Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಿಎಂ ಸಿದ್ದರಾಮಯ್ಯಗೆ ಹೈಕಮಾಂಡ್ ತುರ್ತು ಬುಲಾವ್ : ರಾಜ್ಯ ರಾಜಕೀಯದಲ್ಲಿ ಮತ್ತೊಮ್ಮೆ ಸಂಚಲನ!

---Advertisement---

ಸುದ್ದಿಒನ್,ಬೆಂಗಳೂರು,ಮೇ.25 :ಕರ್ನಾಟಕ ರಾಜಕಾರಣದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ ನಡೆದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ನಿಂದ ದಿಢೀರ್ ಕರೆ ಬಂದಿದ್ದು, ದೆಹಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಈ ದಿಢೀರ್ ಭೇಟಿ ರಾಜ್ಯ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ತಮಗೆ ದೆಹಲಿಯಿಂದ ಆಹ್ವಾನ ಬಂದಿರುವುದನ್ನು ಖಚಿತಪಡಿಸಿದ್ದಾರೆ.ನಾಳೆ ಬೆಳಗ್ಗೆ 11 ಗಂಟೆಗೆ ದೆಹಲಿಯಲ್ಲಿ ಹೈಕಮಾಂಡ್ ಸಭೆ ನಿಗದಿಯಾಗಿದೆ. ಕಾಂಗ್ರೆಸ್ ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ನನಗೆ ದೂರವಾಣಿ ಕರೆ ಮಾಡಿ ಸಭೆಯ ಸಮಯ ಮತ್ತು ದಿನಾಂಕವನ್ನು ತಿಳಿಸಿದ್ದಾರೆ. ಆದರೆ, ಈ ಸಭೆಯ ನಿಖರವಾದ ಕಾರ್ಯಸೂಚಿ (Agenda) ಏನೆಂಬುದು ನನಗೆ ಇನ್ನು ಗೊತ್ತಿಲ್ಲ,” ಎಂದು ಸಿಎಂ ಸ್ಪಷ್ಟಪಡಿಸಿದ್ದಾರೆ.

ಇದೇ ವೇಳೆ ರಾಜ್ಯದಲ್ಲಿ ಸಿಎಂ ಬದಲಾವಣೆ ಹಾಗೂ ನಾಯಕತ್ವ ಬದಲಾವಣೆ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ, ರಾಜಕೀಯದಲ್ಲಿ ಇಂತಹ ಊಹಾಪೋಹಗಳು ಮತ್ತು ವದಂತಿಗಳು ಸಹಜವಾಗಿ ಹರಿದಾಡುತ್ತಲೇ ಇರುತ್ತವೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಸಿಎಂ ಬದಲಾವಣೆಯ ಚರ್ಚೆಗಳು ಆಗಾಗ ಮುನ್ನೆಲೆಗೆ ಬರುತ್ತಿರುವ ಬೆನ್ನಲ್ಲೇ, ಹೈಕಮಾಂಡ್ನಿಂದ ಬಂದಿರುವ ಈ ತುರ್ತು ಬುಲಾವ್ ಕೈ ನಾಯಕರಲ್ಲಿ ಭಾರೀ ಕುತೂಹಲ ಕೆರಳಿಸಿದೆ. ನಾಳಿನ ದೆಹಲಿ ಸಭೆಯ ನಂತರ ರಾಜ್ಯ ರಾಜಕೀಯದಲ್ಲಿ ಯಾವ ರೀತಿಯ ತಿರುವು ಸಿಗಲಿದೆ ಎಂಬುದನ್ನು ಕಾದು ನೋಡಬೇಕಿದೆ.

Join WhatsApp

Join Now

Join Telegram

Join Now