Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರೈತರ ಆದಾಯ ದ್ವಿಗುಣಗೊಳಿಸಲು ಉನ್ನತಮಟ್ಟದ ಸಮಿತಿ: ಬಿ ಸಿ ಪಾಟೀಲ್

Facebook
Twitter
Telegram
WhatsApp

ಬೆಂಗಳೂರು: 2023ರ ವೇಳೆಗೆ ರಾಜ್ಯದಲ್ಲಿ ರೈತರ ಆದಾಯ ದ್ವಿಗುಣಗೊಳಿಸಲು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು ಮತ್ತು ಅಭಿವೃದ್ಧಿ ಆಯುಕ್ತರ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಮಿತಿಯನ್ನು ರಚಿಸಲಾಗಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದರು. ಬೆಂಗಳೂರಿನ‌ ಜಿಕೆವಿಕೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ರೈತರ ಆದಾಯ ದ್ವಿಗುಣಗೊಳಿಸುವ ಕುರಿತು ಸಮಗ್ರ ಕೃಷಿ ಪದ್ಯತೆಯ ವಿಸ್ತರಣೆ ಹಾಗೂ ಜನಪ್ರಿಯತ ಕಾರ್ಯಕ್ರಮವನ್ನು ಅಳವಡಿಸಲು ಆರ್‌ಕೆವಿವೈ ಯೋಜನೆಯಡಿ ರೂ 72‌34 ಕೋಟಿಗಳ ಅನುದಾನವನ್ನು ಒದಗಿಸಲಾಗಿದ್ದು ಮುಂಬರುವ 2 ವರ್ಷಗಳಲ್ಲಿ ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ ಸಮಗ್ರ ಕೃಷಿ ಪದ್ಧತಿಯ ಮಾದರಿಯನ್ನು ಅನುಷ್ಠಾನಗೊಳಿಸಲಾಗುತ್ತಿದೆ.

ಈ ಬಗ್ಗೆ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ರೈತರ ಆದಾಯ ದ್ವಿಗುಣಗೊಳಿಸುವ ಕುರಿತು ನಡೆದ ಸಭೆಯಲ್ಲಿ ಚರ್ಚಿಸಲಾಗಿದೆ.ಕೃಷಿ ಮೂಲಭೂತಸೌಕರ್ಯ ನಿಧಿ ಯೋಜನೆಯಡಿಯಲ್ಲಿ ಕೋಯ್ಲೋತ್ತರ ನಿರ್ವಹಣೆಗಾಗಿ ಮೂಲಭೂತ ಸೌಕರ್ಯಗಳನ್ನು ಸೃಷ್ಟಿಸಲು ಮತ್ತು ಸಾಮೂಹಿಕ ಕೃಷಿ ಆಸ್ತಿಯನ್ನು ಸೃಷ್ಟಿಸಲು ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲದ ಬಡ್ಡಿಗೆ ಶೇ . 3 ಸಹಾಯಧನ ನೀಡಲಾಗುವುದು . ಈ ಸಂಬಂಧ ಫಲಾನುಭವಿಗಳು ಯೋಜನೆಯ ಪ್ರಯೋಜನ ಪಡೆಯಲು ಅರ್ಹ ಫಲಾನುಭವಿಗಳು ಪ್ರಸ್ತಾವನೆಯನ್ನು ನೇರವಾಗಿ ಕೇಂದ್ರ ಸರ್ಕಾರದ ( AIF ) ಪೋರ್ಟಲ್ ನಲ್ಲಿ ಅಪಲೋಡ್ ಮಾಡಬೇಕು ಅಥವಾ ಸಂಬಂಧಿಸಿದ ಬ್ಯಾಂಕ್ ಅಧಿಕಾರಿಗಳನ್ನು ಸಂಪರ್ಕಿಸಬೇಕೆಂದು ಎಂದರು.

2021 ಏಪ್ರಿಲ್ 1ರಿಂದ ಸೆ.30ರವರೆಗೆ ಕೃಷಿ ವಿಚಕ್ಷಣಾದಳ 1394 ಕ್ವಿಂಟಾಲ್ ಪ್ರಮಾಣದ ರೂ .415.78 ಲಕ್ಷ ಮೌಲ್ಯದ ಬಿತ್ತನೆ ಬೀಜಗಳನ್ನು ಜಪ್ತಿ ಮಾಡಿದ್ದು,8039 ಟನ್ ಪ್ರಮಾಣದ ರೂ .145.32 ಲಕ್ಷ ರೂ. ಮೌಲ್ಯದ ರಸಗೊಬ್ಬರಗಳನ್ನು 5724 ಮತ್ತು 4592 ಕೆ.ಜಿ ಪ್ರಮಾಣದ ರೂ 640 ಲಕ್ಷ ಮೌಲ್ಯದ ಕೀಟನಾಶಕಗಳನ್ನು ಜಪ್ತಿ ಮಾಡಲಾಗಿದೆ. ಒಟ್ಟಾರೆಯಾಗಿ 2021-22 ನೇ ಸಾಲಿನಲ್ಲಿ ರೂ 62615 ಲಕ್ಷ ಮೌಲ್ಯದ ವಿವಿಧ ಬಿತ್ತನೆ ಬೀಜ ರಸಗೊಬ್ಬರ ಹಾಗೂ ಕೀಟನಾಶಕಗಳನ್ನು ವಿವಿಧ ಜಿಲ್ಲೆಗಳಲ್ಲಿ ಒಪ್ತಿ ಮಾಡಲಾಗಿದೆ ಎಂದು ಹೇಳಿದರು

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮೋದಿ ನೀಡಿದ ಭರವಸೆಗಳನ್ನು ಈಡೇರಿಸಿಲ್ಲ : ಮುಖ್ಯಮಂತ್ರಿ ಸಿದ್ದರಾಮಯ್ಯ

  ಬೀದರ್, ಏಪ್ರಿಲ್ 25: ಹುಬ್ಬಳಿಯ ನೇಹಾ ಹೀರೆಮಠ ಕೊಲೆ ಪ್ರಕರಣವನ್ನು ಸರ್ಕಾರ ತೀವ್ರವಾಗಿ ಖಂಡಿಸುತ್ತದೆ ಹಾಗೂ ಆರೋಪಿಗೆ ಘೋರ ಶಿಕ್ಷೆ ವಿಧಿಸಲು ಸಿಐಡಿ ತನಿಖೆ ಚುರುಕುಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು

ಅಬ್ಬಬ್ಬಾ.. ಐಫೋನ್ ಜಸ್ಟ್ 35 Thousand.. ಈ ಆಫರ್ ಎಂಡ್ ಆಗೋದು ಯಾವಾಗ..?

ಈಗಂತು ಯಾರ ಕೈನಲ್ಲಿ ನೋಡಿದರು ಐಫೋನ್ ಗಳದ್ದೇ ಹಬ್ಬ. ಹಣ ಜಾಸ್ತಿ ಆದ್ರೂ ಐಫೋನ್ ಇರಲೇಬೇಕು ಅಂತಾರೆ. ಅದರಲ್ಲೂ ಐಫೋನ್ ತರಹೇವಾರಿ ಮಾಡೆಲ್ ಗಳನ್ನ ರಿಲೀಸ್ ಮಾಡ್ತಾ ಇರುತ್ತೆ. ಆದ್ರೆ ಐಫೋನ್ ಪ್ರಿಯರಿಗಾಗಿಯೇ ಬಿಗ್ಗೆಸ್ಟ್

Watermelon vs Muskmelon : ಕಲ್ಲಂಗಡಿ vs ಕರ್ಬೂಜ |  ಬೇಸಿಗೆಯಲ್ಲಿ ಆರೋಗ್ಯಕ್ಕೆ ಯಾವುದು ಉತ್ತಮ ?

  ಸುದ್ದಿಒನ್ : ಕಲ್ಲಂಗಡಿ ಮತ್ತು ಕರ್ಬೂಜ ಎರಡೂ ಬೇಸಿಗೆಯಲ್ಲಿ ಬಹಳ ಜನಪ್ರಿಯವಾದ ಹಣ್ಣುಗಳಾಗಿವೆ.  ಎರಡನ್ನೂ ಇಷ್ಟಪಡುವ ಅನೇಕ ಜನರಿದ್ದಾರೆ. ಆದರೆ ಈಗ ಇವೆರಡರಲ್ಲಿ ಯಾವುದು ಆರೋಗ್ಯಕ್ಕೆ ಒಳ್ಳೆಯದು. ಅದರ ಬಗ್ಗೆ ತಿಳಿದುಕೊಳ್ಳೋಣ. ಕಲ್ಲಂಗಡಿ

error: Content is protected !!