ಕಾಂಗ್ರೆಸ್ ಪಕ್ಷ ತಮ್ಮ 5 ಗ್ಯಾರಂಟಿಗಳನ್ನು ನೀಡಿ, ಅಧಿಕಾರಕ್ಕೆ ಬಂದಿದೆ. ಅಧಿಕಾರಕ್ಕೆ ಬಂದ ಮೇಲೆ ಅದನ್ನು ಜಾರಿಗೆ ತರುವುದಕ್ಕೂ ಸಾಕಷ್ಟು ಎಫರ್ಟ್ ಹಾಕುತ್ತಿದೆ ಕಾಂಗ್ರೆಸ್ ಸರ್ಕಾರ. ಇದೀಗ ಅದೇ ಗ್ಯಾರಂಟಿಗಳ ವಿಚಾರಕ್ಕೆ ಇದೀಗ ಹೈಕೋರ್ಟ್ ಸಿಎಂ ಸಿದ್ದರಾಮಯ್ಯ ಅವರಿಗೆ ನೋಟೀಸ್ ನೀಡಿದೆ.
ಜೆ ಎಂ ಶಂಕರ್ ಎಂಬುವವರು ಜುಲೈ 21ರಂದು ಹೈಕೋರ್ಟ್ ಮೆಟ್ಟಿಲೇರಿದ್ದರು. ಸಿದ್ದರಾಮಯ್ಯ ಅವರ ಶಾಸಕ ಸ್ಥಾನವನ್ನು ಅಸಿಂಧುಗೊಳಿಸಬೇಕೆಂದು ಮನವಿ ಮಾಡಿದ್ದರು. ಈ ಸಂಬಂಧ ವಿಚಾರಣೆಯನ್ನು ಕೋರ್ಟ್ ಇಂದಿಗೆ ಮುಂದೂಡಿಕೆ ಮಾಡಿತ್ತು. ಇಂದು ನೋಟೀಸ್ ಜಾರಿ ಮಾಡಿ ವಿಚಾರಣೆಯನ್ನು ಸೆಪ್ಟೆಂಬರ್ 1ಕ್ಕೆ ಮುಂದೂಡಿಕೆ ಮಾಡಲಾಗಿದೆ.
ಕಳೆದ ಮೇ ತಿಂಗಳಲ್ಲಿ ನಡೆದ ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 5 ಗ್ಯಾರಂಟಿ ಯೋಜನೆಗಳಿಂದ ಮತದಾರರಿಗೆ ಆಮಿಷ ಒಡ್ಡಿತ್ತು ಅಂತ ಆರೋಪಿಸಲಾಗಿದೆ. ಪ್ರಜಾಪ್ರತಿನಿಧಿ ಕಾಯ್ದೆ ಸೆ. 123 (1) ಪ್ರಕಾರ ಈ ರೀತಿ ಮತದಾರರಿಗೆ ಯಾವುದೇ ಆಮಿಷ ಒಡ್ಡುವಂತಿಲ್ಲ. ಆದರೆ ಕಾಂಗ್ರೆಸ್ ಪಕ್ಷವು ಮತದಾರರಿಗೆ ಗ್ಯಾರಂಟಿ ಕಾರ್ಡ್ ವಿತರಿಸಿ ಆಮಿಷ ಒಡ್ಡಲಾಗಿದೆ. ಹೀಗಾಗಿ ಸಿದ್ದರಾಮಯ್ಯ ಆಯ್ಕೆ ಅಸಿಂಧುಗೊಳಿಸುವಂತೆ ಅರ್ಜಿ ಸಲ್ಲಿಸಲಾಗಿತ್ತು.