ಬೆಂಗಳೂರು: ಸರ್ಕಾರಿ ಜಮೀನು ಒತ್ತುವರಿ ಆರೋಪಕ್ಕೆ ಸಂಬಂಧಿಸಿದಂತೆ ಇದೀಗ ಡಾ.ರವಿಶಂಕರ್ ಗುರೂಜಿ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಅನ್ನು ಹೈಕೋರ್ಟ್ ರದ್ದು ಮಾಡಿದೆ. ಕಗ್ಗಲಿಪುರದ ಸರ್ಕಾರಿ ಜಮೀನು ಕೆರೆ ಒತ್ತುವರಿ ಆರೋಪ ರವಿಶಂಕರ್ ಗುರೂಜಿ ಮೇಲೆ ಇತ್ತು. ಬಿಎಂಟಿಎಫ್ ಪೊಲೀಸರು ಒತ್ತುವರಿ ಸಂಬಂಧ ರವಿಶಂಕರ್ ಗುರೂಜಿ ವಿರುದ್ಧ ಎಫ್ಐಆರ್ ದಾಖಲಾಗಿತ್ತು.
ಒತ್ತುವರಿ ಆರೋಪಕ್ಕೂ ರವಿಶಂಕರ್ ಗುರೂಜಿಗೂ ಯಾವುದೇ ಸಂಬಂಧವಿಲ್ಲ. ಆಧಾರಗಳು ಇಲ್ಲದೆ ಎಫ್ಐಆರ್ ದಾಖಲಿಸಿದ್ದಾರೆ ಎಂದು ರವಿಶಂಕರ್ ಪರ ವಕೀಲ ಪಿ ಪ್ರಸನ್ನ ಕುಮಾರ್ ವಾದಿಸಿದ್ದರು. ಹೀಗಾಗಿ ಹೈಕೋರ್ಟ್ ರವಿಶಂಕರ್ ಗುರೂಜಿ ಅವರ ವಿರುದ್ಧ ದಾಖಲಾಗಿದ್ದ ಎಫ್ಐಆರ್ ರದ್ದುಪಡಿಸಿ ಆದೇಶ ಹೊರಡಿಸಿದೆ. ರವಿಶಂಕರ್ ಗುರೂಜಿ ಅವರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಪುರಸ್ಕರಿಸಿದ್ದು, ಪ್ರಕರಣವನ್ನು ರದ್ದುಪಡಿಸಿದೆ.

ಬಿಎನ್ಎಸ್ಎಸ್ 528ರ ಅಡಿ ಅರ್ಜಿದಾರರ ವಿರುದ್ಧದ ಪ್ರಕರಣವನ್ನು ಪರಿಗಣಿಸುವುದಕ್ಕೆ ಮಾತ್ರ ಸೀಮಿತವಾಗಿದೆ. ಯಾವುದೇ ಸಕ್ಷಮ ನ್ಯಾಯಾಲಯದ ಮುಂದೆ ಬಾಕಿ ಇರುವ ಯಾವುದೇ ಆರೋಪಿಗೆ ಆದೇಶ ಅನ್ವಯಿಸುವುದಿಲ್ಲ ಎಂದು ಹೈಕೋರ್ಟ್ ಆದೇಶಿಸಿದೆ. ವಿಸ್ತೃತ ಆದೇಶ ಇನ್ನಷ್ಟರೆ ಬಿಡುಗಡೆಯಾಗಬೇಕಿದೆ. ಅರ್ಜಿದಾರರ ಪರ ಹಿರಿಯ ವಕೀಲ ಎಸ್ ಶ್ರೀರಂಗ ಮತ್ತು ವಕೀಲ ಪಿ ಪ್ರಸನ್ನ ಕುಮಾರ್ ಅವರು ಒತ್ತುವರಿಗೆ ಸಂಬಂಧಿಸಿದ ವರದಿಯಲ್ಲಿ ಎಲ್ಲಿಯೂ ಸಹ ರವಿಶಂಕರ್ ಗುರೂಜಿ ಅವರು ಯಾವುದೇ ಆಸ್ತಿ ಹೊಂದಿರುವುದನ್ನು ಅಥವಾ ಯಾವುದೇ ಭೂಮಿಯನ್ನು ಅತಿಕ್ರಮಿಸಿರುವದನ್ನು ಖಾಸಗಿ ರಿಯಲ್ ಎಸ್ಟೇಟ್ ಕಂಪನಿ ಸೇರಿ ಕೆಲವರ ವಿರುದ್ಧ ಒತ್ತುವರಿ ಮಾಡಿರುವ ಆರೋಪವಿದೆ ಎಂದು ವಿವರಿಸಿದ್ದರು. ಸದ್ಯ ವಾದ ಪ್ರತಿವಾದ ಆಲಿಸಿದ ಕೋರ್ಟ್ ಎಫ್ಐಆರ್ ರದ್ದು ಮಾಡಿದೆ.
















