Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬಾಗೇಪಲ್ಲಿ ಕಾಂಗ್ರೆಸ್ ಶಾಸಕ ಆಯ್ಕೆ ಅಸಿಂಧು ಎಂದು ಘೋಷಿಸಿದ ಹೈಕೋರ್ಟ್..!

---Advertisement---

ಬೆಂಗಳೂರು: ಬಾಗೇಪಲ್ಲಿಯ ಕಾಂಗ್ರೆಸ್ ಶಾಸಕನಿಗೆ ಹೈಕೋರ್ಟ್ ಇಂದು ಶಾಕ್ ನೀಡಿದೆ. ಎಸ್.ಎನ್.ಸುಬ್ಬಾರೆಡ್ಡಿ ಆಯ್ಕೆಯನ್ನೇ ಅಸಿಂಧು ಎಂದು ಘೋಷಣೆ ಮಾಡಿದೆ. ನ್ಯಾ.ಎಂ.ಜಿ.ಎಸ್ ಕಮಲ್ ಅವರಿದ್ದ ಹೈಕೋರ್ಟ್ ಪೀಠ ಅರ್ಜಿಯನ್ನು ವಿಚಾರಣೆ ನಡೆಸಿದ್ದು, ಆಯ್ಕೆಯನ್ನು ಅಸಿಂಧು ಎಂದು ಆದೇಶ ನೀಡಿದೆ. ಚುನಾವಣಾ ಅಕ್ರಮಗಳ ಹಿನ್ನಲೆಯಲ್ಲಿ ಎಸ್.ಎನ್.ಸುಬ್ಬಾರೆಡ್ಡಿ ಆಯ್ಕೆ ಅಸಿಂಧುಗೊಳಿಸಿ ಆದೇಶ ಹೊರಡಿಸಿದೆ.

ಪರಾಜಿತ ಬಿಜೆಪಿ ಅಭ್ಯರ್ಥಿ ಸಿ.ಮುನಿರಾಜು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಸುಬ್ಬಾರೆಡ್ಡಿ ಆಯ್ಕೆ ಅಸಿಂಧು ಕೋರಿ ಚುನಾವಣಾ ತಕರಾರು ಅರ್ಜಿ ಸಲ್ಲಿಕೆ ಮಾಡಿದ್ದರು. ಆದರೆ ಸಿ.ಮುನಿರಾಜು ವಿಜಯಿ ಎಂದು ಘೋಷಣೆ ಮಾಡುವುದಕ್ಕೆ ಹೈಕೋರ್ಟ್ ನಕಾರ ಮಾಡಿದೆ. ಮೇಲ್ಮನವಿ ಸಲ್ಲಿಕೆವರೆಗೆ ತನ್ನ ಆದೇಶಕ್ಕೆ ತಡೆಯಾಜ್ಞೆ ನೀಡಲು  ಎಸ್.ಎನ್.ಸುಬ್ಬಾರೆಡ್ಡಿ ಪರ ಹಿರಿಯ ವಕೀಲ ಜಯಕುಮಾರ್ ಎಸ್ ಪಾಟೀಲ್ ಮನವಿ ಮಾಡಿದ್ದರು. ಆದರೇ, ಈ ಮನವಿಗೆ ಅರ್ಜಿದಾರರ ಪರ ಹಿರಿಯ ವಕೀಲೆ ನಳಿನಾ ಮಾಯಗೌಡ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ಗೆ ತಡೆಯಾಜ್ಞೆ ಕೋರಿ ಮೇಲ್ಮನವಿ ಸಲ್ಲಿಸಲು ಎಸ್ ಎನ್ ಸುಬ್ಬಾರೆಡ್ಡಿ ಅವರಿಗೆ ಅವಕಾಶ ಇದೆ. ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ 6 ತಿಂಗಳ ಒಳಗೆ ತಡೆಯಾಜ್ಞೆ ನೀಡದಿದ್ದರೆ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರಕ್ಕೆ ಮರು ಚುನಾವಣೆ ನಡೆಸಬೇಕಾಗುತ್ತದೆ. ಇನ್ನು ಸುಬ್ಬಾರೆಡ್ಡಿ ಅವರ ಆಯ್ಕೆಯನ್ನು ಅಸಿಂಧುಗೊಳಿಸಿದ ಆದೇಶವನ್ನು ಚುನಾವಣಾ ಆಯೋಗಕ್ಕರ ರವಾನೆ ಮಾಡಲು ಹೈಕೋರ್ಟ್ ಆದೇಶ ನೀಡಿದೆ. ವಿಧಾನಸಭೆಯ ಕಾರ್ಯದರ್ಶಿಗೂ ಈ ಆದೇಶ ಪ್ರತಿಯನ್ನು ಕಳುಹಿಸಲು ಹೈಕೋರ್ಟ್ ಸೂಚನೆ ನೀಡಿದೆ. ಸುಬ್ಬಾರೆಡ್ಡಿ ತಮ್ಮ ತಪ್ಪಿಲ್ಲ ಎಂದು ಪ್ರೂವ್ ಮಾಡಿಕೊಳ್ಳಲು ಹೇಗೆ ಹೋರಾಡುತ್ತಾರೆ ಎಂಬುದನ್ನ ನೋಡಬೇಕಿದೆ. ಇದರ ನಡುವೆ ಬಿಜೆಪಿ ಅಭ್ಯರ್ಥಿ ಮುನಿರಾಜು ಅವರನ್ನು ಆಯ್ಕೆ ಮಾಡುತ್ತಾ ಎಂಬುದನ್ನ ನೋಡಬೇಕಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...