Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಾಳಿನ ಸಾರಿಗೆ ನೌಕರರ ಮುಷ್ಕರಕ್ಕೆ ಹೈಕೋರ್ಟ್ ಬ್ರೇಕ್ : ಎಂದಿನಂತೆ ಬಸ್ ಸಂಚಾರ

---Advertisement---

ಸುದ್ದಿಒನ್,ಬೆಂಗಳೂರು,ಮೇ.19:ನಾಳೆ ರಾಜ್ಯಾದ್ಯಂತ ನಡೆಯಬೇಕಿದ್ದ ಸಾರಿಗೆ ನೌಕರರ ಬೃಹತ್ ಪ್ರತಿಭಟನೆಗೆ ಮಾನ್ಯ ಉಚ್ಚ ನ್ಯಾಯಾಲಯ ತುರ್ತು ತಡೆ ನೀಡಿದೆ. ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸಾರಿಗೆ ನೌಕರರ ಸಂಘಟನೆಗಳು ಕರೆ ನೀಡಿದ್ದ ಮುಷ್ಕರವನ್ನು ಸಾರ್ವಜನಿಕರ ಹಿತದೃಷ್ಟಿಯಿಂದ ಸ್ಥಗಿತಗೊಳಿಸುವಂತೆ ಹೈಕೋರ್ಟ್ ಕಡಕ್ ಆದೇಶ ಹೊರಡಿಸಿದೆ. ಇದರಿಂದಾಗಿ ನಾಳೆ ಬಸ್ ಸಂಚಾರ ಸ್ಥಗಿತಗೊಳ್ಳಬಹುದು ಎಂದು ಆತಂಕದಲ್ಲಿದ್ದ ಲಕ್ಷಾಂತರ ಪ್ರಯಾಣಿಕರು ನಿಟ್ಟುಸಿರು ಬಿಡುವಂತಾಗಿದೆ.

ಸಾರಿಗೆ ನೌಕರರ ಹಠಾತ್ ಮುಷ್ಕರದ ನಿರ್ಧಾರವನ್ನು ಪ್ರಶ್ನಿಸಿ ಹೈಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿತ್ತು. ವಿಶೇಷವೆಂದರೆ, ಈ ಅರ್ಜಿಯನ್ನು ಸಲ್ಲಿಸಿದ್ದು ಯಾರೋ ದೊಡ್ಡ ಗಣ್ಯರಲ್ಲ, ಬದಲಿಗೆ ಸಮಾಜದ ತಳಮಟ್ಟದ ದುಡಿಯುವ ವರ್ಗಕ್ಕೆ ಸೇರಿದ ಮನೆಗೆಲಸದ ಮಹಿಳೆ ವೇದಾವತಿ ಹಾಗೂ ಕಟ್ಟಡ ಕಾರ್ಮಿಕರಾದ ಲೆಕ್ಕಸಂದ್ರದ ಶ್ರೀಧರ್.

ನಾಳೆ ಬಸ್ಗಳು ಬಂದ್ ಆದಲ್ಲಿ ನಮ್ಮಂತಹ ದಿನಗೂಲಿ ನೌಕರರು ಹಾಗೂ ಸಾಮಾನ್ಯ ಜನರಿಗೆ ಬದುಕೇ ಕಷ್ಟವಾಗುತ್ತದೆ” ಎಂದು ಅವರು ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ನ್ಯಾಯಮೂರ್ತಿ ಗೋವಿಂದರಾಜ ಅವರ ನೇತೃತ್ವದ ಪೀಠದಲ್ಲಿ ಇಂದು ಈ ಮಹತ್ವದ ಪಿಐಎಲ್ ವಿಚಾರಣೆ ನಡೆಯಿತು. ಅರ್ಜಿದಾರರ ಪರವಾಗಿ ವಕೀಲ ವಿಕ್ರಂ ಹುಯಿಲಗೊಳ ಅವರು ನ್ಯಾಯಾಲಯದಲ್ಲಿ ಗಟ್ಟಿ ವಾದ ಮಂಡಿಸಿದರು.

ವಿಚಾರಣೆ ವೇಳೆ, ಸಮಾಜದ ಸಾಮಾನ್ಯ ದುಡಿಯುವ ವರ್ಗಕ್ಕೆ ಸೇರಿದ ಮನೆಗೆಲಸದ ಮಹಿಳೆ ಮತ್ತು ಕಟ್ಟಡ ಕಾರ್ಮಿಕರು ಸಾರ್ವಜನಿಕ ಕಾಳಜಿಯಿಂದ ಇಷ್ಟು ಜಾಗೃತರಾಗಿ ಕೋರ್ಟ್ ಮೆಟ್ಟಿಲೇರಿರುವುದನ್ನು ಕಂಡು ಹೈಕೋರ್ಟ್ ನ್ಯಾಯಪೀಠವು ಅಚ್ಚರಿ ವ್ಯಕ್ತಪಡಿಸಿತು. ಅಷ್ಟೇ ಅಲ್ಲದೆ, ಇವರ ಸಾಮಾಜಿಕ ಪ್ರಜ್ಞೆಯನ್ನು ಮುಕ್ತಕಂಠದಿಂದ ಶ್ಲಾಘಿಸಿತು.

ಎರಡೂ ಕಡೆಯ ವಾದ-ಪ್ರತಿವಾದಗಳನ್ನು ಆಲಿಸಿದ ನ್ಯಾಯಾಲಯ, ನಾಳೆ ಯಾವುದೇ ಕಾರಣಕ್ಕೂ ಸಾರಿಗೆ ನೌಕರರು ಮುಷ್ಕರ ನಡೆಸಬಾರದು ಎಂದು ಕಟ್ಟುನಿಟ್ಟಿನ ಆದೇಶ ನೀಡಿತು. ಇದರ ಜೊತೆಗೆ, ನೌಕರರ ನ್ಯಾಯಸಮ್ಮತ ಬೇಡಿಕೆಗಳು ಹಾಗೂ ಸಮಸ್ಯೆಗಳ ಕುರಿತು ರಾಜ್ಯ ಸರ್ಕಾರವು ತಕ್ಷಣವೇ ಸಾರಿಗೆ ಸಂಘಟನೆಗಳೊಂದಿಗೆ ಮುಖಾಮುಖಿ ಸಂವಾದ ನಡೆಸಬೇಕು ಎಂದು ಸೂಚಿಸಿದೆ. ಸಾರಿಗೆ ಸಚಿವರ ನೇತೃತ್ವದಲ್ಲೇ ತುರ್ತು ಸಭೆ ನಡೆಸಿ ಸಮಸ್ಯೆ ಬಗೆಹರಿಸಿಕೊಳ್ಳುವಂತೆ ಆದೇಶಿಸಿರುವ ಹೈಕೋರ್ಟ್, ಈ ಸಂಬಂಧ ರಾಜ್ಯ ಸರ್ಕಾರ ಹಾಗೂ ಸಾರಿಗೆ ಒಕ್ಕೂಟಗಳಿಗೆ ನೋಟಿಸ್ ಜಾರಿ ಮಾಡಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

Join WhatsApp

Join Now

Join Telegram

Join Now