ಬೆಂಗಳೂರು: ಪರಿಶಿಷ್ಟ ಜಾತಿ (SC) ಹಾಗೂ ಪರಿಶಿಷ್ಟ ಪಂಗಡ (ST) ವಿದ್ಯಾರ್ಥಿಗಳಿಗೆ ಶಿಕ್ಷಣ ಹಕ್ಕು ಕಾಯ್ದೆ (RTE) ಅಡಿಯಲ್ಲಿ 9 ಮತ್ತು 10ನೇ ತರಗತಿಗೂ ಉಚಿತ ಪ್ರವೇಶ ಕಲ್ಪಿಸುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ತಾತ್ಕಾಲಿಕ ತಡೆ ನೀಡಿದೆ.
ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕಳೆದ ಮೇ 21, 2026ರಂದು ವಿಶೇಷ ಸುತ್ತೋಲೆಯನ್ನು ಹೊರಡಿಸಿತ್ತು. ಅದರ ಪ್ರಕಾರ, ಇದುವರೆಗೆ 8ನೇ ತರಗತಿಯವರೆಗೆ ಮಾತ್ರ ಸೀಮಿತವಾಗಿದ್ದ ಆರ್ ಟಿಇ ಅಡಿಯ ಉಚಿತ ಶಿಕ್ಷಣ ಸೌಲಭ್ಯವನ್ನು SC ಮತ್ತು ST ಸಮುದಾಯದ ವಿದ್ಯಾರ್ಥಿಗಳಿಗೆ 9 ಹಾಗೂ 10ನೇ ತರಗತಿಗೂ ವಿಸ್ತರಿಸುವ ನಿರ್ಧಾರ ಕೈಗೊಳ್ಳಲಾಗಿತ್ತು.ಶಿಕ್ಷಣ ಮಧ್ಯದಲ್ಲೇ ನಿಲ್ಲದಂತೆ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ನೆರವಾಗುವ ಉದ್ದೇಶದಿಂದ ಸರ್ಕಾರ ಈ ಕ್ರಮಕ್ಕೆ ಮುಂದಾಗಿತ್ತು.ಆದರೆ ಇದನ್ನು ಪ್ರಶ್ನಿಸಿ ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳ ಒಕ್ಕೂಟ (KAMS) ಹೈಕೋರ್ಟ್ಗೆ ಮೊರೆ ಹೋಗಿತ್ತು.
ಒಕ್ಕೂಟದ ವಾದದ ಪ್ರಕಾರ, ಆರ್ಟಿಇ ಕಾಯ್ದೆಯಡಿ ಉಚಿತ ಮತ್ತು ಕಡ್ಡಾಯ ಶಿಕ್ಷಣದ ಹಕ್ಕು 6ರಿಂದ 14 ವರ್ಷದೊಳಗಿನ ಮಕ್ಕಳಿಗೆ ಮಾತ್ರ ಅನ್ವಯಿಸುತ್ತದೆ. ಅಂದರೆ, ಅದು 8ನೇ ತರಗತಿಯವರೆಗೆ ಮಾತ್ರ ಸೀಮಿತವಾಗಿದೆ. ಅದರಾಚೆಗೆ ಸೌಲಭ್ಯ ವಿಸ್ತರಿಸುವ ಅಧಿಕಾರ ರಾಜ್ಯ ಸರ್ಕಾರಕ್ಕಿಲ್ಲ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಯಿತು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅಶೋಕ್ ಎಸ್. ಕಿಣಗಿ ಅವರಿದ್ದ ಏಕಸದಸ್ಯ ಪೀಠವು, ಸರ್ಕಾರ ಹೊರಡಿಸಿದ್ದ ಮೇ 21ರ ಸುತ್ತೋಲೆಗೆ ಮಧ್ಯಂತರ ತಡೆ ನೀಡಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.
















