Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಹೈಕೋರ್ಟ್ ಶಾಕ್; ವಚನಾನಂದ ಶ್ರೀಗಳಿಗೆ ಹಿನ್ನಡೆ

---Advertisement---

 ದಾವಣಗೆರೆ ಜಿಲ್ಲೆಯ ಹರಿಹರ ಪಂಚಮಸಾಲಿ ಗುರುಪೀಠದ ವಚನಾನಂದ ಶ್ರೀಗಳ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರಿಗೆ ನೀಡಲಾಗಿದ್ದ ನಿರೀಕ್ಷಣಾ ಜಾಮೀನನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ.ಪ್ರಕರಣದ ಸಂತ್ರಸ್ತ ಬಾಲಕನ ತಾಯಿ, ವಚನಾನಂದ ಶ್ರೀಗಳಿಗೆ ನೀಡಲಾಗಿದ್ದ ನಿರೀಕ್ಷಣಾ ಜಾಮೀನನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ, ನಿರೀಕ್ಷಣಾ ಜಾಮೀನು ಮಂಜೂರು ಮಾಡಲಾದ ಪ್ರಕ್ರಿಯೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದೆ.

ಪೋಕ್ಸೋ ಪ್ರಕರಣದ ದೂರು ದಾಖಲಾಗುವ ಒಂದು ವಾರಕ್ಕೂ ಮುನ್ನವೇ ನಿರೀಕ್ಷಣಾ ಜಾಮೀನು ನೀಡಲಾಗಿರುವುದು ಕಾನೂನುಬದ್ಧವಾಗಿ ಸಮಂಜಸವಲ್ಲ ಎಂದು ಪೀಠ ಅಭಿಪ್ರಾಯಪಟ್ಟಿದೆ. ಈ ಹಿನ್ನೆಲೆಯಲ್ಲಿ ವಚನಾನಂದ ಶ್ರೀಗಳಿಗೆ ನೀಡಲಾಗಿದ್ದ ನಿರೀಕ್ಷಣಾ ಜಾಮೀನನ್ನು ರದ್ದುಗೊಳಿಸುವಂತೆ ಆದೇಶಿಸಿದೆ.ಆದರೆ, ವಚನಾನಂದ ಶ್ರೀಗಳಿಗೆ ತಕ್ಷಣದ ಸಂಕಷ್ಟವಾಗದಂತೆ ಹೈಕೋರ್ಟ್ ಮೂರು ವಾರಗಳ ಕಾಲ ನಿರೀಕ್ಷಣಾ ಜಾಮೀನಿನ ರಕ್ಷಣೆಯನ್ನು ಮುಂದುವರಿಸಲು ಅವಕಾಶ ನೀಡಿದೆ. ಈ ಅವಧಿಯಲ್ಲಿ ಅವರು ನಿಯಮಿತ (ರೆಗ್ಯುಲರ್) ಜಾಮೀನಿಗಾಗಿ ಅರ್ಜಿ ಸಲ್ಲಿಸಬಹುದು ಎಂದು ನ್ಯಾಯಾಲಯ ಸೂಚಿಸಿದೆ.

ಹೀಗಾಗಿ ನಿರೀಕ್ಷಣಾ ಜಾಮೀನು ರದ್ದಾದರೂ, ಮುಂದಿನ ಮೂರು ವಾರಗಳ ಕಾಲ ಕಾನೂನುಬದ್ಧ ರಕ್ಷಣೆ ಮುಂದುವರಿಯಲಿದ್ದು, ವಚನಾನಂದ ಶ್ರೀಗಳಿಗೆ ತಾತ್ಕಾಲಿಕ ನೆಮ್ಮದಿ ದೊರೆತಂತಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now