ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
ಹೊಸ ಆರ್ಥಿಕ ವರ್ಷ ಏಪ್ರಿಲ್ 1ರಿಂದ ಆರಂಭವಾಗುತ್ತಿದ್ದಂತೆ, ಸಾರ್ವಜನಿಕರ ಖರ್ಚಿನ ಮೇಲೆ ಹೆಚ್ಚುವರಿ ಭಾರ ಬೀಳುವ ಸೂಚನೆಗಳು ಸ್ಪಷ್ಟವಾಗಿವೆ. ವಿದ್ಯುತ್, ನೀರು ಹಾಗೂ ಟೋಲ್ ದರಗಳಲ್ಲಿ ಏರಿಕೆ ಜಾರಿಗೆ ಬರುತ್ತಿದ್ದು, ಮಧ್ಯಮ ವರ್ಗದ ಜನರ ದಿನನಿತ್ಯದ ಜೀವನ ನಿರ್ವಹಣೆ ಮತ್ತಷ್ಟು ಕಠಿಣವಾಗಲಿದೆ.
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಸಗಟು ಬೆಲೆ ಸೂಚ್ಯಂಕದ ಆಧಾರದಲ್ಲಿ ಟೋಲ್ ದರವನ್ನು ಶೇ. 3ರಿಂದ 5ರಷ್ಟು ಹೆಚ್ಚಿಸಿದೆ. ಇದರ ಪರಿಣಾಮವಾಗಿ ಕಾರುಗಳಿಗೆ ಪ್ರತಿ ಪ್ರಯಾಣಕ್ಕೆ ₹5ರಿಂದ ₹10ರವರೆಗೆ ಹೆಚ್ಚುವರಿ ಶುಲ್ಕ ವಿಧಿಸಲಾಗುತ್ತದೆ. ವಾಣಿಜ್ಯ ವಾಹನಗಳಿಗೆ ₹15ರಿಂದ ₹40ರವರೆಗೆ ದರ ಏರಿಕೆ ಅನ್ವಯವಾಗಲಿದೆ. ಜೊತೆಗೆ ವಾರ್ಷಿಕ ಪಾಸ್ ದರ ₹3,000ರಿಂದ ₹3,075ಕ್ಕೆ ಏರಿಕೆಯಾಗಿದೆ. ಇನ್ನುಮುಂದೆ ಟೋಲ್ ಪ್ಲಾಜಾಗಳಲ್ಲಿ ನಗದು ಪಾವತಿಯನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗುತ್ತದೆ.
ಬೆಂಗಳೂರಿನಲ್ಲಿ ನೀರಿನ ದರಕ್ಕೂ ಏರಿಕೆ ಜಾರಿಯಾಗಿದೆ. ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ನೀರಿನ ದರವನ್ನು ಶೇ. 3ರಷ್ಟು ಹೆಚ್ಚಿಸಿದ್ದು, ಇದರ ಪರಿಣಾಮವಾಗಿ ಮನೆಮಂದಿಯ ಮಾಸಿಕ ವೆಚ್ಚ ಹೆಚ್ಚುವ ಸಾಧ್ಯತೆ ಇದೆ.ವಿದ್ಯುತ್ ದರದಲ್ಲಿಯೂ ಪರಿಷ್ಕರಣೆ ಮಾಡಲಾಗಿದ್ದು, ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (KERC) ಎಸ್ಕಾಂಗಳ ನಷ್ಟವನ್ನು ಸರಿದೂಗಿಸಲು ಅನುಮೋದನೆ ನೀಡಿದೆ. ವಿಶೇಷವಾಗಿ ಕೈಗಾರಿಕೆ ಮತ್ತು ವಾಣಿಜ್ಯ ವಲಯದ ಗ್ರಾಹಕರಿಗೆ ಇದರ ಪರಿಣಾಮ ಹೆಚ್ಚಾಗಲಿದೆ. ಈ ದರ ಪರಿಷ್ಕರಣೆ 2025-26ನೇ ಸಾಲಿಗೆ ಪೂರ್ವಾನ್ವಯವಾಗಿ ಜಾರಿಯಾಗಲಿದೆ.
ಹಲವು ಆಡಳಿತಾತ್ಮಕ ಬದಲಾವಣೆಗಳೂ ಜಾರಿಗೆ ಬರುತ್ತಿವೆ. ಹೊಸ ಕಾರ್ಮಿಕ ಸಂಹಿತೆಯ ಪ್ರಕಾರ, ಉದ್ಯೋಗಿಯ ಮೂಲ ವೇತನವು ಒಟ್ಟು ವೇತನದ ಕನಿಷ್ಠ ಶೇ. 50ರಷ್ಟು ಇರಬೇಕು. ರೈಲ್ವೆ ಟಿಕೆಟ್ ರದ್ದುಪಡಿಸುವ ನಿಯಮಗಳಲ್ಲಿ ಬದಲಾವಣೆ ಮಾಡಲಾಗಿದ್ದು, ರೈಲು ಹೊರಡುವ 8 ಗಂಟೆಗಳ ಮೊದಲು ಮಾತ್ರ ರಿಫಂಡ್ ಸಿಗಲಿದೆ.
ಹೋಟೆಲ್ ಅಥವಾ ರೆಸ್ಟೊರೆಂಟ್‌ನಲ್ಲಿ ₹1 ಲಕ್ಷಕ್ಕಿಂತ ಹೆಚ್ಚಿನ ಬಿಲ್ ಬಂದಲ್ಲಿ ಪ್ಯಾನ್ ವಿವರ ನೀಡುವುದು ಕಡ್ಡಾಯವಾಗಿದೆ. ಹಾಗೆಯೇ, ಹೆಚ್‌ಆರ್‌ಎ ಸೌಲಭ್ಯ ಪಡೆಯುವ ನಗರಗಳ ಪಟ್ಟಿಗೆ ಬೆಂಗಳೂರು ಸೇರಿ ಇನ್ನೂ ನಾಲ್ಕು ನಗರಗಳು ಸೇರಿವೆ. ಮತ್ತೊಂದೆಡೆ, ಒಂದು ಹಣಕಾಸು ವರ್ಷದಲ್ಲಿ ₹10 ಲಕ್ಷಕ್ಕಿಂತ ಕಡಿಮೆ ಬ್ಯಾಂಕ್ ಠೇವಣಿಗೆ ಪ್ಯಾನ್ ನೀಡುವ ಅವಶ್ಯಕತೆ ಇರುವುದಿಲ್ಲ.ಹೊಸ ಆರ್ಥಿಕ ವರ್ಷದ ಆರಂಭವು ಸಾಮಾನ್ಯ ಜನರ ಮೇಲೆ ಆರ್ಥಿಕ ಒತ್ತಡ ಹೆಚ್ಚಿಸುವ ಸೂಚನೆ ನೀಡಿದ್ದು, ದಿನನಿತ್ಯದ ವೆಚ್ಚಗಳನ್ನು ಸಮರ್ಪಕವಾಗಿ ನಿರ್ವಹಿಸುವುದು ಸವಾಲಾಗುವ ಸಾಧ್ಯತೆ ಇದೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್