ಹಾಸನ: ಮಾಜಿ ಸಚಿವ ಹೆಚ್ ಡಿ ರೇವಣ್ಣ ಅವರಿಗೆ ಸಮನ್ಸ್ ನೀಡುವುದಂತೆ ಹೈಕೋರ್ಟ್ ಆದೇಶಿಸಿದೆ. ಸಮನ್ಸ್ ನೀಡಲು ಕೋರ್ಟ್ ಆದೇಶ ನೀಡಿರುವುದು ಎರಡನೇ ಬಾರಿ. ಅಕ್ರಮ ನಡೆಸಿ ಆಯ್ಕೆಯಾಗಿದ್ದಾರೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಈ ಹಿಂದೆ ಕೂಡ ಹೈಕೋರ್ಟ್ ನೋಟೀಸ್ ನೀಡಲು ಸೂಚನೆ ನೀಡಿತ್ತು. ಆದರೆ ಆ ಸಮಯದಲ್ಲಿ ನೋಟೀಸ್ ನೀಡಿರಲಿಲ್ಲ. ಇದೀಗ ಅದೇ ಅರ್ಜಿ ವಿಚಾರಣೆ ನಡೆಸಿರುವ ಹೈಕೋರ್ಟ್ ಸಮನ್ಸ್ ನೀಡಲು ಸೂಚಿಸಿದೆ.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಹೆಚ್ ಡಿ ರೇವಣ್ಣ, ಅಕ್ರಮ ನಡೆಸಿ ಆಯ್ಕೆಯಾಗಿದ್ದಾರೆ. ಅವರ ಬೆಂಬಲಿಗರಿಗೆ ತಲಾ 2 ಕೋಳಿ ಹಾಗೂ ಎರಡು ಸಾವಿರ ನಗದು ಹಂಚಿ ಮತ ಹಾಕಿಸಿಕೊಂಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಇದಕ್ಕೆ ಸಂಬಂಧಿಸಿದಂತೆ ಡಿ ದೇವರಾಜೇಗೌಡ ತಕರಾರು ಅರ್ಜಿ ಸಲ್ಲಿಕೆ ಮಾಡಿದ್ದರು.
ಮೋಸ ಮಾಡಿ ಆಯ್ಕೆಯಾಗಿದ್ದಾರೆ. ಅವರ ಆಯ್ಕೆಯನ್ನು ಅಸಿಂಧುಗೊಳಿಸಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಸಮನ್ಸ್ ಜಾರಿ ಮಾಡಲು ಸೂಚಿಸಿದೆ. ಚುನಾವಣಾ ತಕರಾರು ಅರ್ಜಿಯ ನಿಯಮದಂತ ಸಮನ್ಸ್ ಜಾರಿ ಮಾಡಬೇಕೆಂದು ಸೂಚನೆ ನೀಡಿದೆ. ರೇವಣ್ಣ ಸೇರಿದಂತೆ ಹಲವು ಅಧಿಕಾರಿಗಳಿಗೂ ಸಮನ್ಸ್ ಜಾರಿ ಮಾಡಲು ಸೂಚಿಸಿದೆ. ಮುಂದಿನ ವಿಚಾರಣೆ ನವೆಂಬರ್ 29ಕ್ಕೆ ನಿಗದಿಯಾಗಿದೆ.