Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಏಪ್ರಿಲ್ 1ರಿಂದ ಜಾರಿಗೆ ಬರುವ ಪ್ರಮುಖ ಬದಲಾವಣೆಗಳು ಇಲ್ಲಿವೆ

---Advertisement---

ಹೊಸ ಆರ್ಥಿಕ ವರ್ಷ ಏಪ್ರಿಲ್ 1ರಿಂದ ಆರಂಭವಾಗುತ್ತಿದ್ದಂತೆ, ಸಾರ್ವಜನಿಕರ ಖರ್ಚಿನ ಮೇಲೆ ಹೆಚ್ಚುವರಿ ಭಾರ ಬೀಳುವ ಸೂಚನೆಗಳು ಸ್ಪಷ್ಟವಾಗಿವೆ. ವಿದ್ಯುತ್, ನೀರು ಹಾಗೂ ಟೋಲ್ ದರಗಳಲ್ಲಿ ಏರಿಕೆ ಜಾರಿಗೆ ಬರುತ್ತಿದ್ದು, ಮಧ್ಯಮ ವರ್ಗದ ಜನರ ದಿನನಿತ್ಯದ ಜೀವನ ನಿರ್ವಹಣೆ ಮತ್ತಷ್ಟು ಕಠಿಣವಾಗಲಿದೆ.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಸಗಟು ಬೆಲೆ ಸೂಚ್ಯಂಕದ ಆಧಾರದಲ್ಲಿ ಟೋಲ್ ದರವನ್ನು ಶೇ. 3ರಿಂದ 5ರಷ್ಟು ಹೆಚ್ಚಿಸಿದೆ. ಇದರ ಪರಿಣಾಮವಾಗಿ ಕಾರುಗಳಿಗೆ ಪ್ರತಿ ಪ್ರಯಾಣಕ್ಕೆ ₹5ರಿಂದ ₹10ರವರೆಗೆ ಹೆಚ್ಚುವರಿ ಶುಲ್ಕ ವಿಧಿಸಲಾಗುತ್ತದೆ. ವಾಣಿಜ್ಯ ವಾಹನಗಳಿಗೆ ₹15ರಿಂದ ₹40ರವರೆಗೆ ದರ ಏರಿಕೆ ಅನ್ವಯವಾಗಲಿದೆ. ಜೊತೆಗೆ ವಾರ್ಷಿಕ ಪಾಸ್ ದರ ₹3,000ರಿಂದ ₹3,075ಕ್ಕೆ ಏರಿಕೆಯಾಗಿದೆ. ಇನ್ನುಮುಂದೆ ಟೋಲ್ ಪ್ಲಾಜಾಗಳಲ್ಲಿ ನಗದು ಪಾವತಿಯನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗುತ್ತದೆ.

ಬೆಂಗಳೂರಿನಲ್ಲಿ ನೀರಿನ ದರಕ್ಕೂ ಏರಿಕೆ ಜಾರಿಯಾಗಿದೆ. ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ನೀರಿನ ದರವನ್ನು ಶೇ. 3ರಷ್ಟು ಹೆಚ್ಚಿಸಿದ್ದು, ಇದರ ಪರಿಣಾಮವಾಗಿ ಮನೆಮಂದಿಯ ಮಾಸಿಕ ವೆಚ್ಚ ಹೆಚ್ಚುವ ಸಾಧ್ಯತೆ ಇದೆ.ವಿದ್ಯುತ್ ದರದಲ್ಲಿಯೂ ಪರಿಷ್ಕರಣೆ ಮಾಡಲಾಗಿದ್ದು, ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (KERC) ಎಸ್ಕಾಂಗಳ ನಷ್ಟವನ್ನು ಸರಿದೂಗಿಸಲು ಅನುಮೋದನೆ ನೀಡಿದೆ. ವಿಶೇಷವಾಗಿ ಕೈಗಾರಿಕೆ ಮತ್ತು ವಾಣಿಜ್ಯ ವಲಯದ ಗ್ರಾಹಕರಿಗೆ ಇದರ ಪರಿಣಾಮ ಹೆಚ್ಚಾಗಲಿದೆ. ಈ ದರ ಪರಿಷ್ಕರಣೆ 2025-26ನೇ ಸಾಲಿಗೆ ಪೂರ್ವಾನ್ವಯವಾಗಿ ಜಾರಿಯಾಗಲಿದೆ.

ಹಲವು ಆಡಳಿತಾತ್ಮಕ ಬದಲಾವಣೆಗಳೂ ಜಾರಿಗೆ ಬರುತ್ತಿವೆ. ಹೊಸ ಕಾರ್ಮಿಕ ಸಂಹಿತೆಯ ಪ್ರಕಾರ, ಉದ್ಯೋಗಿಯ ಮೂಲ ವೇತನವು ಒಟ್ಟು ವೇತನದ ಕನಿಷ್ಠ ಶೇ. 50ರಷ್ಟು ಇರಬೇಕು. ರೈಲ್ವೆ ಟಿಕೆಟ್ ರದ್ದುಪಡಿಸುವ ನಿಯಮಗಳಲ್ಲಿ ಬದಲಾವಣೆ ಮಾಡಲಾಗಿದ್ದು, ರೈಲು ಹೊರಡುವ 8 ಗಂಟೆಗಳ ಮೊದಲು ಮಾತ್ರ ರಿಫಂಡ್ ಸಿಗಲಿದೆ.
ಹೋಟೆಲ್ ಅಥವಾ ರೆಸ್ಟೊರೆಂಟ್‌ನಲ್ಲಿ ₹1 ಲಕ್ಷಕ್ಕಿಂತ ಹೆಚ್ಚಿನ ಬಿಲ್ ಬಂದಲ್ಲಿ ಪ್ಯಾನ್ ವಿವರ ನೀಡುವುದು ಕಡ್ಡಾಯವಾಗಿದೆ. ಹಾಗೆಯೇ, ಹೆಚ್‌ಆರ್‌ಎ ಸೌಲಭ್ಯ ಪಡೆಯುವ ನಗರಗಳ ಪಟ್ಟಿಗೆ ಬೆಂಗಳೂರು ಸೇರಿ ಇನ್ನೂ ನಾಲ್ಕು ನಗರಗಳು ಸೇರಿವೆ. ಮತ್ತೊಂದೆಡೆ, ಒಂದು ಹಣಕಾಸು ವರ್ಷದಲ್ಲಿ ₹10 ಲಕ್ಷಕ್ಕಿಂತ ಕಡಿಮೆ ಬ್ಯಾಂಕ್ ಠೇವಣಿಗೆ ಪ್ಯಾನ್ ನೀಡುವ ಅವಶ್ಯಕತೆ ಇರುವುದಿಲ್ಲ.ಹೊಸ ಆರ್ಥಿಕ ವರ್ಷದ ಆರಂಭವು ಸಾಮಾನ್ಯ ಜನರ ಮೇಲೆ ಆರ್ಥಿಕ ಒತ್ತಡ ಹೆಚ್ಚಿಸುವ ಸೂಚನೆ ನೀಡಿದ್ದು, ದಿನನಿತ್ಯದ ವೆಚ್ಚಗಳನ್ನು ಸಮರ್ಪಕವಾಗಿ ನಿರ್ವಹಿಸುವುದು ಸವಾಲಾಗುವ ಸಾಧ್ಯತೆ ಇದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now