Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪಠ್ಯ ಪುಸ್ತಕದಲ್ಲಿ ಇನ್ಮುಂದೆ ‘ಇಂಡಿಯಾ’ ಬದಲಿಗೆ ‘ಭಾರತ್’ ಬಳಕೆ ; ಎನ್‌ಸಿಇಆರ್‌ಟಿ ನಿರ್ಧಾರ

Facebook
Twitter
Telegram
WhatsApp

 

ನವದೆಹಲಿ: ಇಂಡಿಯಾ ಎಂಬ ಹೆಸರನ್ನು ತೆಗೆದು ಭಾರತ್ ಎಂದು ಇಡಬೇಕು ಎಂಬ ವಾದ ಹಲವು ದಿನಗಳಿಂದಲು ನಡೆಯುತ್ತಲೆ ಇದೆ. ಸಾಕಷ್ಟು ಪರ ವಿರೋಧವೂ ಎದ್ದಿದೆ. ಇದರ ನಡುವೆ ಮಕ್ಕಳ ಶಾಲಾ ಪಠ್ಯಪುಸ್ತಕದಲ್ಲಿ ಇಂಡಿಯಾ ಬದಲು ಭಾರತ್ ಎಂದು ಬಳಸಿ ಎಂಬ ಸೂಚನೆಯನ್ನು ಎನ್ ಸಿ ಇ ಆರ್ ಟಿ ಸೂಚನೆ ನೀಡಿದೆ

ನ್ಯಾಷನಲ್ ಕೌನ್ಸಿಲ್ ಆಫ್ ಎಜುಕೇಶನಲ್ ರಿಸರ್ಚ್ ಆ್ಯಂಡ್ ಟ್ರೈನಿಂಗ್, ಈಗಾಗಲೇ ಉನ್ನತಮಟ್ಟದ ಸಮಿತಿಯ ಅನುಮೋದನೆಯನ್ನು ಪಡೆದಿದೆ. ಹೀಗಾಗಿಯೇ ಪಠ್ಯಪುಸ್ತಕದಲ್ಲಿ ಇಂಡಿಯಾ ಬದಲು ಭಾರತ್ ಬಳಸಲು ಸೂಚನೆ ನೀಡಲಾಗಿದೆ. ಮುಂದಿನ ಪಠ್ಯಪುಸ್ತಕಗಳಲ್ಲಿ ಇಂಡಿಯಾ ಬದಲಿಗೆ ಭಾರತ್ ಎಂದು ಬದಲಿಸಲಾಗುತ್ತಿದೆ. ಅಷ್ಟೇ ಅಲ್ಲ ಪ್ರಾಚೀನ ಇತಹಾಸದ ಬದಲಿಗೆ ಶಾಸ್ತ್ರೀಯ ಇತಿಹಾಸ ಪರಿಚಯಿಸಲು ಅವಿರೋಧವಾಗಿ ಶಿಫಾರಸು ಮಾಡಿದೆ.

ಭಾರತ್ ಎಂಬುದು ಹಳೆಯ ಹೆಸರು. ಭಾರತ ಎಂಬ ಹೆಸರಿನ ಬಳಕೆಯು 7,000 ವರ್ಷಗಳಷ್ಟು ಹಳೆಯದು. ಅಂದರೆ ವಿಷ್ಣು ಪುರಾಣದಂತಹ ಪ್ರಾಚೀನ ಗ್ರಂಥಗಳಲ್ಲೂ ಕೂಡ ಅದರ ಉಲ್ಲೇಖವಿದೆ. ಹಾಗಾಗಿ, ಹೊಸ ಎನ್‌ಸಿಇಆರ್‌ಟಿ ಪಠ್ಯಪುಸ್ತಕಗಳ ಪರಿಷ್ಕರಣೆಗೆ ಸಂಬಂಧಿಸಿ ನೇಮಕ ಮಾಡಲಾಗಿದ್ದ ಏಳು ಸದಸ್ಯರ ಸಮಿತಿಯು ಸರ್ವಾನುಮತದಿಂದ ಈ ಶಿಫಾರಸು ಮಾಡಿದೆ ಎಂದು ಸಮಿತಿಯ ಅಧ್ಯಕ್ಷ ಸಿಐ ಐಸಾಕ್ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಸಿಮೆಣಸಿನಕಾಯಿ ಗ್ಯಾಸ್ಟ್ರಿಕ್ ಅಲ್ಲ.. ಇದರಿಂದ ಇದೆ ಅನೇಕ ಲಾಭಗಳು

ಸುದ್ದಿಒನ್ : ಹಸಿರು ಮೆಣಸಿನಕಾಯಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಅರೋಗ್ಯದ ದೃಷ್ಟಿಯಿಂದ ಇದು ಅನೇಕ ಪ್ರಯೋಜನಗಳನ್ನು ಹೊಂದಿದೆ. ಹಸಿರು ಮೆಣಸು ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ ಮತ್ತು ಕಣ್ಣಿನ ದೃಷ್ಟಿ ಸುಧಾರಿಸುತ್ತದೆ. ಕಣ್ಣಿನ ಸಮಸ್ಯೆಗಳನ್ನು

ಇಂದಿನ ರಾಶಿ ಭವಿಷ್ಯ. ಕರ್ಕಾಟಕ ರಾಶಿಯವರಿಗೆ ಅಷ್ಟಮ ಶನಿ ಮತ್ತು ಸಿಂಹ ರಾಶಿಯವರಿಗೆ ಸಪ್ತಮ ಶನಿ ಏನು ಸಮಸ್ಯೆ ಕಾಡಬಹುದು?

ಇಂದಿನ ರಾಶಿ ಭವಿಷ್ಯ. ಕರ್ಕಾಟಕ ರಾಶಿಯವರಿಗೆ ಅಷ್ಟಮ ಶನಿ ಮತ್ತು ಸಿಂಹ ರಾಶಿಯವರಿಗೆ ಸಪ್ತಮ ಶನಿ ಏನು ಸಮಸ್ಯೆ ಕಾಡಬಹುದು? ಸೋಮವಾರ ರಾಶಿ ಭವಿಷ್ಯ -ಮೇ-6,2024 ಸೂರ್ಯೋದಯ: 05:51, ಸೂರ್ಯಾಸ್ತ : 06:34 ಶಾಲಿವಾಹನ

ಹಿರಿಯೂರು | ಬೈಕ್ ಅಪಘಾತ, ಸ್ಥಳದಲ್ಲೇ ಓರ್ವ ಸಾವು..!

ಸುದ್ದಿಒನ್,  ಹಿರಿಯೂರು, ಮೇ. 05 : ನಗರದ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಆಲೂರು ಕ್ರಾಸ್ ಚಾನೆಲ್ ಬಳಿ ಸ್ಕೂಟಿ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಾಯಗೊಂಡ

error: Content is protected !!