Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪೆಟ್ರೋಲ್-ಡೀಸೆಲ್ ಕೊರತೆ ಬಗ್ಗೆ  ಸರ್ಕಾರ ನೀಡಿದ ಸ್ಪಷ್ಟನೆ ಇಲ್ಲಿದೆ

---Advertisement---

ಕರ್ನಾಟಕ ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕೊರತೆ ಉಂಟಾಗಿದೆ ಎಂಬ ವದಂತಿಗಳಿಗೆ ರಾಜ್ಯ ಸರ್ಕಾರ ತೆರೆ ಎಳೆದಿದ್ದು, ಸಾರ್ವಜನಿಕರು ಯಾವುದೇ ರೀತಿಯ ಆತಂಕಕ್ಕೊಳಗಾಗಬಾರದು ಎಂದು ಮನವಿ ಮಾಡಿದೆ.ಕೆಲವು ಪ್ರದೇಶಗಳಲ್ಲಿ ಜನರು ಪೆಟ್ರೋಲ್ ಬಂಕ್‌ಗಳ ಮುಂದೆ ಸರತಿ ಸಾಲಿನಲ್ಲಿ ನಿಂತಿರುವ ವರದಿಗಳು ಸರ್ಕಾರದ ಗಮನಕ್ಕೆ ಬಂದಿದ್ದು, ಇದು ಇಂಧನ ಕೊರತೆಯ ಸೂಚನೆಯಲ್ಲ, ವದಂತಿಗಳ ಪರಿಣಾಮ ಮಾತ್ರ ಎಂದು ಸ್ಪಷ್ಟಪಡಿಸಿದೆ.

ದೇಶಾದ್ಯಂತ ಚಿಲ್ಲರೆ ಮಾರಾಟ ಮಳಿಗೆಗಳಲ್ಲಿ ಸಾಕಷ್ಟು ಇಂಧನ ಸಂಗ್ರಹವಿದ್ದು, ಯಾವುದೇ ತೊಂದರೆ ಇಲ್ಲ ಎಂದು ಕೇಂದ್ರ ಸರ್ಕಾರದ ಮಾಹಿತಿಯನ್ನು ಉಲ್ಲೇಖಿಸಿದೆ.ವದಂತಿಗಳ ಹಿನ್ನೆಲೆಯಲ್ಲಿ ಕೆಲವರು ಬಾಟಲಿ, ಕ್ಯಾನ್ ಮುಂತಾದ ಪಾತ್ರೆಗಳಲ್ಲಿ ಇಂಧನ ಸಂಗ್ರಹಿಸಲು ಮುಂದಾಗುತ್ತಿರುವುದು ಗಂಭೀರ ಸುರಕ್ಷತಾ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ಎಚ್ಚರಿಕೆ ನೀಡಲಾಗಿದೆ. ಇಂಧನವನ್ನು ಕೇವಲ ವಾಹನಗಳ ಟ್ಯಾಂಕ್‌ಗಳಿಗೆ ಮಾತ್ರ ಪೂರೈಸುವಂತೆ ಪೆಟ್ರೋಲ್ ಬಂಕ್‌ಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.

ಬಾಹ್ಯ ಪಾತ್ರೆಗಳಲ್ಲಿ ಇಂಧನ ವಿತರಣೆ ಮತ್ತು ಸಂಗ್ರಹಣೆ ಕಾನೂನುಬಾಹಿರವಾಗಿದ್ದು, ನಿಯಮ ಉಲ್ಲಂಘಿಸಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸರ್ಕಾರ ಎಚ್ಚರಿಸಿದೆ.
ಇದೇ ವೇಳೆ, ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್, ಇಂಧನ ಕೊರತೆ ಕುರಿತು ಸುಳ್ಳು ವದಂತಿ ಹಬ್ಬಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದು, ನಗರದಲ್ಲಿ ಸಾಕಷ್ಟು ಇಂಧನ ಲಭ್ಯವಿದೆ ಎಂದು ಭರವಸೆ ನೀಡಿದ್ದಾರೆ. ಇಂಧನ ಪೂರೈಕೆ ಸಮರ್ಪಕವಾಗಿದ್ದು, ಜನರು ವದಂತಿಗಳಿಗೆ ಕಿವಿಗೊಡದೆ ಶಾಂತವಾಗಿರಬೇಕು ಎಂದು ಸರ್ಕಾರ ಮನವಿ ಮಾಡಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...