Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸರ್ಕಾರದ ಟಿಕೆಟ್ ದರ ನಿಗದಿಗೆ ಹೈಕೋರ್ಟ್ ತಡೆ..!

---Advertisement---

ದಶಕಗಳಿಂದಾನೂ ಸಿನಿಮಾಗಳಿಗೆ ಏಕರೂಪ ದರ ನಿಗದಿ ಮಾಡಬೇಕೆಂದು ಹಲವರು ಸಾಕಷ್ಟು ಹೋರಾಟ ಮಾಡಿದ್ದರು. ಆ ಹೋರಾಟದ ಫಲವಾಗಿ ಕಾಂಗ್ರೆಸ್ ಸರ್ಕಾರವೂ ಏಕರೂಪ ದರವನ್ನು ಜಾರಿಗೆ ತಂದಿತ್ತು. ಅಂದ್ರೆ ಎಲ್ಲಾ ಮಲ್ಟಿಪ್ಲೆಕ್ಸ್ ಗಳಲ್ಲೂ ಟಿಕೆಟ್ ದರವನ್ನು 200 ರೂಪಾಯಿಗೆ ನಿಗದಿ ಮಾಡಿತ್ತು. ಆದರೆ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದೆ.

ಕನ್ನಡ ಚಿತ್ರರಂಗದಲ್ಲಿ ಮುಂದಿನ ದಿನಗಳಲ್ಕಿ ದೊಡ್ಡ ದೊಡ್ಡ ಸಿನಿಮಾಗಳೇ ರಿಲೀಸ್ ಆಗ್ತಾ ಇದಾವೆ. ಬಿಗ್ ಬಜೆಟ್ ಸಿನಿಮಾಗಳಲ್ಲಿ ಮೊದಲಿಗೆ ರಿಲೀಸ್ ಆಗ್ತಾ ಇರೋದು ಕಾಂತಾರ ಸಿನಿಮಾ. ಹೊಂಬಾಳೆ ನಿರ್ಮಾಣ ಸಂಸ್ಥೆ ಕೂಡ ಟಿಕೆಟ್ ದರ ಸಂಬಂಧ ಕೋರ್ಟ್ ಮೊರೆ ಹೋಗಿತ್ತು. ವಾದ ಪ್ರತಿವಾದ ಆಲಿಸಿರುವ ಕೋರ್ಟ್ ತಾತ್ಕಾಲಿಕ ತಡೆ ನೀಡಿದೆ. ಸರ್ಕಾರ ತಂದಿದ್ದ ಹೊಸ ಆದೇಶ ಸೆಪ್ಟೆಂಬರ್ 12ರಿಂದ ಜಾರಿಗೆ ಬಂದಿತ್ತು. ಆದರೆ ಆದೇಶ ಜಾರಿಯಾಗಿ ಎರಡು ವಾರ ಆಗುವುದರೊಳಗೆ ಆದೇಶಕ್ಕೆ ಬ್ರೇಕ್ ಬಿದ್ದಿದೆ.

ಕಾಂತಾರಾ ಸಿನಿಮಾದ ಮೇಲೆ ದೊಡ್ಡ ಮಟ್ಟದ ನಿರೀಕ್ಷೆಯೇ ಇದೆ. ಸಿನಿ ಪ್ರೇಮಿಗಳು ಕೂಡ ಈ ಚಿತ್ರಕ್ಕಾಗಿ ಕಾಯ್ತಾ ಇದ್ದಾರೆ. ಟಿಕೆಟ್ ದರ ಹೆಚ್ಚಿಗೆ ಇದ್ದರು ಈ ಸಿನಿಮಾವನ್ನು ನೋಡುವುದಕ್ಕೆ ಜನ ಬಂದೇ ಬರ್ತಾರೆ‌. ಹೀಗಿರುವಾಗ ಟಿಕೆಟ್ ದರ ಕಡಿಮೆ ಇದ್ದರೆ ಹೆಚ್ಚಿನ ಕಲೆಕ್ಷನ್ ಆಗುವುದಿಲ್ಲ ಅನ್ನೋದು ಹೊಂಬಾಳೆ ಸಂಸ್ಥೆಯವರಿಗೂ ಗೊತ್ತು. ಹೀಗಾಗಿಯೇ ಮಲ್ಟಿಪ್ಲೆಕ್ಸ್ ಗಳ ಜೊತೆಗೆ ಸೇರಿ, ಹೊಂಬಾಳೆ ಕೂಡ ಅರ್ಜಿಯೊಂದನ್ನ ಹಾಕಿತ್ತು. ಅರ್ಜಿ ವಿಚಾರಣೆಯನ್ನು ನಡೆಸಿದ ಹೈಕೋರ್ಟ್, ರಾಜ್ಯ ಸರ್ಕಾರ ನೀಡಿದ ಆದೇಶಕ್ಕೆ ಮಧ್ಯಂತರ ತಡೆ ನೀಡಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now