರ್ಗ. ಏ.23: ಕಾಶ್ಮೀರದ ಪಹಲ್‍ಗಾಮದಲ್ಲಿ ಉಗ್ರರ ದಾಳಿಯಿಂದ ಕನ್ನಡಿಗರಿಬ್ಬರು ಸಾವಿಗೀಡಾಗಿರುವುದು ವಿಷಾದನೀಯ ಸಂಗತಿ. ಆದ್ದರಿಂದ ಜಮ್ಮು-ಕಾಶ್ಮೀರದ ಪ್ರವಾಸಕ್ಕೆ ತೆರಳಿರುವ ಕನ್ನಡಿಗರನ್ನು ರಾಜ್ಯಕ್ಕೆ ಮರಳಿ ತರಲು ರಾಜ್ಯ ಸರ್ಕಾರವು ಪ್ರಯತ್ನಿಸುತ್ತಿದೆ.

ಕರ್ನಾಟಕದಲ್ಲಿ ಪ್ರವಾಸ ನಿರ್ವಹಿಸುತ್ತಿರುವ ಪ್ರವಾಸಿ ಕಾರ್ಯಾಚರಣೆದಾರರು (Tour Operators & Travel Agents) ತಮ್ಮ ಮೂಲಕ ಜಮ್ಮು-ಕಾಶ್ಮೀರಕ್ಕೆ ಪ್ರವಾಸಕ್ಕೆ ತೆರಳಿರುವ ಪ್ರಯಾಣಿಕರ ವಿವರಗಳನ್ನು ಈ ಕೆಳಕಂಡ ಸಹಾಯವಾಣಿಗೆ ನೀಡಬೇಕೆಂದು ಕೋರಿದೆ.

ಜಮ್ಮು-ಕಾಶ್ಮೀರಕ್ಕೆ ಪ್ರವಾಸಕ್ಕೆ ತೆರಳಿರುವ ಪ್ರವಾಸಿಗರ ಸಂಬಂಧಿಕರು ಅಥವಾ ಪರಿಚಯಸ್ಥರು ಪ್ರವಾಸಕ್ಕೆ ತೆರಳಿರುವವರ ವಿವರಗಳನ್ನು 080-43344334, 080-43344335, 080-43344336, 080-43344342 ಈ ಸಹಾಯವಾಣಿಗೆ ಮಾಹಿತಿ ನೀಡಬೇಕು ಎಂದು ಪ್ರವಾಸೋದ್ಯಮ ಇಲಾಖೆ ನಿರ್ದೇಶಕರು ಕೋರಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *

Enable Notifications OK No thanks