Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ ಜಿಲ್ಲೆಯ ಕುಡಿಯುವ ನೀರು ಸಮಸ್ಯೆ ನಿರ್ವಹಣೆಗೆ ಸಹಾಯವಾಣಿ ಪ್ರಾರಂಭ

---Advertisement---

 

ಚಿತ್ರದುರ್ಗ ಫೆ. 16 :   ಜಿಲ್ಲೆಯಲ್ಲಿ ಜನ ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಕಂಡುಬಂದಲ್ಲಿ, ತ್ವರಿತವಾಗಿ ಸ್ಪಂದಿಸುವಂತಾಗಲು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಹಾಯವಾಣಿ 08194-222538 ಪ್ರಾರಂಭಿಸಲಾಗಿದೆ.
ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯ ಎಲ್ಲ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳು ಎಂಬುದಾಗಿ ಸರ್ಕಾರ ಘೋಷಿಸಿದ್ದು, ಬರಪೀಡಿತ ತಾಲ್ಲೂಕು ವ್ಯಾಪ್ತಿಯಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ಈಗಾಗಲೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿರುತ್ತದೆ.
ಜಿಲ್ಲೆಯ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಕಂಡುಬಂದಲ್ಲಿ, ಸಾರ್ವಜನಿಕರು ಚಿತ್ರದುರ್ಗ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿನ ಸಾರ್ವಜನಿಕ ಕುಂದುಕೊರತೆ ಕೋಶದಲ್ಲಿ ಸ್ಥಾಪಿಸಲಾಗಿರುವ ಸಹಾಯವಾಣಿ ಸಂಖ್ಯೆ 08194-222538 ಸಂಖ್ಯೆಗೆ ಕರೆ ಮಾಡಿ, ತಮ್ಮ ಸಮಸ್ಯೆಗಳನ್ನು ದಾಖಲಿಸಬಹುದಾಗಿದೆ.  ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ವೆಂಕಟೇಶ್ ಟಿ. ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...