Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮೇ.25 ರಂದು ಹೇಮರಡ್ಡಿ ಮಲ್ಲಮ್ಮ ಜಯಂತ್ಯೋತ್ಸವ ಹಾಗೂ ಪ್ರತಿಭಾ ಪುರಸ್ಕಾರ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಮೇ. 22 : ಜಿಲ್ಲಾ ವೀರಶೈವ ಲಿಂಗಾಯತ ಹೇಮರಡ್ಡಿ ಮಲ್ಲಮ್ಮ ಸಮಾಜದಿಂದ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಜಯಂತ್ಯೋತ್ಸವ ಹಾಗೂ ಪ್ರತಿಭಾ ಪುರಸ್ಕಾರ-2026 ಕಾರ್ಯಕ್ರಮ ಮೇ.25 ರಂದು ಬೆಳಿಗ್ಗೆ 11 ಗಂಟೆಗೆ ನೀಲಕಂಠೇಶ್ವರಸ್ವಾಮಿ ಸಮುದಾಯ ಭವನದಲ್ಲಿ ನಡೆಯಲಿದೆ. ಶಾಸಕ ಕೆ.ಸಿ.ವೀರೇಂದ್ರಪಪ್ಪಿ ಸಮಾರಂಭ ಉದ್ಘಾಟಿಸುವರು.

 

ಜಿಲ್ಲಾ ವೀರಶೈವ ಲಿಂಗಾಯತ ಹೇಮರಡ್ಡಿ ಮಲ್ಲಮ್ಮ ಸಮಾಜದ ಅಧ್ಯಕ್ಷರಾದ ಡಾ.ಎಲ್.ಪಾಲಾಕ್ಷಯ್ಯ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಬಳ್ಳಾರಿ ಮಹಾನಗರ ಪಾಲಿಕೆ ಆಯುಕ್ತರಾದ ಪಿ.ಎಸ್.ಮಂಜುನಾಥ್ ಆಗಮಿಸಲಿದ್ದಾರೆ. ಪರಮಾಣು ಶಕ್ತಿ ಇಲಾಖೆ ಮುಂಬೈನ ಮುಖ್ಯ ಅಭಿಯಂತರರಾದ ಕೆ.ಶಿವಪ್ರಕಾಶ್ ಇವರನ್ನು ಸನ್ಮಾನಿಸಲಾಗುವುದು.

ಹಿರಿಯೂರಿನ ಗಿರೀಶ ಪದವಿಪೂರ್ವ ಕಾಲೇಜಿನ ನಿವೃತ್ತ ಉಪ ಪ್ರಾಂಶುಪಾಲರಾದ ಹೆಚ್.ಆರ್.ತಿಪ್ಪೇಸ್ವಾಮಿ ಹೇಮರಡ್ಡಿ ಮಲ್ಲಮ್ಮನ ಕುರಿತು ಉಪನ್ಯಾಸ ನೀಡಲಿದ್ದಾರೆ. ಅಂದು ಬೆಳಿಗ್ಗೆ 9 ಗಂಟೆಗೆ ರೋಟರಿ ಬಾಲಭವನ ಶಾಲೆ ಪಕ್ಕದಲ್ಲಿರುವ ಸಮಾಜದ ಕಚೇರಿಯಿಂದ ಹೇಮರಡ್ಡಿ ಮಲ್ಲಮ್ಮನವರ ಭಾವಚಿತ್ರದ ಮೆರವಣಿಗೆ ಹೊರಡಲಿದೆ. ಸಮಾಜದ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಜಿಲ್ಲಾ ವೀರಶೈವ ಲಿಂಗಾಯತ ಹೇಮರಡ್ಡಿ ಮಲ್ಲಮ್ಮ ಸಮಾಜದ ಅಧ್ಯಕ್ಷರಾದ ಡಾ.ಎಲ್.ಪಾಲಾಕ್ಷಯ್ಯ
ಪ್ರಧಾನ ಕಾರ್ಯದರ್ಶಿ ಡಿ.ಟಿ.ಶಿವಾನಂದಪ್ಪ ಇವರುಗಳು ಮನವಿ ಮಾಡಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now