Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

5 ಗ್ಯಾರಂಟಿಗಳ ವಿಚಾರಕ್ಕೆ ಸಿದ್ದರಾಮಯ್ಯರಿಗೆ ಹೈಕೋರ್ಟ್ ನೋಟೀಸ್

Facebook
Twitter
Telegram
WhatsApp

 

ಕಾಂಗ್ರೆಸ್ ಪಕ್ಷ ತಮ್ಮ 5 ಗ್ಯಾರಂಟಿಗಳನ್ನು ನೀಡಿ, ಅಧಿಕಾರಕ್ಕೆ ಬಂದಿದೆ. ಅಧಿಕಾರಕ್ಕೆ ಬಂದ ಮೇಲೆ ಅದನ್ನು ಜಾರಿಗೆ ತರುವುದಕ್ಕೂ ಸಾಕಷ್ಟು ಎಫರ್ಟ್ ಹಾಕುತ್ತಿದೆ ಕಾಂಗ್ರೆಸ್ ಸರ್ಕಾರ. ಇದೀಗ ಅದೇ ಗ್ಯಾರಂಟಿಗಳ ವಿಚಾರಕ್ಕೆ ಇದೀಗ ಹೈಕೋರ್ಟ್ ಸಿಎಂ ಸಿದ್ದರಾಮಯ್ಯ ಅವರಿಗೆ ನೋಟೀಸ್ ನೀಡಿದೆ.

ಜೆ ಎಂ ಶಂಕರ್ ಎಂಬುವವರು ಜುಲೈ 21ರಂದು ಹೈಕೋರ್ಟ್ ಮೆಟ್ಟಿಲೇರಿದ್ದರು. ಸಿದ್ದರಾಮಯ್ಯ ಅವರ ಶಾಸಕ ಸ್ಥಾನವನ್ನು ಅಸಿಂಧುಗೊಳಿಸಬೇಕೆಂದು ಮನವಿ ಮಾಡಿದ್ದರು. ಈ ಸಂಬಂಧ ವಿಚಾರಣೆಯನ್ನು ಕೋರ್ಟ್ ಇಂದಿಗೆ ಮುಂದೂಡಿಕೆ ಮಾಡಿತ್ತು. ಇಂದು ನೋಟೀಸ್ ಜಾರಿ ಮಾಡಿ ವಿಚಾರಣೆಯನ್ನು ಸೆಪ್ಟೆಂಬರ್ 1ಕ್ಕೆ ಮುಂದೂಡಿಕೆ ಮಾಡಲಾಗಿದೆ.

ಕಳೆದ ಮೇ ತಿಂಗಳಲ್ಲಿ ನಡೆದ ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 5 ಗ್ಯಾರಂಟಿ ಯೋಜನೆಗಳಿಂದ ಮತದಾರರಿಗೆ ಆಮಿಷ ಒಡ್ಡಿತ್ತು ಅಂತ ಆರೋಪಿಸಲಾಗಿದೆ. ಪ್ರಜಾಪ್ರತಿನಿಧಿ ಕಾಯ್ದೆ ಸೆ. 123 (1) ಪ್ರಕಾರ ಈ ರೀತಿ ಮತದಾರರಿಗೆ ಯಾವುದೇ ಆಮಿಷ ಒಡ್ಡುವಂತಿಲ್ಲ. ಆದರೆ ಕಾಂಗ್ರೆಸ್ ಪಕ್ಷವು ಮತದಾರರಿಗೆ ಗ್ಯಾರಂಟಿ‌ ಕಾರ್ಡ್ ವಿತರಿಸಿ ಆಮಿಷ ಒಡ್ಡಲಾಗಿದೆ. ಹೀಗಾಗಿ ಸಿದ್ದರಾಮಯ್ಯ ಆಯ್ಕೆ ಅಸಿಂಧುಗೊಳಿಸುವಂತೆ ಅರ್ಜಿ ಸಲ್ಲಿಸಲಾಗಿತ್ತು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕೋಟಿ ಕೋಟಿ ಆಸ್ತಿಯ ಒಡೆಯ ದಿಂಗಾಲೇಶ್ವರ ಸ್ವಾಮೀಜಿ : ಚಿನ್ನ, ಬೆಳ್ಳಿ ಸೇರಿ ಏನೆಲ್ಲಾ ಇದೆ‌ ಗೊತ್ತಾ..?

ಹುಬ್ಬಳ್ಳಿ: ಪ್ರಹ್ಲಾದ್ ಜೋಶಿ ಸ್ಪರ್ಧೆಗೆ ವಿರೋಧಿಸಿ, ಬಿಜೆಪಿ ಅಭ್ಯರ್ಥಿ ಪರ ಸ್ಪರ್ಧೆಗೆ ನಿಂತಿರುವ ದಿಂಗಾಲೇಶ್ವರ ಸ್ವಾಮೀಜಿ ಇಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಈ ವೇಳೆ ತಮ್ಮ ಬಳಿ ಇರುವ ಚರಾಸ್ಥಿ-ಸ್ಥಿರಾಸ್ತಿ ಸೇರಿದಂತೆ ಎಲ್ಲಾ ವಿವರವನ್ನು

ಪ್ರೀತಿ ನಿರಾಕರಿಸಿದ್ದಕ್ಕೆ ಕಾರ್ಪೋರೇಟರ್ ಪುತ್ರಿಯನ್ನೇ ಚಾಕುವಿನಿಂದ ಇರಿದು ಕೊಲೆ : ಬೆಚ್ಚಿ ಬಿದ್ದ ಹುಬ್ಬಳ್ಳಿ-ಧಾರವಾಡ ಮಂದಿ

ಹುಬ್ಬಳ್ಳಿ: ಪ್ರೀತಿ ಮಾಡಲು ನಿರಾಕರಿಸಿದ್ದಕ್ಕೆ ಕಾರ್ಪೋರೇಟರ್ ಮಗಳನ್ನೇ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿ ನಗರದಲ್ಲಿ ನಡೆದಿದೆ. ನೇಹಾ ಬರ್ಬರವಾಗಿ ಕೊಲೆಯಾದ ಯುವತಿ. ಫಯಾಜ್ ಕೊಲೆ ಮಾಡಿದಾತ. ನೇಹಾ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ

ಎಳಸು, ರಾಜಕೀಯ ಜ್ಞಾನ ಇರದವನು : ವಿಜಯೇಂದ್ರ ಮೇಲೆ ಈಶ್ವರಪ್ಪ ಮಾತಿನ ಪ್ರಹಾರ

ಉಡುಪಿ: ಹಾವೇರಿಯಿಂದ ಟಿಕೆಟ್ ಆಕಾಂಕ್ಷಿಯಾಗಿದ್ದ ಈಶ್ವರಪ್ಪ ಅವರಿಗೆ ಬಿಜೆಪಿ ನಿರಾಸೆ ಮಾಡಿದಾಗಿನಿಂದ ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಮಕ್ಕಳ ಮೇಲೆ ಹರಿಹಾಯುತ್ತಲೇ ಇದ್ದಾರೆ. ಬಿಜೆಪಿ ನಾಯಕರ ಮಾತನ್ನು ಮೀರಿ, ಸದ್ಯ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ

error: Content is protected !!