Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮಕ್ಕಳ ಹಿತದೃಷ್ಟಿಯಿಂದ ಹಿಜಾಬ್ ನಿಷೇಧ ವಾಪಸ್: ಸಚಿವ ಮಧು ಬಂಗಾರಪ್ಪ

---Advertisement---

ಸುದ್ದಿಒನ್,ಬೆಂಗಳೂರು,ಮೇ.14: ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಧರಿಸುವುದಕ್ಕೆ ವಿಧಿಸಲಾಗಿದ್ದ ನಿಷೇಧವನ್ನು ಹಿಂಪಡೆದಿರುವ ಸರ್ಕಾರದ ನಿರ್ಧಾರವನ್ನು ಶಿಕ್ಷಣ ಸಚಿವ ಮಧು ಬಂಗಾರಪ್ಪ ಸಮರ್ಥಿಸಿಕೊಂಡಿದ್ದಾರೆ. ಮಕ್ಕಳ ವಿದ್ಯಾಭ್ಯಾಸ ಮತ್ತು ಹಿತದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆಯೇ ಹೊರತು ಇದರಲ್ಲಿ ರಾಜಕೀಯವಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಪದೇ ಪದೇ ಹಿಜಾಬ್ ವಿಚಾರವನ್ನೇ ಯಾಕೆ ಪ್ರಸ್ತಾಪಿಸುತ್ತೀರಿ? ಬಿಜೆಪಿಯವರು ಮಕ್ಕಳ ವಿದ್ಯಾಭ್ಯಾಸದ ವಿಚಾರದಲ್ಲಿ ರಾಜಕೀಯ ಮಾಡಬಾರದು. ಈ ಹಿಂದೆ ಜನಿವಾರ ಕಟ್ ಮಾಡಿದಾಗ ಇವರಿಗೆ ಕಾಣಿಸಲಿಲ್ಲವೇ? ಕೇವಲ ಒಂದು ಸಮುದಾಯದ ವಿಚಾರ ಬಂದಾಗ ಮಾತ್ರ ಇವರಿಗೆ ಧರ್ಮ ನೆನಪಾಗುತ್ತದೆಯೇ? ಎಂದು ಅವರು ಕಿಡಿಕಾರಿದರು.

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಅತಂತ್ರವಾಗಿದೆ. ಈ ಬಗ್ಗೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನಾಗಲಿ ಅಥವಾ ಬಿಜೆಪಿ ನಾಯಕರನ್ನಾಗಲಿ ಯಾರೂ ಪ್ರಶ್ನಿಸುತ್ತಿಲ್ಲವೇಕೆ?ಆರಂಭದಲ್ಲಿ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳನ್ನು ಟೀಕಿಸಿದ ಬಿಜೆಪಿಯವರು, ಈಗ ಎಲ್ಲೆಡೆ ಅದೇ ಮಾದರಿಯ ಯೋಜನೆಗಳನ್ನು ಜಾರಿ ಮಾಡುತ್ತಿದ್ದಾರೆ ಎಂದು ಲೇವಡಿ ಮಾಡಿದರು.

Join WhatsApp

Join Now

Join Telegram

Join Now