ಎಲ್ಲೆಲ್ಲಾ ಮಳೆಯಾಗಲಿದೆ, ಯಾವೆಲ್ಲಾ ಜಿಲ್ಲೆಗಳಿಗೆ ಅಲರ್ಟ್ ಘೋಷಣೆ ಮಾಡಿದೆ ಎಂಬ ಡಿಟೈಲ್ ಇಲ್ಲಿದೆ..!

ಬೆಂಗಳೂರು: ರಾಜ್ಯದಲ್ಲಿ ಮಳೆ ಜೋರಾಗಿದೆ. ಹೀಗಾಗಿ ಕೆಲವೊಂದು ಜಿಲ್ಲೆಗಳಲ್ಲಿ ಹೆಚ್ಚು‌ ಮಳೆಯಾಗಲಿದ್ದು, ಹವಮಾನ ಇಲಾಖೆ ವರದಿ ನೀಡಲಾಗಿದೆ. ದಕಗಷಿಣ ಕನ್ನಡ ಹಾಗುಇ ಉಡುಪಿಗೆ ಗುಡುಗು ಸಹಿತ ಬಿರುಗಾಳಿ ಮಳೆಯಾಗಲಿದೆ. ಹಾಗೇ ಬೆಂಗಳೂರು ನಗರಕ್ಕೆ ಸಾಧಾರಣ ಮಳೆಯಾಗಲಿದೆ ಎಂದು ವರದಿ ನೀಡಿದೆ.

ಇನ್ನು ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನಕ್ಕೆ ಭಾರೀ ಮಳೆಯ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗಿದ್ದು, ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಬೆಂಗಳೂರು ನಗರದ ಜೊತೆಗೆ ಬೆಳಗಾವಿ ಹಾಗೂ ಕೊಡಗಿಗೂ ಸಾಧಾರಣ ಮಳೆಯ ವರದಿಯನ್ನು ನೀಡಲಾಗಿದೆ. ಮುಂದಿನ ಎರಡು ದಿನ ಅಂದ್ರೆ 6-7 ರಂದು ಕೂಡ ಕೊಡಗು ಭಾಗದಲ್ಲಿ ಮಳೆಯಾಗಲಿದ್ದು, ಜುಲೈ 11ರವರೆಗೂ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಶಿವಮೊಗ್ಗ ಭಾಗದಲ್ಲಿ ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ ಮಾಡಿವೆ.

ರಾಜ್ಯದಲ್ಲಿ ಮಳೆ ಹೆಚ್ಚಾಗಿರುವ ಕಾರಣ ಎಲ್ಲಾ ಡ್ಯಾಂಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ತುಂಬೆ ಡ್ಯಾಂ ಸೇರಿದಂತೆ ನೇತ್ರಾವತಿ ಉಪ್ಪಿನಂಗಡಿ ಭಾಗದಲ್ಲಿ ತುಂಬಿ ಹರಿಯುತ್ತಿದೆ. ತುಂಗಾ, ಶರಾವತಿ, ಮಾಲತಿ, ಕುಶಾವತಿ, ಕುಮದ್ವತಿ, ವರದಾ, ದಂಡಾವತಿ ನದಿಗಳು ತುಂಬಿ ಹರಿಯುತ್ತಿವೆ. ತುಂಗಾ‌ಜಲಾಶಯಕ್ಕರ 56 ಸಾವಿರ ಕ್ಯೂಸೆಕ್ ನೀರು ಬರುತ್ತಿದ್ದು, 68‌ ಸಾವಿರ‌ ಕ್ಯೂಸೆಕ್ ನೀರನ್ನು ಹೊರ ಹರಿಸಲಾಗುತ್ತಿದೆ. ಲಿಂಗನಮಕ್ಕಿ ಜಲಾಶಯಕ್ಕೆ 41 ಸಾವಿರ, ಭದ್ರಕ್ಕೆ 22 ಸಾವಿರ ಕ್ಯೂಸೆಕ್ ನೀರು ಬರುತ್ತಿದೆ. ಲಿಂಗನಮಕ್ಕಿ ಮತ್ತು ಭದ್ರಾ ಜಲಾಶಯಗಳಿಗೆ ತಲಾ ಒಂದೂವರೆ ಅಡಿ ನೀರು ಬಂದಿದೆ.

Share This Article
Leave a Comment

Leave a Reply

Your email address will not be published. Required fields are marked *

Enable Notifications OK No thanks