ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಹೆಚ್ಚು ಸಿಜೇರಿಯನ್ ಹೆರಿಗೆಗಳು : ವರದಿ ಕೇಳಿದ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರು

ಚಿತ್ರದುರ್ಗ. ಮಾರ್ಚ್ 27: ರಾಜ್ಯ ಮಾನವ ಹಕ್ಕುಗಳ ಈ ಹಿಂದಿನ ಅಧ್ಯಕ್ಷರು ಹಾಗೂ ಸದಸ್ಯರ ಅವಧಿ ಫೆಬ್ರವರಿ 2023 ಅಂತ್ಯವಾಗಿತ್ತು. ವಿಧಾನ ಸಭೆ ಸಾರ್ವತ್ರಿಕ ಚುನಾವಣೆ ಬಳಿಕ ಅಸ್ತಿತ್ವಕ್ಕೆ ಬಂದ ಹೊಸ ಸರ್ಕಾರ 2023 ನವೆಂಬರ್ ಮಾಹೆಯಲ್ಲಿ ಮಾನವ ಹಕ್ಕುಗಳ ಆಯೋಗಕ್ಕೆ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಿದ್ದು, ಅಂದಿನಿಂದ ಆಯೋಗವು ದೈನಂದಿನ ಕಾರ್ಯಗಳನ್ನು ನಿರ್ವಹಿಸುತ್ತಿದೆ. ಆಯೋಗದಲ್ಲಿ ಬಾಕಿ ಉಳಿದಿದ್ದ ಹಾಗೂ ಹೊಸದಾಗಿ ಸಲ್ಲಿಕೆಯಾದ ಪ್ರಕರಣಗಳೂ ಸೇರಿದಂತೆ ಇದುವರೆಗೂ 12,000ಕ್ಕೂ ಅಧಿಕ ಪ್ರಕರಣಗಳನ್ನು ವಿಲೇವಾರಿ ಮಾಡಲಾಗಿದೆ. ಇನ್ನೂ 2900ಕ್ಕೂ ಹೆಚ್ಚು ಪ್ರಕರಣಗಳ ಇತ್ಯರ್ಥ ಬಾಕಿಯಿದೆ ಎಂದು ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಟಿ.ಶ್ಯಾಮ್ ಭಟ್ ಅವರು ಹೇಳಿದರು.

 

ಗುರುವಾರ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಏರ್ಪಡಿಸಿದ್ದ ಪತ್ರಿಕಾಗೋಷ್ಠಿ ಉದ್ದೇಶಿಸಿ ಅವರು ಮಾತನಾಡಿದರು.

ನಿವೃತ್ತ ನ್ಯಾಯಮೂರ್ತಿ ಎಲ್.ನಾರಾಯಣಸ್ವಾಮಿ ಅವರನ್ನು ರಾಜ್ಯ ಸರ್ಕಾಕ್ಕೆ ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ಅಧ್ಯಕ್ಷರನ್ನಾಗಿ ನೇಮಿಸಿತ್ತು. ಕೇಂದ್ರ ಸರ್ಕಾರ ಹೊಸದಾಗಿ ರಚಿಸಿದ ಲೋಕಪಾಲ್ ಸಂಸ್ಥೆಗೆ ಇವರನ್ನು ಸದಸ್ಯರನ್ನಾಗಿ ನೇಮಿಸಿದ ಕಾರಣ, ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರ ಹುದ್ದೆಯ ಹಂಗಾಮಿ ಅಧ್ಯಕ್ಷನಾಗಿ ನಾನು ಕರ್ತವ್ಯ ನಿರ್ವಹಿಸುತ್ತಿದ್ದೇನೆ.  ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಆಯೋಗದಲ್ಲಿ ದಾಖಲಾದ ಪ್ರಕರಣಗಳ ವಿಚಾರಣೆಗೆ ಅಧಿಕಾರಿಗಳು ಹಾಗೂ ಸಾರ್ವಜನಿಕರು ಬೆಂಗಳೂರಿಗೆ ಅಲೆಯುವುದನ್ನು ತಪ್ಪಿಸಲು ಆಯೋಗವೇ ಜಿಲ್ಲೆಗಳಿಗೆ ಭೇಟಿ ನೀಡುತ್ತಿದ್ದು, ಈಗಾಗಲೆ 18 ಜಿಲ್ಲೆಗಳಿಗೆ ಭೇಟಿ ನೀಡಲಾಗಿದೆ. ಜಿಲ್ಲಾ ಹಂತದಲ್ಲಿಯೇ ಪ್ರಕರಣಗಳ ವಿಚಾರಣೆ ಹಾಗೂ ವಿಲೇವಾರಿ ಕಾರ್ಯ ಮಾಡಲಾಗುತ್ತಿದೆ. ಆಯೋಗಕ್ಕೆ ಹೆಚ್ಚಿನ ಸೌಕರ್ಯ ನೀಡುವಲ್ಲಿ ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗುವುದು ಎಂದರು.

ಆಯೋಗಕ್ಕೆ ಸಾರ್ವಜನಿಕರು ಸ್ವತಃ ಆಗಮಿಸಿ ದೂರುಗಳನ್ನು ಸಲ್ಲಿಸಬಹುದು.  ಇಲ್ಲವಾದರೆ ಆನ್‍ಲೈನ್ ಅಥವಾ ರಿಜಿಸ್ಟರ್ ಅಂಚೆ ಮೂಲಕವೂ ದೂರು ಸಲ್ಲಿಸಬಹುದಾಗಿದೆ. ಇಂದು ಚಿತ್ರದುರ್ಗ ನಗರದ ಜಿಲ್ಲಾಸ್ಪತ್ರೆ, ವಿದ್ಯಾರ್ಥಿ ನಿಲಯ, ಬಸ್ ಸ್ಟಾಂಡ್ ಹಾಗೂ ಕಾರಗೃಹ ಸೇರಿದಂತೆ 8 ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇವೆ. ಸಣ್ಣಪುಟ್ಟ ಲೋಪದೋಷಗಳನ್ನು ಕಂಡು ಬಂದಿದ್ದು ಇವುಗಳನ್ನು ಸರಿಪಡಿಸಿಕೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಆಯೋಗದ ಅಧ್ಯಕ್ಷ ಟಿ.ಶ್ಯಾಮ್ ಭಟ್ ಹೇಳಿದರು.

ಜಿಲ್ಲೆಯಲ್ಲಿ 13 ಪ್ರಕರಣ ಇತ್ಯರ್ಥ ಬಾಕಿ:
ಚಿತ್ರದುರ್ಗ ಜಿಲ್ಲೆಗೆ ಸಂಬಂಧಿಸಿದಂತೆ ಮಾನವ ಹಕ್ಕುಗಳ ಆಯೋಗಕ್ಕೆ ಒಟ್ಟು 13 ಪ್ರಕರಣಗಳು ಸಲ್ಲಿಕೆಯಾಗಿವೆ. ಇವುಗಳಲ್ಲಿ 4 ಪ್ರಕರಣಗಳಿಗೆ ಸಂಬಂಧಿಸಿದಂತೆ ವರದಿಗಳನ್ನು ಅಧಿಕಾರಿಗಳಿಂದ ಪಡೆದುಕೊಳ್ಳಲಾಗಿದೆ. ಶೀಘ್ರವೇ ಪ್ರಕರಣಗಳನ್ನು ಇತ್ಯರ್ಥ ಪಡಿಸಲಾಗುವುದು. ಜಿಲ್ಲಾಸ್ಪತ್ರೆಯಲ್ಲಿ ಹೆಚ್ಚು ಸಿಜೇರಿಯನ್ ಹೆರಿಗೆಗಳು ಸಂಭವಿಸುತ್ತಿರುವ ಕುರಿತು ವರದಿ ಪಡೆದುಕೊಳ್ಳುವುದಾಗಿ ಆಯೋಗದ ಅಧ್ಯಕ್ಷ ಟಿ.ಶ್ಯಾಮ್ ಭಟ್ ಹೇಳಿದರು.

 

ಆಯೋಗದ ನ್ಯಾಯಾಂಗದ ಸದಸ್ಯರಾದ ಎಸ್.ಕೆ.ವಂಟಿಗೋಡಿ ಅವರು ಮಾತನಾಡಿ ಆಯೋಗದಿಂದ ಮಾನವ ಹಕ್ಕುಗಳ ಉಲ್ಲಂಘನೆ ನಿಯಂತ್ರಣಕ್ಕೆ ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಗುತ್ತಿದೆ. ನವೆಂಬರ್ 2023 ರಿಂದ ಈಚೆಗೆ ಆಯೋಗದಿಂದ ಇತ್ಯರ್ಥ ಪಡಿಸಿದ ಪ್ರಕರಣಗಳಲ್ಲಿ ಒಟ್ಟು ರೂ.2.40 ಕೋಟಿ ಪರಿಹಾರ ಧನವನ್ನು ಸರ್ಕಾರದಿಂದ ಬಾಧಿತರಿಗೆ ಕೊಡಿಸಲಾಗಿದೆ ಎಂದು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಆಯೋಗದ ಆಪ್ತ ಕಾರ್ಯದರ್ಶಿ ಅರುಣ್ ಪೂಜಾರ್, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಉಪಸ್ಥಿತರಿದ್ದರು.

suddionenews

Recent Posts

ದಾವಣಗೆರೆಯ ಬ್ಯಾಂಕ್ ರಾಬರಿ ಕಥೆ ; 6 ತಿಂಗಳ ಬಳಿಕ ಅಂದರ್ ಆಗಿದ್ದೇಗೆ ಖದೀಮರು..?

ದಾವಣಗೆರೆ; ಕಳ್ಳತನ ಮಾಡಿದ ಕಳ್ಳರು ಸಣ್ಣದಾದ ಯಾವುದಾದರೊಂದು ಸುಳಿವನ್ನ ಬಿಟ್ಟು ಹೋಗಿರುತ್ತಾರೆ. ಅದರಿಂದಾನೇ ತಗಲಾಕಿಕೊಳ್ಳುತ್ತಾರೆ. ಇದೀಗ ದಾವಣಗೆರೆಯಲ್ಲೂ ಅಂಥದ್ದೇ ಘಟನೆಯೊಂದು…

4 hours ago

ಬಳ್ಳಾರಿ ಜಿಲ್ಲೆಯಲ್ಲಿ ಮೆಗಾ ಡೈರಿ ; ರೈತರು – ಕೆಎಂಎಫ್ ಅಧ್ಯಕ್ಷರ ನಡುವೆ ಜಟಾಪಟಿ ಶುರುವಾಗಿದ್ದೇಕೆ..?

ಬಳ್ಳಾರಿ; ಜಿಲ್ಲೆಯಲ್ಲಿ ಸುಮಾರು 100 ಕೋಟಿ ವೆಚ್ಚದಲ್ಲಿ ಮೆಗಾ ಡೈರಿ ಸ್ಥಾಪನೆ ಮಾಡಲಾಗುವುದು ಎಂದು ಅಂದಿನ ಸಿಎಂ ಆಗಿದ್ದ ಬಸವರಾಜ್…

4 hours ago

ಚಿತ್ರದುರ್ಗದಲ್ಲಿ ಪವಿತ್ರ ರಂಜಾನ್ ಹಬ್ಬ ಆಚರಣೆ

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 31 : ದೇಶಾದ್ಯಂತ ಇಂದು ಸೋಮವಾರ ಮುಸಲ್ಮಾನರ ಪವಿತ್ರ ಹಬ್ಬ ಈದ್ ಉಲ್ ಫಿತರ್(ರಂಜಾನ್) ಆಚರಿಸಲಾಗುತ್ತಿದೆ.…

6 hours ago

ದೆಹಲಿಗೆ ತೆರಳುವ ಮುನ್ನ ಸಿಎಂ – ಡಿಸಿಎಂ ಭೇಟಿ ; ಏನೆಲ್ಲಾ ಚರ್ಚೆ ಆಯ್ತು.?

ಬೆಂಗಳೂರು; ರಾಜ್ಯ ರಾಜಕಾರಣದಲ್ಲಿ ಸದ್ಯಕ್ಕೆ ಹನಿಟ್ರ್ಯಾಪ್ ಪ್ರಜರಣದ್ದೆ ಜೋರು ಸದ್ದು. ಅದರಲ್ಲೂ ಸಚಿವ ಕೆ.ಎನ್.ರಾಜಣ್ಣ ಹೆಸರು ಕೇಳಿ ಬಂದಿದೆ. ಈ…

7 hours ago

ಚಿತ್ರದುರ್ಗ : ನಗರದ ಮಧ್ಯಭಾಗದಲ್ಲಿ ಸಂಭವಿಸಿದ ಅಗ್ನಿ ಅವಘಡ : ಘಟನೆಗೆ ಅಸಲಿ ಕಾರಣವೇನು ಗೊತ್ತಾ ?

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 31: ಆಕಸ್ಮಿಕ ಬೆಂಕಿಯಿಂದಾಗಿ ನಗರದ ಬಿ.ಡಿ. ರಸ್ತೆಯ ವೀರವನಿತೆ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದ (ಎಸ್.ಬಿ.ಐ.…

7 hours ago

ಪ್ರತಿದಿನ ಬಾದಾಮಿ ಹಾಲು ಕುಡಿಯುವುದರಿಂದ ಎಷ್ಟೆಲ್ಲಾ ಆರೋಗ್ಯ ಪ್ರಯೋಜನಗಳಿವೆ ಗೊತ್ತಾ?

  ಸುದ್ದಿಒನ್ ಬಾದಾಮಿ ಹಾಲು ಒಂದು ಆರೋಗ್ಯಕರ ಪಾನೀಯವಾಗಿದ್ದು, ಬಾದಾಮಿಯನ್ನು ನೀರಿನಲ್ಲಿ ನೆನೆಸಿ, ನುಣ್ಣಗೆ ಪುಡಿಮಾಡಿ, ಸೋಸಿ ತಯಾರಿಸಲಾಗುತ್ತದೆ. ಇದು…

9 hours ago