ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಬಹು ನಿರೀಕ್ಷೆಯ ಜಾತಿ ಗಣತಿ ಸಮೀಕ್ಷೆಗೆ ತಡೆ ನೀಡಬೇಕೆಂದು ಸಲ್ಲಿಕೆಯಾಗಿದ್ದ ಅರ್ಜಿ ಇದೀಗ ನಿರಾಕರಣೆಯಾಗಿದೆ. ಜಾತಿಗಳ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆ ನಡೆಸುವ ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿದ್ದ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗಯು ನ್ಯಾಯಮೂರ್ತಿ ಸಿ.ಎಂ. ಜೋಶಿ ಅವರಿದ್ದ ಪೀಠಪ ಎರಡು ದಿನ ವಾದ ಪ್ರತಿವಾದ ಆಲಿಸಿದ್ದು, ಅಂತಿಮವಾಗಿ ಇಂದು ಸಮೀಕ್ಷೆಗೆ ತಡೆ ನೀಡಲು ನಿರಾಕರಿಸಿದೆ.
ಆದರೆ ಸರ್ಕಾರಕ್ಕೆ ಷರತ್ತು ವಿಧಿಸಿದೆ. ಜನರ ದತ್ತಾಂಶದ ಗೌಪ್ಯತೆ ಬಗ್ಗೆ ಸರ್ಕಾರಕ್ಕೆ ಹಾಗೂ ಹಿಂದೂಳಿದ ವರ್ಗಗಳ ಆಯೋಗಕ್ಕೆ ಕೆಲವು ಮಹತ್ವದ ಷರತ್ತುಗಳನ್ನು ವಿಧಿಸಿ ಮಧ್ಯಂತರ ಆದೇಶ ನೀಡಿದೆ. ಈ ವಿಚಾರಣೆಯನ್ನು ಡಿಸೆಂಬರ್ 2ನೇ ವಾರಕ್ಕೆ ಮುಂದೂಡಿಕೆ ಮಾಡಿದೆ.
ದತ್ತಾಂಶಗಳನ್ನು ಸರ್ಕಾರ ಸೇರಿ ಯಾರಿಗೂ ಬಹಿರಂಗ ಪಡಿಸಬಾರದು. ದತ್ತಾಂಶದ ಗೌಪ್ಯತೆಯನ್ನು ಹಿಂದುಳಿದ ವರ್ಗಗಳ ಆಯೋಗ ರಕ್ಷಣೆ ಮಾಡಬೇಕು. ಜನರು ಸ್ವಯಂ ಪ್ರೇರಣೆಯಿಂದ ನೀಡಿದರಷ್ಟೇ ಮಾಹಿತಿ ಪಡೆಯಬೇಕು. ಈ ಬಗ್ಗೆ ಸಾರ್ವಜನಿಕರಲ್ಲಿಯೂ ಅರಿವು ಮೂಡಿಸಬೇಕು. ಮಾಹಿತಿ ನೀಡುವಂತೆ ಯಾವುದೇ ಒತ್ತಡ ಹಾಕಬಾರದು. ಎಂದು ಹೈಕೋರ್ಟ್ ಮಹತ್ವದ ಷರತ್ತುಗಳನ್ನು ವಿಧಿಸಿ ಮಧ್ಯಂತರ ಆದೇಶ ಹೊರಡಿಸಿದೆ. ಅಲ್ಲದೇ ದತ್ತಾಂಶದ ಗೌಪ್ಯತೆ ಸಂಬಂಧ ಪ್ರಮಾಣಪತ್ರ ಸಲ್ಲಿಸಲು ಹಿಂದುಳಿದ ವರ್ಗಗಳ ಆಯೋಗಕ್ಕೆ ಹೈಕೋರ್ಟ್ ಸೂಚನೆ ನೀಡಿ ಮುಂದಿನ ವಿಚಾರಣೆಯನ್ನು ಡಿಸೆಂಬರ್ 2ನೇ ವಾರಕ್ಕೆ ಮುಂದೂಡಿಕೆ ಮಾಡಿದೆ. ಈ ಮೂಲಕ ಸರ್ಕಾರ ನಿರ್ಧಾರ ಮಾಡಿದಂತೆ ಜಾತಿ ಗಣತಿ ಸಮೀಕ್ಷೆ ನಡೆಯಲಿದೆ. ಅರ್ಜಿ ಸಲ್ಲಿಸುದವರಿಗೆ ಕೋರ್ಟ್ ನಿಂದ ನಿರೀಕ್ಷಿತ ಉತ್ತರ ಸಿಕ್ಕಂತೆ ಆಗಿಲ್ಲ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್