ಬೆಂಗಳೂರು: ಮೇಕೆದಾಟು ಯೋಜನೆಗೆ ಆಗ್ರಹಿಸಿ ನಡೆಸುತ್ತಿರುವ ಪಾದಯಾತ್ರೆ ಇಂದಿಗೆ ನಾಲ್ಕು ದಿನ ತುಂವಿದೆ. ಈ ಮಧ್ಯೆ ಇದೇ ವಿಚಾರವಾಗಿ ಸರ್ಕಾರಕ್ಕೆ ಹೈಕೋರ್ಟ್ ಪ್ರಶ್ನೆ ಮಾಡಿದೆ.
ರಾಜ್ಯದಲ್ಲಿ ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದೆ. ಮೇಕೆದಾಟು ಪಾದಯಾತ್ರೆಯಲ್ಲಿ ಸಾವಿರಾರು ಜನ ಸೇರಿದ್ದಾರೆ. ಇದರಿಂದ ಸೋಂಕು ಮತ್ತಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ. ಇದನ್ನ ತಡೆಯಬೇಕೆಂದು ಕೋರಿ ಸಾರ್ವಜನಿಕಾ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿತ್ತು. ಈ ಸಂಬಂಧ ವಿಚಾರಣೆ ನಡೆಸಿದ ಹೈಕೋರ್ಟ್ ಸರ್ಕಾರವನ್ನ ಪ್ರಶ್ನಿಸಿದೆ.
ಕರ್ನಾಟಕ ಈಗಾಗಲೇ ಕೋವಿಡ್ ನಿಂದ ತತ್ತರಿಸಿದೆ. ಹೀಗಿರುವಾಗ ಪಾದಯಾತ್ರೆಗೆ ಹೇಗೆ ಅನುಮತಿ ಕೊಟ್ರಿ. ಸಾರ್ವಜನಿಕರ ವಿರೋಧವಿದ್ದರೂ ಹೇಗೆ ಸುಮ್ಮನಿದ್ದೀರಿ..? ಹಾಗಾದ್ರೆ ಹೈಕೋರ್ಟ್ ಆದೇಶ ನೀಡದೆ ಇದ್ದರೆ ಕ್ರಮ ಕೈಗೊಳ್ಳುವುದಿಲ್ಲವೇ ಎಂದು ಪ್ರಶ್ನಿಸಿದೆ. ಕೋವಿಡ್ ಮಾರ್ಗಸೂಚಿಯನ್ನು ಜಾರಿಗೊಳಿಸಲು ಯಾವ ಕ್ರಮ ಕೈಗೊಳ್ಳಲಾಗಿದೆ? ಕೋವಿಡ್ ಬಿಗಡಾಯಿಸಿರುವ ವೇಳೆ ಪಾದಯಾತ್ರೆಗೆ ಅವಕಾಶ ಏಕೆ? ಈ ಬಗ್ಗೆ ಉತ್ತರಿಸಲು ಸರ್ಕಾರಕ್ಕೆ ಕೋರ್ಟ್ ತಾಕೀತು ಮಾಡಿದೆ. ಈ ಸಂಬಂಧ ಒಂದು ದಿನ ಅವಕಾಶ ನೀಡಿದ ಹೈಕೋರ್ಟ್ ವಿಚಾರಣೆಯನ್ನು ಜ.14ಕ್ಕೆ ಮುಂದೂಡಿದೆ