Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಜಾಮೀನು ಸಿಗುವ ನಿರೀಕ್ಷೆಯಲ್ಲಿದ್ದ ವಿನಯ್ ಕುಲಕರ್ಣಿಗೆ ಹೈಕೋರ್ಟ್ ಶಾಕ್..!

---Advertisement---

 

 

ಬೆಂಗಳೂರು: ಕೊಲೆ ಆರೋಪದಲ್ಲಿ ಜೈಲು ಸೇರಿರುವ ಶಾಸಕ ವಿನಯ್ ಕುಲಕರ್ಣಿಗೆ ನಿರಾಸೆಯಾಗಿದೆ. ಹೈಕೋರ್ಟ್ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ. ಧಾರವಾಡದ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಆರೋಪದಲ್ಲಿ ಜೈಲು ಸೇರಿದ್ದಾರೆ. ಈ ಪ್ರಕರಣದಲ್ಲಿ ವಿನಯ್ ಕುಲಕರ್ಣಿ 15ನೇ ಆರೋಪಿಯಾಗಿದ್ದಾರೆ.

 

ಜಾಮೀನಿಗಾಗಿ ಅರ್ಜಿ ಸಲ್ಲಿಕೆ ಮಾಡಿದ್ದರು. ಹೈಕೋರ್ಟ್ ಅರ್ಜಿಯನ್ನು ವಜಾಗೊಳಿಸಿದ್ದು, ಬಳಿಕ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಕೆ ಮಾಡುವುದು ಉತ್ತಮ ಎಂಬ ಅಭಿಪ್ರಾಯ ತಿಳಿಸಿದ್ದಾರೆ. ಸುನಿಲ್ ದತ್ ಯಾದವ್ ಅವರಿದ್ದ ಪೀಠವು ಆದೇಶ ಹೊರಡಿಸಿದೆ. ಈ ಕೇಸ್ ಗೆ ಸಂಬಂಧಿಸಿದಂತೆ 2021ರಲ್ಲಿಯೇ ಜಾಮೀನು ಪಡೆದಿದ್ದರು.

ಇತ್ತೀಚೆಗೆ ಸಾಕ್ಷಗಳಿಗೆ ಬೆದರಿಕೆ ಹಾಕುವ ಮೂಲಕ ಜಾಮೀನು ಷರತ್ತುಗಳನ್ನು ವಿನಯ್ ಕುಲಕರ್ಣಿ ಉಲ್ಲಂಘಿಸಿದ್ದು, ಜಾಮೀನು ರದ್ದುಪಡಿಸುವಂತೆ ಸಿಬಿಐ ಸುಪ್ರೀಂಕೋರ್ಟ್​ ಮೊರೆ ಹೋಗಿತ್ತು. ಬಳಿಕ ಸುಪ್ರೀಂಕೋರ್ಟ್​ ಸಿಬಿಐನ ಸಾಕ್ಷಿಗಳನ್ನ ಪರಿಶೀಲಿಸಿ ವಿನಯ್ ಕುಲಕರ್ಣಿಗೆ ನೀಡಿದ್ದ ಜಾಮೀನು ರದ್ದುಗೊಳಿಸಿ ಆದೇಶ ಹೊರಡಿಸಿತ್ತು. ಈ ಹಿನ್ನೆಲೆಯಲ್ಲಿ ವಿನಯ್ ಕುಲಕರ್ಣಿ ಮತ್ತೆ ಜೈಲಿಗೆ ಹೋಗಬೇಕಾಯ್ತು. ಸದ್ಯ ಬೆಂಗಳೂರಿನ ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನಲ್ಲಿದ್ದಾರೆ. ಇದೀಗ ಹೈಕೋರ್ಟ್​ ಹೇಳಿದಂತೆ ವಿನಯ್ ಕುಲಕರ್ಣಿ ಜಾಮೀನುಗಾಗಿ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಬೇಕು. ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯನಾಗಿದ್ದ ಬಿಜೆಪಿಯ ಯೋಗೇಶ್ ಗೌಡರನ್ನು 2016ರ ಜೂನ್ 15ರಂದು ಧಾರವಾಡದ ಸಪ್ತಪುರದ ಜಿಮ್‌ನಲ್ಲಿ ಹತ್ಯೆ ಮಾಡಲಾಗಿತ್ತು.

ಈ ಘಟನೆಯಲ್ಲಿ 21 ಆರೋಪಿಗಳು ಶಾಮೀಲಾಗಿದ್ದಾರೆ ಎಂಬ ಮಾಹಿತಿ ಇದೆ. ಆರಂಭದಲ್ಲಿ ಸ್ಥಳೀಯ ಪೊಲೀಸರು 6 ಮಂದಿಯನ್ನು ಆರೋಪಿಗಳಾಗಿ ಗುರುತಿಸಿದ್ದರು, ಆದರೆ ಯೋಗೇಶ್‌ ಗೌಡ ಕುಟುಂಬದ ಅರ್ಜಿಯ ಮೇರೆಗೆ ಬಿಜೆಪಿ ಸರ್ಕಾರದಿಂದ ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸಲಾಗಿತ್ತು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...