Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಇಂದು ರಾಜ್ಯದಲ್ಲಿನ ಮಳೆಯ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ಇಲ್ಲಿದೆ

---Advertisement---

ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ತಾಪಮಾನ ಏರಿಕೆ ಎಚ್ಚರಿಕೆ ನಡುವೆಯೇ ರಾಜ್ಯದ ಬಹುತೇಕ ಭಾಗಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಂಡ್ಯ ಸೇರಿದಂತೆ ಕಲ್ಯಾಣ ಕರ್ನಾಟಕದ ಕೆಲ ಜಿಲ್ಲೆಗಳನ್ನು ಹೊರತುಪಡಿಸಿ ರಾಜ್ಯದ ಹಲವೆಡೆ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಮಳೆಯಾಗುವ ನಿರೀಕ್ಷೆಯಿದೆ.

ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಸಾಧಾರಣದಿಂದ ಮಧ್ಯಮ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ.

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳಲ್ಲೂ ಮಳೆಯ ಸಾಧ್ಯತೆ ವ್ಯಕ್ತವಾಗಿದೆ.
ಇನ್ನು ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳಲ್ಲಿಯೂ ಮಳೆಯಾಗುವ ಸಾಧ್ಯತೆ ಇದೆ.ಆದರೆ ಬಾಗಲಕೋಟೆ, ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.

ಮುಂದಿನ ಐದು ದಿನಗಳ ಕಾಲ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ತಾಪಮಾನವು 2ರಿಂದ 3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.ಇದೇ ವೇಳೆ ಬೆಂಗಳೂರು ನಗರದಲ್ಲೂ ಇಂದು ಸಂಜೆ ವೇಳೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ನಗರದ ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆ ಇದ್ದು, ಗಾಳಿಯ ವೇಗ ಗಂಟೆಗೆ ಸುಮಾರು 10 ಕಿಲೋಮೀಟರ್ ಇರಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...