Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಶಿಸ್ತು ಸಂಯಮದಿಂದ ಉನ್ನತ ಯಶಸ್ಸು ಸಾಧಿಸಲು ಸಾಧ್ಯ : ಶ್ರೀಮತಿ ಬಿ.ಎಸ್.ರೇಖಾ

Facebook
Twitter
Telegram
WhatsApp

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್.19  : ವಿದ್ಯಾರ್ಥಿಗಳು ಅಧ್ಯಯನದ ಜೊತೆಗೆ ಶಿಸ್ತು, ಸಂಯಮ ಮತ್ತು ವಿನಯವನ್ನು ಅಳವಡಿಸಿಕೊಂಡಾಗ ಉನ್ನತ ಯಶಸ್ಸನ್ನು ಸಾಧಿಸಲು ಸಾಧ್ಯ ಎಂದು ಚಿತ್ರದುರ್ಗ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರು ಹಾಗು ಎಸ್.ಜೆ.ಎಂ. ವಿದ್ಯಾಪೀಠದ ಆಡಳಿತಾಧಿಕಾರಿಗಳೂ ಆದ ಶ್ರೀಮತಿ ಬಿ.ಎಸ್.ರೇಖಾ ರವರು ಹೇಳಿದರು.

ನಗರದ ಚಂದ್ರವಳ್ಳಿಯ ಎಸ್.ಜೆ.ಎಂ.ಕಾಲೇಜಿನಲ್ಲಿ ಏರ್ಪಡಿಸಿದ್ದ 2023-24 ನೇ ಸಾಲಿನ ಕ್ರೀಡಾ, ಸಾಂಸ್ಕøತಿಕ ರಾ.ಸೇ.ಯೋ. ಎನ್.ಸಿ.ಸಿ. ಹಾಗೂ ವಿವಿಧ ಕೋಶಗಳ ಚಟುವಟಿಕೆಗಳ ಉದ್ಘಾಟನೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ವಿದ್ಯಾರ್ಥಿ ಜೀವನದಲ್ಲಿ ದೈಹಿಕ ಮತ್ತು ಮಾನಸಿಕ ಸದೃಢತೆ ತುಂಬಾ ಮುಖ್ಯ. ವಿದ್ಯಾರ್ಥಿ ಜೀವನದಲ್ಲಿ ಗುರುವಿನ ಪಾತ್ರ ತುಂಬಾ ದೊಡ್ಡದು. ಶಿಲೆಯನ್ನು ಕಲೆಯಾಗಿ ಅರಳಿಸುವ ಶಕ್ತಿಯುಳ್ಳ ಗುರು ವೃಂದವನ್ನು ಧನ್ಯತೆಯ ಭಾವದಿಂದ ಸ್ಮರಿಸೋಣ. ಯಾವಾಗಲೂ ಸದಾಚಾರ ಸನ್ಮಡತೆ, ಸದ್ವಿನಯ, ಉತ್ತಮ ಚಾರಿತ್ರ್ಯ ಹಾಗೂ ಸಕಾರಾತ್ಮಕ ಆಲೋಚನೆಗಳನ್ನು ಬೆಳೆಸಿಕೊಳ್ಳುವ ನಿಟ್ಟಿನಲ್ಲಿ ಪಠ್ಯಕ್ರಮದ ಜೊತೆಗೆ ಸಹಪಠ್ಯ ಚಟುವಟಿಕೆಗಳಲ್ಲಿ ಸಕ್ರೀಯವಾಗಿ ಪಾಲ್ಗೊಳ್ಳುವ ಮೂಲಕ ಉನ್ನತ ಭವಿಷ್ಯವನ್ನು ರೂಪಿಸಿಕೊಳ್ಳಲು ಸಾಧ್ಯ ಎಂದು ಹೇಳಿದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಎಸ್.ಜೆ.ಎಂ. ವಿದ್ಯಾಪೀಠದ ಕಾರ್ಯನಿರ್ವಾಹಕ ಅಧಿಕಾರಿ ಭರತ್ ಕುಮಾರ್ ರವರು ಮಾತನಾಡಿ, ವಿದ್ಯಾರ್ಥಿಗಳಿಗೆ ಕಲಿಯುವುದು ಮಾತ್ರ ಮುಖ್ಯವಲ್ಲ ಕಲಿತದ್ದನ್ನು ಮನನ ಮಾಡಿಕೊಳ್ಳುವುದು ಹಾಗೂ ಸಂಸ್ಕಾರ ಮತ್ತು ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳುವುದು ತುಂಬಾ ಮುಖ್ಯ. ಇಂತಹ ಮೌಲ್ಯಗಳ ಕೊರತೆಯ ಕಾರಣದಿಂದಾಗಿ ನಮ್ಮ ವಿದ್ಯಾರ್ಥಿಗಳು ಮಾನಸಿಕವಾಗಿ ಒತ್ತಡಕ್ಕೆ ಒಳಗಾಗುತ್ತಿದ್ದಾರೆ. ನಮ್ಮ ಪರಂಪರೆಯಲ್ಲಿ ಆಗಿಹೋದ ದಾರ್ಶನಿಕರು ನೀಡಿದ ಮಾರ್ಗದರ್ಶನ, ಬಸವಾದಿ ಶರಣರು ಪ್ರತಿಪಾದಿಸಿದ ಮಾನವೀಯ ಮತ್ತು ಜೀವನ ಮೌಲ್ಯಗಳನ್ನು ನಮ್ಮ ಬದುಕಿನಲ್ಲಿ ಅಳವಡಿಸಿಕೊಂಡಾಗ ಮಾತ್ರ ಇಂತಹ ಒತ್ತಡಗಳಿಂದ ಮುಕ್ತರಾಗಿ ಯಶಸ್ಸು ಕಾಣಲು ಸಾಧ್ಯವಿದೆ. ಪ್ರಸ್ತುತ ಸ್ಪರ್ಧಾತ್ಮಕ ದಿನಗಳಲ್ಲಿ ಪದವಿ ನಂತರ ವಿದ್ಯಾರ್ಥಿಯು ಪರಿಪೂರ್ಣ ವ್ಯಕ್ತಿತ್ವ ಉಳ್ಳವನಾಗಬೇಕೆಂಬ ಸದುದ್ದೇಶದಿಂದ ಅವರಲ್ಲಿ ಸಮ್ಮೋಹನಾ ಕೌಶಲ್ಯ ಹಾಗೂ ನಿರ್ವಹಣಾ ಕೌಶಲ್ಯಗಳ ಕುರಿತ ತರಭೇತಿ ಕಾರ್ಯಕ್ರಮಗಳನ್ನು ಆಯೋಜಿಸುವ ಉದ್ದೇಶ ನಮ್ಮ ವಿದ್ಯಾಪೀಠಕ್ಕಿದೆ ಎಂದು ಹೇಳಿದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಎಸ್.ಜೆ.ಎಂ. ವಿದ್ಯಾಪೀಠದ ಮಾನವ ಸಂಪನ್ಮೂಲ ನಿರ್ದೇಶಕರಾದ ಶ್ರೀಮತಿ ವಿಜಯ. ಕೆ. ಮಠ್ ರವರು ಮಾತನಾಡಿ, ನಮ್ಮ ಜೀವನದಲ್ಲಿ ಒಳ್ಳೆಯದು ಮತ್ತು ಕೆಟ್ಟದ್ದು ಎರಡೂ ಇದೆ.  ಜೀವನದಲ್ಲಿ ಒಳ್ಳೆಯದನ್ನು ಪೋಷಿಸಿದರೆ ಒಳ್ಳೆಯದೇ ಆಗುತ್ತದೆ. ಆದ್ದರಿಂದ ಯಾವುದು ನಮ್ಮ ವ್ಯಕ್ತಿತ್ವವನ್ನು ಉದ್ದರಿಸುವುದೋ ಅದನ್ನು ನಾವು ಅಳವಡಿಸಿಕೊಳ್ಳಬೇಕು.

ನಿರಂತರವಾದ ಆತ್ಮಾವಲೋಕನದಿಂದ ಸರಿತಪ್ಪುಗಳನ್ನು ಅರ್ಥಮಾಡಿಕೊಳ್ಳುವ ಜ್ಞಾನವನ್ನು ಬೆಳೆಸಿಕೊಂಡು ಸ್ಪಷ್ಟ ಗುರಿ ಮತ್ತು ಸ್ಪಷ್ಟ ತೀರ್ಮಾನವನ್ನು ತೆಗೆದುಕೊಂಡಾಗ ನಮ್ಮ ಬದುಕು ಹಸನಾಗುತ್ತದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕಳೆದ ಸಾಲಿನ ಬಿ.ಎ. ಬಿ.ಎಸ್ಸಿ. ಹಾಗೂ ಬಿ.ಕಾಂ. ತರಗತಿಗಳಲ್ಲಿ ಅತಿ ಹೆಚ್ಚು ಅಂಕ ಗಳಿಸಿ ಕಾಲೇಜಿಗೆ ಕೀರ್ತಿ ತಂದ ವಿದ್ಯಾರ್ಥಿಗಳಾದ ಕು. ಸುಜಾತ, ಪೂಜಾ, ನಂದಿತ, ಅಂಬಿಕ ಮತ್ತು ವಿಶ್ವಾರಾಧ್ಯ ರೆಡ್ಡಿ ಇವರನ್ನು ಮಹಾವಿದ್ಯಾಲಯದ ಪರವಾಗಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಐ.ಕ್ಯೂ.ಎ.ಸಿ. ಸಂಯೋಜಕರಾದ ಡಾ. ಎ. ಹರ್ಷವರ್ಧನ್ ಹಾಗೂ ಬೋಧಕ, ಬೋಧಕೇತರ ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.

ಅಂತಿಮ ಬಿ.ಎಸ್ಸಿ. ವಿದ್ಯಾರ್ಥಿನಿ ಕು. ಕಾವ್ಯಾ.ಎಸ್. ಇವರ ವಚನ ಪ್ರಾರ್ಥನೆಯೊಂದಿಗೆ ಆರಂಭಗೊಂಡ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಚಾರ್ಯರಾದ ಡಾ. ಎಸ್.ಹೆಚ್. ಪಂಚಾಕ್ಷರಿ ಸ್ವಾಗತಿಸಿದರು. ಪ್ರೊ. ಆರ್.ಕೆ. ಕೇದಾರನಾಥ್ ವಂದಿಸಿದರು. ಅಂತಿಮ ಬಿ.ಎ. ವಿದ್ಯಾರ್ಥಿನಿ ಕು. ಲೀಲಾ ಕಾರ್ಯಕ್ರಮ ನಿರೂಪಿಸಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮಲಗುವ ಮುನ್ನ ಬಾಳೆಹಣ್ಣು ತಿಂದರೆ ಏನಾಗುತ್ತೆ ಗೊತ್ತಾ..?

  ಸುದ್ದಿಒನ್ : ಬಾಳೆಹಣ್ಣಿನಲ್ಲಿ ಅನೇಕ ಪೋಷಕಾಂಶಗಳು ಅಡಗಿವೆ. ಇವು ದೇಹಕ್ಕೆ ತುಂಬಾ ಒಳ್ಳೆಯದು. ಅದಕ್ಕಾಗಿಯೇ ಸದಾ ಲಭ್ಯವಿರುವ ಬಾಳೆಹಣ್ಣನ್ನು ತಿನ್ನಲು ತಜ್ಞರು ಸಲಹೆ ನೀಡುತ್ತಾರೆ. ಬಾಳೆ ಹಣ್ಣಿನಲ್ಲಿ ಪೊಟ್ಯಾಸಿಯಮ್, ವಿಟಮಿನ್ ಸಿ, ವಿಟಮಿನ್

ಈ ರಾಶಿಯವರು ಏಕಾಂಗಿ ಬದುಕಲು ಇಷ್ಟಪಡುವರು!

ಈ ರಾಶಿಯವರು ಏಕಾಂಗಿ ಬದುಕಲು ಇಷ್ಟಪಡುವರು! ಈ ರಾಶಿಯವರು ದೊಡ್ಡ ಮಹಾತ್ಮಾಕಾಂಕ್ಷೆ ಹೊಂದಿರುವರು, ಸೋಮವಾರ- ರಾಶಿ ಭವಿಷ್ಯ ಮೇ-20,2024 ಸೂರ್ಯೋದಯ: 05:46, ಸೂರ್ಯಾಸಸ್ತ : 06:38 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ

ಶಿಕ್ಷಕರ ಹಿತರಕ್ಷಣೆಗೆ ಕೈ ಸರ್ಕಾರ ಬದ್ಧ | ಕೊಟ್ಟ ಮಾತು ತಪ್ಪದ ಸಿಎಂ ಸಿದ್ದು :  ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್

ಚಿತ್ರದುರ್ಗ, ಮೇ 19 :  ಶಿಕ್ಷಕರ ಹಿತ ಕಾಯುವಲ್ಲಿ ಕಾಂಗ್ರೆಸ್ ಸರ್ಕಾರದ ಬದ್ಧತೆ, ದೃಢ ನಿರ್ಧಾರ ಪ್ರಶ್ನಾತೀತ ಎಂದು ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಹೇಳಿದರು. ತಾಲೂಕಿನ ಸೀಬಾರದಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್

error: Content is protected !!