ಬೆಂಗಳೂರು: 2023ರ ವೇಳೆಗೆ ರಾಜ್ಯದಲ್ಲಿ ರೈತರ ಆದಾಯ ದ್ವಿಗುಣಗೊಳಿಸಲು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು ಮತ್ತು ಅಭಿವೃದ್ಧಿ ಆಯುಕ್ತರ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಮಿತಿಯನ್ನು ರಚಿಸಲಾಗಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದರು. ಬೆಂಗಳೂರಿನ ಜಿಕೆವಿಕೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ರೈತರ ಆದಾಯ ದ್ವಿಗುಣಗೊಳಿಸುವ ಕುರಿತು ಸಮಗ್ರ ಕೃಷಿ ಪದ್ಯತೆಯ ವಿಸ್ತರಣೆ ಹಾಗೂ ಜನಪ್ರಿಯತ ಕಾರ್ಯಕ್ರಮವನ್ನು ಅಳವಡಿಸಲು ಆರ್‌ಕೆವಿವೈ ಯೋಜನೆಯಡಿ ರೂ 7234 ಕೋಟಿಗಳ ಅನುದಾನವನ್ನು ಒದಗಿಸಲಾಗಿದ್ದು ಮುಂಬರುವ 2 ವರ್ಷಗಳಲ್ಲಿ ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ ಸಮಗ್ರ ಕೃಷಿ ಪದ್ಧತಿಯ ಮಾದರಿಯನ್ನು ಅನುಷ್ಠಾನಗೊಳಿಸಲಾಗುತ್ತಿದೆ.
ಈ ಬಗ್ಗೆ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ರೈತರ ಆದಾಯ ದ್ವಿಗುಣಗೊಳಿಸುವ ಕುರಿತು ನಡೆದ ಸಭೆಯಲ್ಲಿ ಚರ್ಚಿಸಲಾಗಿದೆ.ಕೃಷಿ ಮೂಲಭೂತಸೌಕರ್ಯ ನಿಧಿ ಯೋಜನೆಯಡಿಯಲ್ಲಿ ಕೋಯ್ಲೋತ್ತರ ನಿರ್ವಹಣೆಗಾಗಿ ಮೂಲಭೂತ ಸೌಕರ್ಯಗಳನ್ನು ಸೃಷ್ಟಿಸಲು ಮತ್ತು ಸಾಮೂಹಿಕ ಕೃಷಿ ಆಸ್ತಿಯನ್ನು ಸೃಷ್ಟಿಸಲು ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲದ ಬಡ್ಡಿಗೆ ಶೇ . 3 ಸಹಾಯಧನ ನೀಡಲಾಗುವುದು . ಈ ಸಂಬಂಧ ಫಲಾನುಭವಿಗಳು ಯೋಜನೆಯ ಪ್ರಯೋಜನ ಪಡೆಯಲು ಅರ್ಹ ಫಲಾನುಭವಿಗಳು ಪ್ರಸ್ತಾವನೆಯನ್ನು ನೇರವಾಗಿ ಕೇಂದ್ರ ಸರ್ಕಾರದ ( AIF ) ಪೋರ್ಟಲ್ ನಲ್ಲಿ ಅಪಲೋಡ್ ಮಾಡಬೇಕು ಅಥವಾ ಸಂಬಂಧಿಸಿದ ಬ್ಯಾಂಕ್ ಅಧಿಕಾರಿಗಳನ್ನು ಸಂಪರ್ಕಿಸಬೇಕೆಂದು ಎಂದರು.
2021 ಏಪ್ರಿಲ್ 1ರಿಂದ ಸೆ.30ರವರೆಗೆ ಕೃಷಿ ವಿಚಕ್ಷಣಾದಳ 1394 ಕ್ವಿಂಟಾಲ್ ಪ್ರಮಾಣದ ರೂ .415.78 ಲಕ್ಷ ಮೌಲ್ಯದ ಬಿತ್ತನೆ ಬೀಜಗಳನ್ನು ಜಪ್ತಿ ಮಾಡಿದ್ದು,8039 ಟನ್ ಪ್ರಮಾಣದ ರೂ .145.32 ಲಕ್ಷ ರೂ. ಮೌಲ್ಯದ ರಸಗೊಬ್ಬರಗಳನ್ನು 5724 ಮತ್ತು 4592 ಕೆ.ಜಿ ಪ್ರಮಾಣದ ರೂ 640 ಲಕ್ಷ ಮೌಲ್ಯದ ಕೀಟನಾಶಕಗಳನ್ನು ಜಪ್ತಿ ಮಾಡಲಾಗಿದೆ. ಒಟ್ಟಾರೆಯಾಗಿ 2021-22 ನೇ ಸಾಲಿನಲ್ಲಿ ರೂ 62615 ಲಕ್ಷ ಮೌಲ್ಯದ ವಿವಿಧ ಬಿತ್ತನೆ ಬೀಜ ರಸಗೊಬ್ಬರ ಹಾಗೂ ಕೀಟನಾಶಕಗಳನ್ನು ವಿವಿಧ ಜಿಲ್ಲೆಗಳಲ್ಲಿ ಒಪ್ತಿ ಮಾಡಲಾಗಿದೆ ಎಂದು ಹೇಳಿದರು
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ,ಫೆಬ್ರವರಿ. 07…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…
ಚಿತ್ರದುರ್ಗ.ಫೆ.07: ವಿದ್ಯಾರ್ಥಿಗಳು ತಮ್ಮ ಶಿಕ್ಷಣದ ಜತೆಗೆ ದೇಶದ, ರಾಜ್ಯದ ಸಾಂಸ್ಕøತಿಕ ರಾಯಬಾರಿಗಳಾಗಿ ಕಲೆ, ಸಂಸ್ಕøತಿಯನ್ನು ಮುಂದಿನ ಪೀಳಿಗೆಗೆ ಕೊಂಡ್ಯೊಯುವ ಕೆಲಸ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಶಿಕ್ಷಣ ಇಲಾಖೆಗೆ ಈಗಾಗಲೇ 13 ಸಾವಿರ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗಿದ್ದು, ಹೊಸದಾಗಿ 15…
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…