Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕರ್ನಾಟಕದಲ್ಲಿ ಆಟೋ ಎಲ್‌ಪಿಜಿ ಕೊರತೆ ಬಗ್ಗೆ ಇಲ್ಲಿದೆ ಸರ್ಕಾರದ ಸ್ಪಷ್ಟನೆ

---Advertisement---

ಸುದ್ದಿಒನ್, ಬೆಂಗಳೂರು, ಮಾರ್ಚ್ ‌29 : ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ‌ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ ಆಟೋ‌ ಎಲ್.ಪಿ.ಜಿ.ಗೆ ಯಾವುದೇ ರೀತಿಯ ‌ಕೊರತೆ ಇಲ್ಲ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಪ್ರಕಟಣೆಯಲ್ಲಿ ತಿಳಿಸಿದೆ.

ರಾಜ್ಯದಲ್ಲಿ ಎಲ್‌ಪಿಜಿ ಸರಬರಾಜು ವ್ಯವಸ್ಥೆಯನ್ನು, ವಿಶೇಷವಾಗಿ ಆಟೋ ಎಲ್‌ಪಿಜಿ ಪೂರೈಕೆಯನ್ನು ರಾಜ್ಯ ಸರ್ಕಾರವು ನಿಕಟವಾಗಿ ಗಮನಿಸುತ್ತಿದೆ. ಕರ್ನಾಟಕದಾದ್ಯಂತ ಒಟ್ಟು 72 ಆಟೋ ಎಲ್‌ಪಿಜಿ ಡಿಸ್ಪೆನ್ಸಿಂಗ್ ಸ್ಟೇಷನ್‌ಗಳು (ALDS) ಕಾರ್ಯನಿರ್ವಹಿಸುತ್ತಿವೆ. ಇವುಗಳಲ್ಲಿ ಕೇವಲ ಬೆಂಗಳೂರು ನಗರವೊಂದರಲ್ಲೇ 31 ಕೇಂದ್ರಗಳು ಲಭ್ಯವಿವೆ.

ಸಾರ್ವಜನಿಕ ವಲಯದ ಪ್ರಮುಖ ತೈಲ ಮಾರಾಟ ಕಂಪನಿಗಳಾದ (OMCs) IOCL, BPCL ಮತ್ತು HPCL ಮೂಲಕ ಆಟೋ ಎಲ್‌ಪಿಜಿ ಸರಬರಾಜು ಮಾಡಲಾಗುತ್ತಿದೆ. ಪ್ರಸ್ತುತ ಈ ಸಂಸ್ಥೆಗಳು ಪ್ರತಿ ಲೀಟರ್‌ಗೆ ರೂ. 77.74 ರ ದರದಲ್ಲಿ ಆಟೋ ಎಲ್‌ಪಿಜಿ ಪೂರೈಸುತ್ತಿವೆ.

ಕಳೆದ ವಾರದಲ್ಲಿ ದಿನಕ್ಕೆ ಸರಾಸರಿ 64.9 ಮೆಟ್ರಿಕ್ ಟನ್ ಆಟೋ ಎಲ್‌ಪಿಜಿಯನ್ನು ವಿತರಿಸಲಾಗಿದೆ. ಸಂಘರ್ಷದ ಮೊದಲು ಈ ಪ್ರಮಾಣವು ದಿನಕ್ಕೆ 57.6 ಮೆಟ್ರಿಕ್ ಟನ್ ಇತ್ತು. ಇದು ಪೂರೈಕೆಯಲ್ಲಿನ ಗಮನಾರ್ಹ ಹೆಚ್ಚಳವನ್ನು ತೋರಿಸುತ್ತದೆ.

ರಾಜ್ಯದಾದ್ಯಂತ ಪ್ರತಿದಿನ ಸುಮಾರು 4 ಲಕ್ಷ ಗೃಹ ಬಳಕೆ ಎಲ್‌ಪಿಜಿ ಸಿಲಿಂಡರ್‌ಗಳು ಹಾಗೂ ಸುಮಾರು 18,000 ವಾಣಿಜ್ಯ ಬಳಕೆ ಸಿಲಿಂಡರ್‌ಗಳನ್ನು ಪೂರೈಕೆ ಮಾಡಲಾಗುತ್ತಿದೆ.

​ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆಯಿಲ್ಲದೆ ಎಲ್‌ಪಿಜಿ ಸರಬರಾಜು ಆಗುವುದನ್ನು ಖಚಿತಪಡಿಸಿಕೊಳ್ಳಲು ರಾಜ್ಯ ಸರ್ಕಾರವು ನಿರಂತರವಾಗಿ ಪರಿಸ್ಥಿತಿಯ ಮೇಲೆ ನಿಗಾ ಇರಿಸಿದೆ‌ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now