in ,

ಮೇ. 29 ರಂದು ಹೇಮರಡ್ಡಿ ಮಲ್ಲಮ್ಮ ಜಯಂತಿ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ : ಡಿ.ಟಿ.ಶಿವಾನಂದಪ್ಪ

suddione whatsapp group join

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಚಿತ್ರದುರ್ಗ, (ಮೇ.26) : ಜಿಲ್ಲಾ ವೀರಶೈವ ಲಿಂಗಾಯಿತ ಹೇಮರಡ್ಡಿ ಮಲ್ಲಮ್ಮ ಸಮಾಜದ ವತಿಯಿಂದ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಜಯಂತಿ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ ಮೇ. 29 ರಂದು ಬೆಳಿಗ್ಗೆ 10-30 ಕ್ಕೆ ತ.ರಾ.ಸು. ರಂಗಮಂದಿರದಲ್ಲಿ ನಡೆಯಲಿದೆ ಎಂದು ಜಿಲ್ಲಾ ವೀರಶೈವ ಲಿಂಗಾಯಿತ ಹೇಮರಡ್ಡಿ ಮಲ್ಲಮ್ಮ ಸಮಾಜದ ಪ್ರಧಾನ ಕಾರ್ಯದರ್ಶಿ ಡಿ.ಟಿ.ಶಿವಾನಂದಪ್ಪ ತಿಳಿಸಿದರು.

ಸಮಾಜದ ಕಚೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಅಂದು ಬೆಳಿಗ್ಗೆ 9 ಕ್ಕೆ ನೀಲಕಂಠೇಶ್ವರಸ್ವಾಮಿ ದೇವಸ್ಥಾನದಿಂದ ವಿವಿಧ ಜಾನಪದ ಕಲಾತಂಡಗಳೊಂದಿಗೆ ರಂಗಮಂದಿರದವರೆಗೆ ಹೇಮರಡ್ಡಿ ಮಲ್ಲಮ್ಮ ಭಾವಚಿತ್ರದೊಂದಿಗೆ ಮೆರವಣಿಗೆ ಹೊರಡಲಿದೆ.

ನಂತರ ನಡೆಯುವ ಕಾರ್ಯಕ್ರಮವನ್ನು ಶಾಸಕ ಕೆ.ಸಿ.ವೀರೇಂದ್ರಪಪ್ಪಿ ಉದ್ಗಾಟಿಸಲಿದ್ದಾರೆ. ಸಮಾಜದ ಅಧ್ಯಕ್ಷರಾದ ಜಿ.ಚಿದಾನಂದಪ್ಪ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಡಿ.ಸಿ.ಸಿ.ಬ್ಯಾಂಕ್ ನಿರ್ದೇಶಕ ಹೆಚ್.ಟಿ.ನಾಗಿರೆಡ್ಡಿ, ಡಿ.ಡಿ.ಪಿ.ಐ. ಕೆ.ರವಿಶಂಕರ್ ರೆಡ್ಡಿ, ಭದ್ರಾ ಮೇಲ್ದಂಡೆ ಯೋಜನೆ ಹಿರಿಯೂರು ಕ್ಯಾಂಪ್‍ನ ಕಾರ್ಯಪಾಲಕ ಇಂಜಿನಿಯರ್ ಆರ್.ಚಂದ್ರಮೌಳಿ ಇವರುಗಳು ಆಗಮಿಸಲಿದ್ದಾರೆ. ಡಾ.ಟಿ.ಎನ್. ನಿರಂಜನಪ್ರಭು ಉಪನ್ಯಾಸ ನೀಡಲಿದ್ದಾರೆಂದು ಹೇಳಿದರು.

ಹತ್ತನೆ ತರಗತಿ ಹಾಗೂ ಪಿ.ಯು.ಸಿ. ಯಲ್ಲಿ ಅತಿ ಹೆಚ್ಚು ಅಂಕಗಳನ್ನು ಪಡೆದಿರುವ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕರಿಸಲಾಗುವುದು. ಸಮಾಜದ ಎಲ್ಲಾ ಬಾಂಧವರು ಮತ್ತು ವೀರಶೈವರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಡಿ.ಟಿ.ಶಿವಾನಂದಪ್ಪ ಮನವಿ ಮಾಡಿದರು.

ಜಿಲ್ಲಾ ವೀರಶೈವ ಲಿಂಗಾಯಿತ ಹೇಮರಡ್ಡಿ ಮಲ್ಲಮ್ಮ ಸಮಾಜದ ಅಧ್ಯಕ್ಷ ಜಿ.ಚಿದಾನಂದಪ್ಪ ಮಾತನಾಡಿ ಪ್ರತಿ ವರ್ಷವೂ ಮೇ. 10 ರಂದು ಹೇಮರಡ್ಡಿ ಮಲ್ಲಮ್ಮ ಜಯಂತಿಯನ್ನು ಆಚರಿಸಿಕೊಂಡು ಬರಲಾಗುತ್ತಿತ್ತು. ಆದರೆ ಈ ಬಾರಿ ವಿಧಾನಸಭೆ ಚುನಾವಣೆ ಇದ್ದುದರಿಂದ ಅನಿವಾರ್ಯವಾಗಿ ಮೇ.29 ಕ್ಕೆ ಆಚರಿಸುತ್ತಿದ್ದೇವೆ. ಸಮಾಜದ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಕೋರಿದರು.

ನಾಗರಾಜ್ ಸಂಗಂ, ಡಾ.ಪಾಲಾಕ್ಷಪ್ಪ, ಶಶಿಧರ್, ಶ್ರೀನಿವಾಸ್, ಬಸವರಾಜ್, ನ್ಯಾಯವಾದಿ ರಘು ಹಾಗೂ ಕಾರ್ಯಕಾರಿ ಮಂಡಳಿಯವರು ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

What do you think?

Written by suddionenews

Leave a Reply

Your email address will not be published. Required fields are marked *

GIPHY App Key not set. Please check settings

ಮಗನ ಸೋಲಿಗೆ ಕಾರಣ ಏನೆಂದು ತಿಳಿಸಿದ ಮಾಜಿ ಸಿಎಂ ಕುಮಾರಸ್ವಾಮಿ..!

ಜೂನ್ 1 ರಂದು ಆಕಾಶವಾಣಿಯಲ್ಲಿ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗದ ಫೋನ್ ಇನ್ ನೇರ ಪ್ರಸಾರ ಕಾರ್ಯಕ್ರಮ